ಟಾಸ್ ಗೆದ್ದ ಭಾರತ: ಟೀಮ್ ಇಂಡಿಯಾ ಪರ ಆಲ್​ರೌಂಡರ್ ಪಾದಾರ್ಪಣೆ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯು ಇಂದಿನಿಂದ (ಸೆ.27) ಶುರುವಾಗಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ತಿರುವನಂತಪುರದ ಗ್ರೀನ್ ಫೀಲ್ಡ್​ ಮೈದಾನದಲ್ಲಿ ನಡೆಯುತ್ತಿದ್ದು, ದ್ವಿತೀಯ ಪಂದ್ಯಕ್ಕೆ ಗುವಾಹಟಿ ಆತಿಥ್ಯವಹಿಸಲಿದೆ. ಇನ್ನು ಮೂರನೇ ಮ್ಯಾಚ್ ಚಂಡೀಗಢ್​ನಲ್ಲಿ ಜರುಗಲಿದೆ.

ಟಾಸ್ ಗೆದ್ದ ಭಾರತ: ಟೀಮ್ ಇಂಡಿಯಾ ಪರ ಆಲ್​ರೌಂಡರ್ ಪಾದಾರ್ಪಣೆ
India vs West Indies
Image Credit source: BCCI

Updated on: Sep 27, 2026 | 1:44 PM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯ ಶುರುವಾಗಿದೆ. ತಿರುವನಂತಪುರದ ಗ್ರೀನ್​ ಫೀಲ್ಡ್​ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಟಾಪ್-3 ನಲ್ಲಿ ಶುಭ್​ಮನ್ ಗಿಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್ ಅಲಭ್ಯತೆಯ ಕಾರಣ ರುತುರಾಜ್ ಗಾಯಕ್ವಾಡ್​ಗೆ ಆಡುವ ಬಳಗದಲ್ಲಿ ಅವಕಾಶ ಲಭಿಸಿದೆ. ಅದರಂತೆ ಅವರು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಹಾಗೆಯೇ ಈ ಪಂದ್ಯದ ಮೂಲಕ ನಮನ್ ಧೀರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಪಂಜಾಬ್ ಮೂಲದ ನಮನ್ ಧೀರ್ ಆಲ್​ರೌಂಡರ್ ಆಟಗಾರ. ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ನಮನ್ ಇದೇ ಮೊದಲ ಬಾರಿಗೆ ಭಾರತ ಏಕದಿನ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಗುರ್ನೂರ್ ಬ್ರಾರ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಜಾನ್ ಕ್ಯಾಂಪ್‌ಬೆಲ್, ಜಸ್ಟಿನ್ ಗ್ರೀವ್ಸ್, ಕೀಸಿ ಕಾರ್ಟಿ, ಶಾಯ್ ಹೋಪ್ (ನಾಯಕ), ಅಮೀರ್ ಜಾಂಗೂ, ಜ್ಯುವೆಲ್ ಆಂಡ್ರ್ಯೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಗುಡಕೇಶ್ ಮೋಟಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಹೀಗಾದ್ರೆ ಮಾತ್ರ ಭಾರತ vs ಪಾಕಿಸ್ತಾನ್ ಮುಖಾಮುಖಿ

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.

ವೆಸ್ಟ್ ಇಂಡೀಸ್ ಏಕದಿನ ತಂಡ:ಶಾಯ್ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಂಗೂ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾವ್ಸ್, ಗುಡಕೇಶ್ ಮೋಟಿ, ಕೀಮೋ ಪೌಲ್, ಶೆರ್ಫೇನ್ ರದರ್‌ಫೋರ್ಡ್, ಜೇಡನ್ ಸೀಲ್ಸ್.
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us