AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭರ್ಜರಿ ಜಯ… ಮೂರೇ ದಿನಕ್ಕೆ ಪಂದ್ಯ ಮುಗಿಸಿದ ಟೀಮ್ ಇಂಡಿಯಾ

India vs West Indies Test Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಮೂರನೇ ದಿನದಾಟದಲ್ಲೇ ಪೂರ್ಣಗೊಂಡಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತೀಯ ಬೌಲರ್​ಗಳು ವೆಸ್ಟ್ ಇಂಡೀಸ್ ತಂಡವನ್ನು ಮೂರು ದಿನಗಳ ಅಂತರದಲ್ಲಿ ಎರಡು ಬಾರಿ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

IND vs WI: ಭರ್ಜರಿ ಜಯ... ಮೂರೇ ದಿನಕ್ಕೆ ಪಂದ್ಯ ಮುಗಿಸಿದ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on:Oct 04, 2025 | 1:47 PM

Share

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​​ನಲ್ಲಿ ಕೇವಲ 162 ರನ್ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಸಿಡಿಸಿದ್ದರು. ಶತಕಗಳ ನೆರವಿನೊಂದಿಗೆ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 448 ರನ್​​ಗಳಿಸಿ ಡಿಕ್ಲೇರ್ ಘೋಷಿಸಿತು.

ಮೊದಲ ಇನಿಂಗ್ಸ್ನಲ್ಲಿನ 286 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 24 ರನ್ಗಳಿಸುವಷ್ಟರಲ್ಲಿ ಆರಂಭಿಕರಾದ ತೇಜ್​​ನರೈನ್ ಚಂದ್ರಪಾಲ್ (8) ಹಾಗೂ ಜಾನ್ ಕ್ಯಾಂಪ್ಬೆಲ್ (14) ಪೆವಿಲಿಯನ್ ಸೇರಿದ್ದರು. ಇದರ ಬೆನ್ನಲ್ಲೇ ಬ್ರಾಂಡನ್ ಕಿಂಗ್ (5) ಸಹ ವಿಕೆಟ್ ಒಪ್ಪಿಸಿದ್ದರು.

ಇನ್ನು ನಾಯಕ ರೋಸ್ಟನ್ ಚೇಸ್ (1) ಹಾಗೂ ಶಾಯ್ ಹೋಪ್ (1) ಬಂದ ವೇಗದಲ್ಲೇ ಹಿಂತಿರುಗಿದ್ದರು. ಹಂತದಲ್ಲಿ ಜೊತೆಗೂಡಿದ ಅಲಿಕ್ ಅಥನಾಝ್ ಹಾಗೂ ಜಸ್ಟಿನ್ ಗ್ರೀವ್ಸ್ 50 ರನ್ಗಳ ಜೊತೆಯಾಟವಾಡಿದರು. ಇದೇ ವೇಳೆ ಮತ್ತೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಅಲಕ್ ಅಥನಾಝ್ (38) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ಜಸ್ಟಿನ್ ಗ್ರೀವ್ಸ್​ (25) ಹಾಗೂ ಜೋಮೆಲ್ ವಾರಿಕನ್ (0) ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಜೋಹಾನ್ ಲೇನ್ (14) ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್, ಜೇಡನ್ ಸೀಲ್ಸ್ (22) ವಿಕೆಟ್ ಪಡೆದರು.

ಇದರೊಂದಿಗೆ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್​ ಹಾಗೂ 140 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.

ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಮೊಹಮ್ಮದ್ ಸಿರಾಜ್ ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದು ಮಿಂಚಿದರು. ಇನ್ನು ರವೀಂದ್ರ ಜಡೇಜಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಪಡೆದರು. ಹಾಗೆಯೇ ಕುಲ್ದೀಪ್ ಯಾದವ್ 3 ವಿಕೆಟ್ ಕಬಳಿಸಿ ಮಿಂಚಿದರು.

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ತೇಜ್ನರೈನ್ ಚಂದ್ರಪಾಲ್, ಜಾನ್ಕ್ಯಾಂಪ್ಬೆಲ್, ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ನಾಯಕ), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್, ಜೇಡನ್ ಸೀಲ್ಸ್.

Published On - 1:41 pm, Sat, 4 October 25

Follow Us
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!