ಕಾಶ್ಮೀರಿ ವೇಗಿ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಪ್ರದರ್ಶನ ನೀಡಿತ್ತು. ಈ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 8 ವಿಕೆಟ್ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಮ್ಯಾಚ್ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಅದರಂತೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಡುವ ಬಳಗದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಜಮ್ಮು-ಕಾಶ್ಮೀರದ ಅನುಭವಿ ವೇಗಿ ಆಖಿಬ್ ನಬಿ ಅವರನ್ನು ಕಣಕ್ಕಿಳಿಸಲಾಗಿದೆ.
- ಈ ಪಂದ್ಯದ ಮೂಲಕ ಆಖಿಬ್ ನಬಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ.
- ಈ ಹಿಂದೆ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರೂ ನಬಿ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಲಭಿಸಿರಲಿಲ್ಲ.
- ಇದೀಗ ಏಕದಿನ ಕ್ರಿಕೆಟ್ ಮೂಲಕ ಆಖಿಬ್ ನಬಿ ಭಾರತದ ಪರ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ರವೀಂದ್ರ ಜಡೇಜಾ, ಔಕಿಬ್ ನಬಿ, ಗುರ್ನೂರ್ ಬ್ರಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ಶಾಯ್ ಹೋಪ್ (ನಾಯಕ, ಅಮೀರ್ ಜಂಗೂ, ಶೆರ್ಫೇನ್ ರದರ್‌ಫೋರ್ಡ್, ರೋಸ್ಟನ್ ಚೇಸ್, ಕೀಮೋ ಪೌಲ್, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ಜೇಡನ್ ಸೀಲ್ಸ್, ವಿಟೆಲ್ ಲಾವ್ಸ್.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ Star Sports 1, Star Sports 1 HD ಸೇರಿದಂತೆ ಕನ್ನಡ, ಹಿಂದಿ ಮತ್ತು ತಮಿಳು ಪ್ರಾದೇಶಿಕ ಚಾನೆಲ್‌ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.
ಇದನ್ನೂ ಓದಿ: ಏನಿದು ಇರಾನಿ ಕಪ್? ಇದರ ಹಿನ್ನಲೆಯೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಂಗೂ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾವ್ಸ್, ಗುಡಕೇಶ್ ಮೋಟಿ, ಕೀಮೋ ಪೌಲ್, ಶೆರ್ಫೇನ್ ರದರ್‌ಫೋರ್ಡ್, ಜೇಡನ್ ಸೀಲ್ಸ್.
Published On - 1:37 pm, Wed, 30 September 26




