IND vs WI: ಇಬ್ಬರು ಪಾದಾರ್ಪಣೆ: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jul 12, 2023 | 7:37 PM

India vs West Indies 1st Test: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೇಗ್​ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

IND vs WI: ಇಬ್ಬರು ಪಾದಾರ್ಪಣೆ: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Team India
Follow us on

India vs West Indies 1st Test: ಭಾರತ-ವೆಸ್ಟ್ ಇಂಡೀಸ್​ ನಡುವಣ ಮೊದಲ ಟೆಸ್ಟ್ ಪಂದ್ಯವು ಶುರುವಾಗಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್​ ತಂಡದ ನಾಯಕ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹಾಗೂ ಇಶಾನ್ ಕಿಶನ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದು, ಹೀಗಾಗಿ ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಲಿದ್ದಾರೆ. ಮತ್ತೊಂದೆಡೆ ಈ ಹಿಂದೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ಇಶಾನ್ ಕಿಶನ್ ಸ್ಥಾನ ಪಡೆದಿದ್ದು, ಈ ಹಿಂದೆ ಕೀಪರ್ ಆಗಿ ಪ್ಲೇಯಿಂಗ್ ಇಲೆವೆನ್​​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಎಸ್ ಭರತ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

  • 1- ರೋಹಿತ್ ಶರ್ಮಾ
  • 2- ಯಶಸ್ವಿ ಜೈಸ್ವಾಲ್
  • 3- ಶುಭ್​ಮನ್ ಗಿಲ್
  • 4- ವಿರಾಟ್ ಕೊಹ್ಲಿ
  • 5- ಅಜಿಂಕ್ಯ ರಹಾನೆ
  • 6- ಇಶಾನ್ ಕಿಶನ್ (ವಿಕೆಟ್ ಕೀಪರ್)
  • 7- ರವೀಂದ್ರ ಜಡೇಜಾ
  • 8- ಅಶ್ವಿನ್
  • 9- ಜಯದೇವ್ ಉನಾದ್ಕತ್
  • 10- ಮೊಹಮ್ಮದ್ ಸಿರಾಜ್
  • 11- ಶಾರ್ದೂಲ್ ಠಾಕೂರ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11:

  1. ಕ್ರೈಗ್ ಬ್ರಾಥ್‌ವೈಟ್ (ನಾಯಕ)
  2. ತೇಜ್​ನರೈನ್ ಚಂದ್ರಪಾಲ್
  3. ರೇಮನ್ ರೀಫರ್
  4. ಜೆರ್ಮೈನ್ ಬ್ಲಾಕ್‌ವುಡ್
  5. ಅಲಿಕ್ ಅಥಾನಾಜೆ
  6. ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್)
  7. ಜೇಸನ್ ಹೋಲ್ಡರ್
  8. ರಹಕೀಮ್ ಕಾರ್ನ್‌ವಾಲ್
  9. ಅಲ್ಝಾರಿ ಜೋಸೆಫ್
  10. ಕೆಮರ್ ರೋಚ್
  11. ಜೋಮೆಲ್ ವಾರಿಕನ್

 

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

 

 

 

Published On - 7:33 pm, Wed, 12 July 23