IND vs WI: ಭಾರತ- ವಿಂಡೀಸ್ ನಡುವೆ ನಿರ್ಣಾಯಕ ಟೆಸ್ಟ್ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?
India vs West Indies 2nd Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಅಕ್ಟೋಬರ್ 10 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ ಗೆಲ್ಲಲು ಭಾರತ, ಸಮಬಲ ಸಾಧಿಸಲು ವೆಸ್ಟ್ ಇಂಡೀಸ್ ಸಜ್ಜಾಗಿದೆ. ಅರುಣ್ ಜೇಟ್ಲಿ ಪಿಚ್ ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವ ತಂಡಕ್ಕೆ ಹೆಚ್ಚು ಸಹಕಾರಿ. ಪಂದ್ಯದ ದಿನಾಂಕ, ಸಮಯ, ಸ್ಥಳ ಹಾಗೂ ನೇರ ಪ್ರಸಾರ ಮಾಹಿತಿಗಳ ವಿವರ ಇಲ್ಲಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಇದೇ ಅಕ್ಟೋಬರ್ 10 ರಿಂದ ದೆಹಲಿಯ ಅರುಣ್ ಜೇಟ್ಲಿ (Arun Jaitley) ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಉಭಯ ತಂಡಗಳ ನಡುವೆ ಅಹಮದಾಬಾದ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ ಇದೀಗ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲಿದೆ. ಇತ್ತ ಮೊದಲ ಟೆಸ್ಟ್‌ನಲ್ಲಿ ನಿರಸ ಪ್ರದರ್ಶನ ನೀಡಿದ್ದ ವೆಸ್ಟ್ ಇಂಡೀಸ್ ಎರಡನೇ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ನೋಡಲಿದೆ.
ಪಿಚ್ ಯಾರಿಗೆ ಸಹಕಾರಿ?
ಅರುಣ್ ಜೇಟ್ಲಿ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡುತ್ತದೆ. ಈ ಮೈದಾನದಲ್ಲಿ ಇಲ್ಲಿಯವರೆಗೆ 37 ಟೆಸ್ಟ್‌ಗಳನ್ನು ಆಡಲಾಗಿದ್ದು, ಮೊದಲು ಬೌಲಿಂಗ್ ಮಾಡಿದ ತಂಡವು 14 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಆರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 10 ರ ಶುಕ್ರವಾರದಂದು ನಡೆಯಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಎಲ್ಲಿ ನಡೆಯಲಿದೆ?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ ಪಂದ್ಯ ಅರ್ಧ ಗಂಟೆ ಮುಂಚಿತವಾಗಿ, ಅಂದರೆ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಪ್ರಸಾರ ಹಕ್ಕುಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ಈ ಪಂದ್ಯದ ನೇರ ಪ್ರಸಾರವು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
