IND vs WI: 1.0 ಮಿಮೀ ಮಳೆ! ಭಾರತ- ವಿಂಡೀಸ್ ಟಿ20 ಕದನಕ್ಕೆ ಮಳೆ ಕಾಟ

IND vs WI 1st T20 Tarouba Weather Forecast:

IND vs WI: 1.0 ಮಿಮೀ ಮಳೆ! ಭಾರತ- ವಿಂಡೀಸ್ ಟಿ20 ಕದನಕ್ಕೆ ಮಳೆ ಕಾಟ
ತರೋಬಾ ಹವಾಮಾನ ವರದಿ
Follow us
ಪೃಥ್ವಿಶಂಕರ
|

Updated on: Aug 03, 2023 | 10:56 AM

ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ತವರಿನಲ್ಲೇ ಮಣಿಸಿದ ಟೀಂ ಇಂಡಿಯಾ (India vs West Indies) ಈಗ ಐದು ಪಂದ್ಯಗಳ ಟಿ20 ಸರಣಿಗೆ ಸಿದ್ದವಾಗಿದೆ. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದರೆ, ವೆಸ್ಟ್ ಇಂಡೀಸ್ ತಂಡದ ಸಾರಥ್ಯವನ್ನು ರೊವ್​ಮೆನ್ ಪೊವೆಲ್​ಗೆ (Rovman Powell) ವಹಿಸಲಾಗಿದೆ. ಐದು ಪಂದ್ಯಗಳಲ್ಲಿ ಮೊದಲ ಮೂರು ಪಂದ್ಯಗಳು ಕೆರಿಬಿಯನ್ ನೆಲದಲ್ಲಿ ನಡೆಯಲಿದ್ದು, ಕೊನೆಯ ಎರಡು ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿದೆ. 2024 ರ ಟಿ20 ವಿಶ್ವಕಪ್ ಅನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಜಂಟಿಯಾಗಿ ಆಯೋಜಿಸಲಾಗುತ್ತದೆ. ಹಾಗಾಗಿ ಅಮೆರಿಕದಲ್ಲಿ ಕ್ರಿಕೆಟ್ ಉತ್ತೇಜಿಸಲು ಕೊನೆಯ ಎರಡು ಪಂದ್ಯಗಳನ್ನು ಅಮೆರಿಕದಲ್ಲಿ ಆಯೋಜಿಸಲಾಗುತ್ತಿದೆ. ಇನ್ನು ಉಭಯ ತಂಡಗಳ ಮೊದಲ ಟಿ20 ಪಂದ್ಯ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ (Brian Lara Stadium, Trinidad) ನಡೆಯುತ್ತದೆ. ಇದೇ ಮೈದಾನದಲ್ಲಿ ಎರಡು ಏಕದಿನ ಪಂದ್ಯಗಳು ನಡೆದಿದ್ದವು. ಇದರಲ್ಲಿ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಕೊಂಚ ಅಡ್ಡಪಡಿಸಿತ್ತು. ಇದೀಗ ಮೊದಲನೇ ಟಿ20 ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ವರದಿಯಾಗಿದೆ (Weather Forecast).

ತರೋಬಾ ಹವಾಮಾನ ವರದಿ ಇಲ್ಲಿದೆ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲನೇ ಟಿ20 ಪಂದ್ಯ ತರೋಬಾದಲ್ಲಿ ನಡೆಯಲ್ಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ತರೋಬಾದಲ್ಲಿ ಪಂದ್ಯದ ದಿನದಂದು ಹವಾಮಾನ ಹೇಗಿರಲಿದೆ ಎಂಬುದರ ಮಾಹಿತಿ ಹೊರಬಿದ್ದಿದೆ. ಸ್ಥಳೀಯ ಹವಾಮಾನ ವರದಿಯ ಪ್ರಕಾರ, ಮುಂಜಾನೆ ಮೋಡ ಕವಿದ ವಾತಾವರಣ ಹಾಗೂ ಬಿಸಿಲು ಮಿಶ್ರಿತ ವಾತಾವರಣ ಕಂಡು ಬರಲಿದೆ. ಆದಾಗ್ಯೂ, ಮಧ್ಯಾಹ್ನ ಸಮೀಪಿಸುತ್ತಿದ್ದಂತೆ ಹವಾಮಾನದಲ್ಲಿ ಬದಲಾವಣೆಯಾಗಲಿದ್ದು, 40% ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಅಂದಾಜು 1.0 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಗುಡುಗು ಸಹಿತ ಮಳೆಯಾಗುವುದನ್ನು ಪ್ರೇಕ್ಷಕರನ್ನು ನಿರೀಕ್ಷಿಸಬಹುದಾಗಿದೆ. ಪಂದ್ಯದ ಸಮಯದಲ್ಲಿ ಶೇಕಡ 24 ರಷ್ಟು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ.

IND vs WI: ಮೊದಲ ಟಿ20 ಪಂದ್ಯಕ್ಕೆ ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

ಉಭಯ ತಂಡಗಳು

ಭಾರತ ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಭಯ ನಾಯಕ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್