India vs West In The 2nd ODI: ರಿಷಭ್ ಪಂತ್ ಆರಂಭಿಕನಾಗಿ ಕಣಕ್ಕಿಳಿಯಲು ಇದುವೇ ಕಾರಣ
India vs West In The 2nd ODI: ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕವನ್ನು ಕೆಎಲ್ ರಾಹುಲ್ ಮೂಲಕ ಬಲಪಡಿಸಬಹುದು. ಏಕೆಂದರೆ ರಾಹುಲ್ ಸಂಯಮದಿಂದ ಬ್ಯಾಟ್ ಬೀಸುವ ಆಟಗಾರ. ಅದರಲ್ಲೂ ಸಂದರ್ಭಕ್ಕೆ ತಕ್ಕಂತೆ ಬ್ಯಾಟಿಂಗ್ ಶೈಲಿ ಬದಲಿಸುತ್ತಾರೆ.
ವೆಸ್ಟ್ ಇಂಡೀಸ್ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ (India vs West In The 2nd ODI) ಭಾರತ ತಂಡವು ಮೊದಲು ಬ್ಯಾಟ್ ಮಾಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಆರಂಭಿಕರಾಗಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದರು. ತಂಡದಲ್ಲಿ ಅನುಭವಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಇದ್ದರೂ, ಪಂತ್ ಯಾಕೆ ಓಪನರ್ ಆಗಿ ಕಣಕ್ಕಿಳಿದರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದಕ್ಕೆ ಸದ್ಯ ಸಿಗುತ್ತಿರುವ ಉತ್ತರ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಪ್ರಯೋಗ. ಟೀಮ್ ಇಂಡಿಯಾ ಮುಂದಿನ ವಿಶ್ವಕಪ್ಗಳನ್ನು ಗಮನದಲ್ಲಿರಿಸಿ ಪ್ರಯೋಗ ಮಾಡಲು ಮುಂದಾಗಿದೆ. ಅದರಂತೆ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭಿಕನನ್ನು ಸಜ್ಜುಗೊಳಿಸಲು ಪ್ಲ್ಯಾನ್ ರೂಪಿಸಿದೆ.
ರಿಷಬ್ ಪಂತ್ ಅವರಲ್ಲೂ ಆಸ್ಟ್ರೇಲಿಯಾ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆ್ಯಡಂ ಗಿಲ್‌ಕ್ರಿಸ್ಟ್ ಅವರಲ್ಲಿನ ಸಾಮ್ಯತೆ ಹೆಚ್ಚಿದೆ. ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್‌ಕ್ರಿಸ್ಟ್ ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಆಡಿದ್ದರು. ಪಂತ್ ಕೂಡ ಸ್ಪೋಟಕ ಬ್ಯಾಟಿಂಗ್ ಮೂಲಕ ಹಲವು ಬಾರಿ ಅಬ್ಬರಿಸಿದ್ದಾರೆ. ಹೀಗಾಗಿ ಪಂತ್ ಅವರನ್ನು ಗಿಲ್‌ಕ್ರಿಸ್ಟ್ ಅವರಂತೆ ರೂಪಿಸಲು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಎದುರು ನೋಡುತ್ತಿದೆ.
ಇನ್ನೊಂದೆಡೆ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕವನ್ನು ಕೆಎಲ್ ರಾಹುಲ್ ಮೂಲಕ ಬಲಪಡಿಸಬಹುದು. ಏಕೆಂದರೆ ರಾಹುಲ್ ಸಂಯಮದಿಂದ ಬ್ಯಾಟ್ ಬೀಸುವ ಆಟಗಾರ. ಅದರಲ್ಲೂ ಸಂದರ್ಭಕ್ಕೆ ತಕ್ಕಂತೆ ಬ್ಯಾಟಿಂಗ್ ಶೈಲಿ ಬದಲಿಸುತ್ತಾರೆ. ಆದರೆ ಪಂತ್ ಸ್ಪೋಟಕ ಬ್ಯಾಟಿಂಗ್ಗೆ ಹೆಚ್ಚು ಒತ್ತು ನೀಡುತ್ತಾರೆ. ಹೀಗಾಗಿ ಪವರ್ಪ್ಲೇನ ಸಂಪೂರ್ಣ ಲಾಭ ಪಡೆದುಕೊಳ್ಳಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಇಂತಹದೊಂದು ಪ್ರಯೋಗಕ್ಕೆ ಮುಂದಾಗಿದೆ.
ಟೀಮ್ ಇಂಡಿಯಾದ ಈ ಪ್ರಯೋಗದಲ್ಲಿ ರಿಷಬ್ ಪಂತ್ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕು. ಆದರೆ ಆರಂಭಿಕನಾಗಿ ಸಿಕ್ಕ ಮೊದಲ ಅವಕಾಶದಲ್ಲೇ ಪಂತ್ ವಿಫಲರಾಗಿದ್ದಾರೆ. 34 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ ಕಲೆಹಾಕಿದ್ದು ಕೇವಲ 18 ಮಾತ್ರ. ಹೀಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ನ ಈ ಪ್ರಯೋಗದ ಬಗ್ಗೆ ಟೀಕೆಗಳು ಕೇಳಿ ಬರುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: Yuzvendra Chahal: ವಿಕೆಟ್ಗಳ ಶತಕ ಪೂರೈಸಿದ ಚಹಾಲ್
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!
(India vs West In The 2nd ODI: Why Rishabh Pant Is Opening With Rohit Sharma)