AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಾಸ್ ಗೆದ್ದ ವೆಸ್ಟ್ ಇಂಡೀಸ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ

India vs West Indies, 1st Test: ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಈವರೆಗೆ 30 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ 2002 ರಿಂದ ಒಂದೇ ಒಂದು ಸರಣಿ ಗೆದ್ದಿಲ್ಲ ಎಂಬುದೇ ಅಚ್ಚರಿ. ಇದೀಗ 23 ವರ್ಷಗಳ ಬಳಿಕ ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದು ಹೊಸ ಇತಿಹಾಸ ನಿರ್ಮಿಸುವ ಇರಾದೆಯೊಂದಿಗೆ ವಿಂಡೀಸ್ ಪಡೆ ಕಣಕ್ಕಿಳಿದಿದೆ.

IND vs WI: ಟಾಸ್ ಗೆದ್ದ ವೆಸ್ಟ್ ಇಂಡೀಸ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ
Ind Vs Wi
ಝಾಹಿರ್ ಯೂಸುಫ್
|

Updated on:Oct 02, 2025 | 9:13 AM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ),  ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ತೇಜ್​ನರೈನ್ ಚಂದ್ರಪಾಲ್, ಜಾನ್​ ಕ್ಯಾಂಪ್​ಬೆಲ್, ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶೈ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ನಾಯಕ), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್, ಜೇಡನ್ ಸೀಲ್ಸ್.

ಟೆಸ್ಟ್ ಮುಖಾಮುಖಿ:

ಭಾರತ ಮತ್ತು ವೆಸ್ಟ್ ಇಂಡೀಸ್​ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 100 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 23 ಪಂದ್ಯಗಳಲ್ಲಿ. ಇನ್ನು ವೆಸ್ಟ್ ಇಂಡೀಸ್ ತಂಡ 30 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 47 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದೆ.

ಇತ್ತ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ, ಟೀಮ್ ಇಂಡಿಯಾ ವಿರುದ್ಧ ವೆಸ್ಟ್ ಇಂಡೀಸ್ ವಿರುದ್ಧ ಮೇಲುಗೈ ಹೊಂದಿದೆ. ಆದರೆ 2002 ರಿಂದ ವಿಂಡೀಸ್ ಪಡೆ ಭಾರತದ ವಿರುದ್ಧ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ ಎಂಬುದು ವಿಶೇಷ. ಹೀಗಾಗಿ ಈ ಬಾರಿ ಕೂಡ ಟೀಮ್ ಇಂಡಿಯಾವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

ಇದನ್ನೂ ಓದಿ: ಅಭಿಷೇಕ್ ಅಬ್ಬರಕ್ಕೆ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ರ‍್ಯಾಂಕಿಂಗ್ ಷೇಕ್ ಷೇಕ್ 

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

Published On - 9:09 am, Thu, 2 October 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್