AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st Test, Day 2: ಎರಡನೇ ದಿನದಾಟ ಆರಂಭ: ದೊಡ್ಡ ಸ್ಕೋರ್​ನತ್ತ ಟೀಮ್ ಇಂಡಿಯಾ ಚಿತ್ತ

India vs West Indies 1st Test Day 2 Live: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಭಾರತ ಇದುವರೆಗೆ ಮೊದಲ ಇನ್ನಿಂಗ್ಸ್‌ನಲ್ಲಿ 121 ರನ್ ಗಳಿಸಿದೆ. ಕೆಎಲ್ ರಾಹುಲ್ ಮತ್ತು ಶುಭ್ಮನ್ ಗಿಲ್ ಕ್ರೀಸ್‌ನಲ್ಲಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ ತಂಡದ ಇನ್ನಿಂಗ್ಸ್ 45 ನೇ ಓವರ್‌ನಲ್ಲಿ ಕೇವಲ 162 ರನ್‌ಗಳಿಗೆ ಸೀಮಿತವಾಯಿತು.

IND vs WI 1st Test, Day 2: ಎರಡನೇ ದಿನದಾಟ ಆರಂಭ: ದೊಡ್ಡ ಸ್ಕೋರ್​ನತ್ತ ಟೀಮ್ ಇಂಡಿಯಾ ಚಿತ್ತ
Ind Vs Wi 1st Test Day 2
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on: Oct 03, 2025 | 9:32 AM

Share

ಬೆಂಗಳೂರು (ಅ. 03): ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ (Indian Cricket Team) ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ದಿನದಂದು ಭಾರತ ತಂಡ ಪ್ರಾಬಲ್ಯ ಮರೆಯಿತು. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ಎದುರಿಸಿದ ತಂಡದ ಇನ್ನಿಂಗ್ಸ್ 45 ನೇ ಓವರ್‌ನಲ್ಲಿ ಕೇವಲ 162 ರನ್‌ಗಳಿಗೆ ಸೀಮಿತವಾಯಿತು. ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕೆ ಉತ್ತಮ ಆರಂಭ ನೀಡಿದರು. ದಿನದಾಟದ ಅಂತ್ಯಕ್ಕೆ ಭಾರತ 2 ವಿಕೆಟ್‌ಗಳಿಗೆ 121 ರನ್ ಗಳಿಸಿತ್ತು. ವೆಸ್ಟ್ ಇಂಡೀಸ್ 41 ರನ್‌ಗಳ ಮುನ್ನಡೆಯಲ್ಲಿದೆ, ಆದರೆ ಭಾರತ ಇನ್ನೂ 8 ವಿಕೆಟ್‌ಗಳನ್ನು ಹೊಂದಿದೆ. ಇದೀಗ ಎರಡನೇ ದಿನದಾಟ ಆರಂಭವಾಗಿದ್ದು, ಟೀಮ್ ಇಂಡಿಯಾ ದೊಡ್ಡ ಮೊತ್ತದತ್ತ ಚಿತ್ತ ನೆಟ್ಟಿದೆ.

ಕೆಎಲ್ ರಾಹುಲ್ ಅರ್ಧಶತಕ ಬಾರಿಸಿದರು

ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕೆ ಉತ್ತಮ ಆರಂಭ ನೀಡಿದರು. ಮೂರನೇ ಅವಧಿಯಲ್ಲಿ ಮಳೆಯಿಂದಾಗಿ ಆಟ ಸ್ವಲ್ಪ ಸಮಯದವರೆಗೆ ನಿಲ್ಲಿಸಬೇಕಾಯಿತು. ವಿರಾಮದ ಮೊದಲು, ಯಶಸ್ವಿ 35 ಎಸೆತಗಳಲ್ಲಿ 4 ರನ್ ಗಳಿಸಿ ಆಡುತ್ತಿದ್ದರು. ಮಳೆ ನಿಂತ ನಂತರ ಅವರು ಆಕ್ರಮಣಕಾರಿಯಾಗಿ ಆಡಲಾರಂಭಿಸಿದರು. 15 ನೇ ಓವರ್‌ನಲ್ಲಿ ಜಸ್ಟಿನ್ ಗ್ರೀವ್ಸ್ ವಿರುದ್ಧ ಅವರು ಮೂರು ಬೌಂಡರಿಗಳನ್ನು ಬಾರಿಸಿದರು. ಏತನ್ಮಧ್ಯೆ, ರಾಹುಲ್ ಮತ್ತು ಯಶಸ್ವಿ ನಡುವೆ ಅರ್ಧಶತಕದ ಜೊತೆಯಾಟ ಪೂರ್ಣಗೊಂಡಿತು. 54 ಎಸೆತಗಳಲ್ಲಿ 36 ರನ್ ಗಳಿಸಿದ ನಂತರ, ಯಶಸ್ವಿ ಜೇಡನ್ ಸಿಲ್ಸ್‌ಗೆ ಬಲಿಯಾದರು.

ಸಾಯಿ ಸುದರ್ಶನ್ ಕೇವಲ 7 ರನ್ ಗಳಿಸಿ ರೋಸ್ಟನ್ ಚೇಸ್ ಬೌಲಿಂಗ್ ನಲ್ಲಿ ಔಟಾದರು. ನಂತರ ಕೆಎಲ್ ರಾಹುಲ್ ಜೊತೆ ನಾಯಕ ಶುಭ್​ಮನ್ ಗಿಲ್ ಸೇರಿಕೊಂಡರು, ರಾಹುಲ್ 101 ಎಸೆತಗಳಲ್ಲಿ ತಮ್ಮ 19 ನೇ ಟೆಸ್ಟ್ ಅರ್ಧಶತಕವನ್ನು ಪೂರೈಸಿದರು. ದಿನದಾಟದ ಅಂತ್ಯಕ್ಕೆ ರಾಹುಲ್ 53 ರನ್ ಗಳಿಸಿದರೆ, ನಾಯಕ ಗಿಲ್ 18 ರನ್ ಗಳಿಸಿದ್ದರು.

ಇದನ್ನೂ ಓದಿ
Image
ಹೀನಾಯ ಸೋಲಿನೊಂದಿಗೆ ವಿಶ್ವಕಪ್ ಪ್ರಯಾಣ ಆರಂಭಿಸಿದ ಪಾಕಿಸ್ತಾನ
Image
ಪಾಕ್ ಮಾಜಿ ನಾಯಕಿಯ ಹೇಳಿಕೆಗೆ ಭಾರತದಲ್ಲಿ ಭಾರಿ ಆಕ್ರೋಶ
Image
ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ನಮೀಬಿಯಾ
Image
ಇದನ್ನು ನೋಡಲು ಸಂತೋಷವಾಗಿದೆ; ಟೀಂ ಇಂಡಿಯಾ ಬಗ್ಗೆ ಎಬಿಡಿ ಮೆಚ್ಚುಗೆ

World Cup 2025: ಮೊದಲ ಪಂದ್ಯದಲ್ಲೇ ಹೀನಾಯವಾಗಿ ಸೋತ ಪಾಕಿಸ್ತಾನಕ್ಕೆ ಮುಂದಿನ ಎದುರಾಳಿ ಭಾರತ

ಆಸ್ಟ್ರೇಲಿಯಾ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿದ ವೆಸ್ಟ್ ಇಂಡೀಸ್, ಅಹಮದಾಬಾದ್‌ನಲ್ಲಿ ತಮ್ಮ ಕಳಪೆ ಫಾರ್ಮ್ ಅನ್ನು ಮುಂದುವರಿಸಿತು. ತಂಡದ ಯಾವುದೇ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿ ಉಳಿಯುವ ಧೈರ್ಯವನ್ನು ತೋರಿಸಲಿಲ್ಲ. ಆರಂಭಿಕ ಆಟಗಾರ ಟಗನರಾಜನ್ ಚಂದ್ರಪಾಲ್ ಖಾತೆ ತೆರೆಯದೆಯೇ ಔಟಾದರು. ಜಸ್ಟಿನ್ ಗ್ರೀವ್ಸ್ 32, ಶೈ ಹೋಪ್ 26 ಮತ್ತು ನಾಯಕ ರೋಸ್ಟನ್ ಚೇಸ್ 24 ರನ್ ಗಳಿಸಿದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಜೋಡಿ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್‌ಗಳಿಗೆ ಮಾರಕವಾಗಿ ಪರಿಣಮಿಸಿತು. ಸಿರಾಜ್ ಇನ್ನಿಂಗ್ಸ್ ಆರಂಭದಲ್ಲಿ ಬುಮ್ರಾಗಿಂತ ಹೆಚ್ಚು ಪರಿಣಾಮಕಾರಿಯಾಗಿದ್ದರು. ಸಿರಾಜ್ 14 ಓವರ್‌ಗಳಲ್ಲಿ 40 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು. ಜಸ್ಪ್ರೀತ್ ಬುಮ್ರಾ 14 ಓವರ್‌ಗಳಲ್ಲಿ 42 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು. ಕುಲದೀಪ್ ಯಾದವ್ 6.1 ಓವರ್‌ಗಳಲ್ಲಿ 25 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ವಾಷಿಂಗ್ಟನ್ ಸುಂದರ್ ಕೂಡ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ