T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಜೂ.12) ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್-8 ಹಂತಕ್ಕೇರಲಿದೆ. ಅತ್ತ ಯುಎಸ್ಎ ತಂಡ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಮುಂದಿನ ಹಂತಕ್ಕೇರಬಹುದು. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸಲು ಉಭಯ ತಂಡಗಳು ಕಠಿಣ ಪೈಪೋಟಿ ನಡೆಸಲಿದೆ.
ಅದರಲ್ಲೂ ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂ ಪಿಚ್ನಲ್ಲಿ ಯಾರು ಗೆಲ್ತಾರೆ ಎಂದು ಊಹಿಸುವುದೇ ಕಷ್ಟ. ಅದರಲ್ಲೂ ಯುಎಸ್ಎ ತಂಡ ಈಗಾಗಲೇ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿದೆ. ಹೀಗಾಗಿ ಬುಧವಾರದ ಪಂದ್ಯ ಕೂಡ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಇನ್ನು ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ…
ಎಷ್ಟು ಗಂಟೆಗೆ ಪಂದ್ಯ ಶುರು?
ಭಾರತ ಮತ್ತು ಯುಎಸ್ಎ ನಡುವಣ ಪಂದ್ಯವು ಬುಧವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ) ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 7.30 ಕ್ಕೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ, ಸ್ಟಾರ್ ನೆಟವರ್ಕ್ನ ಎಲ್ಲಾ ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದೆ.
ಯಾವ ಆ್ಯಪ್ನಲ್ಲಿ ವೀಕ್ಷಿಸಬಹುದು?
ಡಿಸ್ನಿ ಹಾಟ್ ಸ್ಟಾರ್ ಆ್ಯಪ್ನಲ್ಲಿ ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಇನ್ನು ಡಿಸ್ನಿ ಹಾಟ್ ಸ್ಟಾರ್ ವೆಬ್ಸೈಟ್ನಲ್ಲೂ ಪಂದ್ಯದ ಪ್ರಸಾರ ಇರಲಿದ್ದು, ಇದಕ್ಕಾಗಿ ಎಕ್ಸ್ಟ್ರಾ ರಿಚಾರ್ಜ್ ಮಾಡಬೇಕಾಗುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್
ಯುಎಸ್ಎ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್, ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್‌ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.
Published On - 6:35 pm, Tue, 11 June 24