AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies 1st ODI Playing 11: ಭಾರತ ಮೊದಲು ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs West Indies 1st ODI Playing 11: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 22 ಶುಕ್ರವಾರ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿದೆ.

India vs West Indies 1st ODI Playing 11: ಭಾರತ ಮೊದಲು ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್  11 ಹೀಗಿದೆ
IND vs WI 2nd ODI
TV9 Web
| Edited By: |

Updated on:Jul 22, 2022 | 7:21 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ (India and West Indies) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 22 ಶುಕ್ರವಾರ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ವಾಸ್ತವವಾಗಿ, ಸರಣಿಯ ಎಲ್ಲಾ ಮೂರು ಪಂದ್ಯಗಳು ಇದೇ ಮೈದಾನದಲ್ಲಿ ನಡೆಯಲಿವೆ. ಭಾರತ ತಂಡವು ತನ್ನ ಅನೇಕ ಹಿರಿಯ ಆಟಗಾರರಿಲ್ಲದೆ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ತಂಡದ ನಾಯಕತ್ವವನ್ನು ಅನುಭವಿ ಆರಂಭಿಕ ಶಿಖರ್ ಧವನ್ (Shikhar Dhawan) ವಹಿಸಿದ್ದಾರೆ. ವೆಸ್ಟ್ ಇಂಡೀಸ್ ನಾಯಕ ನಿಕೋಲಸ್ ಪೂರನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರವೀಂದ್ರ ಜಡೇಜಾ ಔಟ್

ರವೀಂದ್ರ ಜಡೇಜಾಗೆ ಸಂಬಂಧಿಸಿದಂತೆ ಬಿಸಿಸಿಐ ದೊಡ್ಡ ಅಪ್‌ಡೇಟ್ ನೀಡಿದೆ. ಜಡೇಜಾ ಮೊದಲ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅವರಿಗೆ ಬಲ ಮೊಣಕಾಲಿನ ಗಾಯವಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ
Image
India vs West Indies, 1st ODI: ಧವನ್, ಗಿಲ್, ಶ್ರೇಯಸ್ ಅರ್ಧಶತಕ; ವಿಂಡೀಸ್​ಗೆ 309 ರನ್ ಟಾರ್ಗೆಟ್
Image
ICC: ವಿಕೆಟ್ ಪಡಿ ಪಲ್ಟಿ ಹೊಡಿ; ಸಖತ್ ವೈರಲ್ ಆಗ್ತಿದೆ ಈ ಬೌಲರ್ ವಿಶಿಷ್ಟ ಸಂಭ್ರಮಾಚರಣೆ; ವಿಡಿಯೋ ನೋಡಿ
Image
BCCI: ಎರಡು ಪ್ರಮುಖ ದೇಶೀ ಕ್ರಿಕೆಟ್ ಪಂದ್ಯಾವಳಿಗಳು ಪುನರಾರಂಭ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ಬಿಸಿಸಿಐ

ಉಭಯ ತಂಡಗಳ ನಡುವೆ ಇದುವರೆಗೆ 136 ಪಂದ್ಯಗಳು ನಡೆದಿವೆ. ಭಾರತ 67 ಪಂದ್ಯಗಳನ್ನು ಗೆದ್ದು 63 ಪಂದ್ಯಗಳನ್ನು ಸೋತಿದೆ. ಅದೇ ಸಮಯದಲ್ಲಿ 2 ಪಂದ್ಯಗಳು ಟೈ ಆಗಿದ್ದು, 4 ಪಂದ್ಯಗಳಲ್ಲಿ ಫಲಿತಾಂಶವಿಲ್ಲ.

ಮಳೆ ಅಡ್ಡಿಯಾಗುತ್ತದೆಯೇ?

ಪಂದ್ಯವು 7 ಗಂಟೆಗೆ ಪ್ರಾರಂಭವಾಗಲಿದ್ದು, ಹವಾಮಾನ ಮುನ್ಸೂಚನೆ ಪ್ರಕಾರ ಪಂದ್ಯ ನಿಗದಿತ ಸಮಯಕ್ಕೆ 7 ಗಂಟೆಗೆ ಆರಂಭವಾಗಲಿದೆ. ಆದರೆ ಬೆಳಗ್ಗೆ 8 ಗಂಟೆಗೆ ಮಳೆಯಾಗುವ ಸಾಧ್ಯತೆ ಇದೆ. ಆ ವೇಳೆಗೆ ಮಳೆ ನಿಂತರೂ ಎರಡೂವರೆ ಮೂರು ಗಂಟೆಗಳ ನಂತರ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಯಾವುದೇ ಅಡೆತಡೆಗಳಿಲ್ಲದೆ ಪಂದ್ಯ ಪೂರ್ಣಗೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸಬೇಕಿದೆ.

ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಭಾರತದ ದಾಖಲೆ

ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಭಾರತ ಯಾವಾಗಲೂ ಉತ್ತಮ ದಾಖಲೆಯನ್ನು ಹೊಂದಿದೆ. ವೆಸ್ಟ್ ಇಂಡೀಸ್ ನಂತರ ಭಾರತ ಮಾತ್ರ ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿದೆ. 11 ಪಂದ್ಯಗಳನ್ನು ಗೆದ್ದು 9 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.

ಇಂದಿನ ಪ್ಲೇಯಿಂಗ್ XI

ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ, ಯುಜ್ವೇಂದ್ರ ಚಹಲ್

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ಶೈ ಹೋಪ್, ಶಮ್ರಾ ಬ್ರೂಕ್ಸ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್ಮನ್ ಪೊವೆಲ್, ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್, ಗುಡ್ಕೇಶ್ ಮೋತಿ, ಅಕಿಲ್ ಹೊಸೈನ್.

Published On - 6:44 pm, Fri, 22 July 22

ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ