IND vs WI 1st ODI: ಐತಿಹಾಸಿಕ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಭರ್ಜರಿ ಜಯ

india vs West Indies 1st Odi: ಮತ್ತೊಂದೆಡೆ ಚಹಲ್ ಕೂಡ ತನ್ನ ಸ್ಪಿನ್ ಮೋಡಿ ಮೂಲಕ ವೆಸ್ಟ್ ಇಂಡೀಸ್ ಮಧ್ಯಮ ಕ್ರಮಾಂಕಕ್ಕೆ ಆಘಾತ ನೀಡಿದರು. ಮೊದಲ ಓವರ್​ನಲ್ಲಿ ಪೂರನ್ ಅವರ ವಿಕೆಟ್ ಪಡೆದ ಚಹಲ್ ಮುಂದಿನ ಎಸೆತದಲ್ಲಿ ವಿಂಡೀಸ್ ನಾಯಕ ಪೊಲಾರ್ಡ್ ಅವರನ್ನು ಬೌಲ್ಡ್ ಮಾಡಿದರು.

IND vs WI 1st ODI: ಐತಿಹಾಸಿಕ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಭರ್ಜರಿ ಜಯ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 06, 2022 | 7:56 PM

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ತನ್ನ ಐತಿಹಾಸಿಕ (1000ನೇ ಏಕದಿನ ಪಂದ್ಯ) ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮೊದಲ ಓವರ್​ನ್ನೇ ಮೇಡನ್ ಮೂಲಕ ಸಿರಾಜ್ ಉತ್ತಮ ಆರಂಭ ನೀಡಿದರು. ಅಷ್ಟೇ ಅಲ್ಲದೆ 3ನೇ ಓವರ್​ನಲ್ಲಿ ಶಾಯ್ ಹೋಪ್ ವಿಕೆಟ್ ಪಡೆದು ಸಿರಾಜ್ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಬ್ರಾಂಡನ್ ಕಿಂಗ್ ಹಾಗೂ ಬ್ರಾವೊ ವಿಕೆಟ್ ಪಡೆದು ಮಿಂಚಿದರು.

ಮತ್ತೊಂದೆಡೆ ಚಹಲ್ ಕೂಡ ತನ್ನ ಸ್ಪಿನ್ ಮೋಡಿ ಮೂಲಕ ವೆಸ್ಟ್ ಇಂಡೀಸ್ ಮಧ್ಯಮ ಕ್ರಮಾಂಕಕ್ಕೆ ಆಘಾತ ನೀಡಿದರು. ಮೊದಲ ಓವರ್​ನಲ್ಲಿ ಪೂರನ್ ಅವರ ವಿಕೆಟ್ ಪಡೆದ ಚಹಲ್ ಮುಂದಿನ ಎಸೆತದಲ್ಲಿ ವಿಂಡೀಸ್ ನಾಯಕ ಪೊಲಾರ್ಡ್ ಅವರನ್ನು ಬೌಲ್ಡ್ ಮಾಡಿದರು. ಅಲ್ಲದೆ ಎರಡನೇ ಓವರ್‌ನಲ್ಲಿ ಶಮ್ರಾ ಬ್ರೂಕ್ಸ್‌ನ ವಿಕೆಟ್ ಪಡೆದರು. 79 ರನ್​ಗೆ 7 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್​ಗೆ ಆಸರೆಯಾಗಿದ್ದು ಜೇಸನ್ ಹೋಲ್ಡರ್ ಹಾಗೂ ಫ್ಯಾಬಿಯಾನ್ ಅಲೆನ್.

8ನೇ ವಿಕೆಟ್​ಗೆ 78 ರನ್​ಗಳ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150 ರ ಗಡಿದಾಟಿಸಿದರು. ಈ ಹಂತದಲ್ಲಿ ಅಲೆನ್ (29) ಸುಂದರ್​ಗೆ ವಿಕೆಟ್ ಒಪ್ಪಿಸಿದರೆ, ಅರ್ಧಶತಕ ಪೂರೈಸಿ ಅಪಾಯಕಾರಿಯಾಗಿ ಪರಿಣಮಿಸಿದ್ದ ಹೋಲ್ಡರ್ (57) ಪ್ರಸಿದ್ಧ್ ಕೃಷ್ಣಗೆ ವಿಕೆಟ್ ನೀಡಿದರು. ಅದರಂತೆ ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವು 43.5 ಓವರ್​ಗಳಲ್ಲಿ 179 ರನ್​ಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಚಹಲ್ 4 ವಿಕೆಟ್ ಕಬಳಿಸಿದರೆ, ಸುಂದರ್ 3 ವಿಕೆಟ್ ಪಡೆದು ಮಿಂಚಿದರು. ಇನ್ನು ಪ್ರಸಿದ್ಧ್ ಕೃಷ್ಣ 2 ವಿಕೆಟ್ ಉರುಳಿಸಿದರೆ, ಸಿರಾಜ್ 1 ವಿಕೆಟ್ ಪಡೆದರು.

ವೆಸ್ಟ್ ಇಂಡೀಸ್ ನೀಡಿದ 177 ರನ್​ಗಳ ಟಾರ್ಗೆಟ್​ ಅನ್ನು ಬೆನ್ತತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಿಟ್​ಮ್ಯಾನ್ ವಿಂಡೀಸ್ ಬೌಲರುಗಳ ವಿರುದ್ದ ತಿರುಗಿಬಿದ್ದರು. ಅದರಂತೆ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 51 ಎಸೆತಗಳಲ್ಲಿ 60 ರನ್​ ಬಾರಿಸಿ ಚೇಸಿಂಗ್ ಅಡಿಪಾಯ ಹಾಕಿಕೊಟ್ಟರು. ಆದರೆ ತಂಡದ ಮೊತ್ತ 84 ರನ್​ ಆಗಿದ್ದ ವೇಳೆ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಎಲ್​ಬಿ ಆಗಿ ರೋಹಿತ್ ಶರ್ಮಾ ಹೊರನಡೆದರು. ಈ ವೇಳೆ ಕಣಕ್ಕಿಳಿದ ಕೊಹ್ಲಿ 8 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.

ಇದರ ಬೆನ್ನಲ್ಲೇ ಇಶಾನ್ ಕಿಶನ್ (28) ಅಕಿಲ್ ಹೊಸೈನ್​ ಎಸೆತದಲ್ಲಿ ಫ್ಯಾಬಿಯನ್ ಅಲೆನ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ ಅದಾಗಲೇ ತಂಡದ ಮೊತ್ತ 100 ರ ಗಡಿದಾಟಿದ್ದ ಪರಿಣಾಮ ಟೀಮ್ ಇಂಡಿಯಾ ಯಾವುದೇ ಒತ್ತಡಕ್ಕೆ ಸಿಲುಕಿರಲಿಲ್ಲ. ಆ ಬಳಿಕ ಬಂದ ರಿಷಭ್ ಪಂತ್ (11) ರನೌಟ್ ಆಗಿ ಹೊರನಡೆದರು.

ಈ ಹಂತದಲ್ಲಿ ಜೊತೆಗೂಡಿದ ಸೂರ್ಯಕುಮಾರ್ ಯಾದವ್ (34) ಹಾಗೂ ದೀಪಕ್ (26) ಹೂಡಾ 5ನೇ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ 28 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಐತಿಹಾಸಿಕ ಗೆಲುವಿನೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 6 – 1 ನೇ ODI, ಅಹಮದಾಬಾದ್

ಫೆಬ್ರವರಿ 9 – 2 ನೇ ODI, ಅಹಮದಾಬಾದ್

ಫೆಬ್ರವರಿ 11 – 3 ನೇ ODI, ಅಹಮದಾಬಾದ್

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

Published On - 7:52 pm, Sun, 6 February 22

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ