AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ದೆಹಲಿ ಟೆಸ್ಟ್ ಗೆಲ್ಲಲು ಭಾರತಕ್ಕೆ 121 ರನ್ ಟಾರ್ಗೆಟ್ ನೀಡಿದ ವಿಂಡೀಸ್

India vs West Indies 2nd Test: ದೆಹಲಿಯಲ್ಲಿ ನಡೆಯುತ್ತಿರುವ ಭಾರತ vs ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 2ನೇ ಇನ್ನಿಂಗ್ಸ್‌ನಲ್ಲಿ 390 ರನ್‌ಗಳಿಗೆ ಆಲೌಟ್ ಆಗಿದೆ. ಭಾರತ 518 ರನ್ ಡಿಕ್ಲೇರ್ ಮಾಡಿ ಫಾಲೋ ಆನ್ ಹೇರಿತ್ತು. ವಿಂಡೀಸ್ ಇನ್ನಿಂಗ್ಸ್ ಸೋಲಿನಿಂದ ಪಾರಾಗಿ ಭಾರತಕ್ಕೆ 120 ರನ್‌ಗಳ ಗೆಲುವಿನ ಗುರಿ ನೀಡಿದೆ.

IND vs WI: ದೆಹಲಿ ಟೆಸ್ಟ್ ಗೆಲ್ಲಲು ಭಾರತಕ್ಕೆ 121 ರನ್ ಟಾರ್ಗೆಟ್ ನೀಡಿದ ವಿಂಡೀಸ್
Ind Vs Wi
ಪೃಥ್ವಿಶಂಕರ
|

Updated on:Oct 13, 2025 | 4:07 PM

Share

ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡ 390 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡದ ಗೆಲುವಿಗೆ 121 ರನ್​ಗಳ ಟಾರ್ಗೆಟ್ ನೀಡಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 518 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ 248 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಹೀಗಾಗಿ ಭಾರತ ಫಾಲೋ ಆನ್ ಹೇರಿ ವಿಂಡೀಸ್​ಗೆ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತಕ್ಕೆ ಪ್ರತಿರೋಧ ಒಡ್ಡಿದ ವಿಂಡೀಸ್ ತಂಡ 390 ರನ್ ಕಲೆಹಾಕುವುದಲ್ಲದೆ, ಇನ್ನಿಂಗ್ಸ್ ಸೋಲಿನಿಂದ ಪಾರಾಗಿ, ಭಾರತಕ್ಕೆ 121 ರನ್​ಗಳ ಟಾರ್ಗೆಟ್ ನೀಡಿದೆ.

ಕ್ಯಾಂಪ್ಬೆಲ್, ಹೋಪ್ ಶತಕ

ಮೊದಲ ದಿನದಾಟದಂತ್ಯಕ್ಕೆ 3ನೇ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದ್ದ ವೆಸ್ಟ್ ಇಂಡೀಸ್ ತಂಡವು ಇಲ್ಲಿಂದ ತನ್ನ ನಾಲ್ಕನೇ ದಿನದಾಟವನ್ನು ಮುಂದುವರಿಸಿ 390ರನ್​​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿತು. ಅಂದರೆ ನಾಲ್ಕನೇ ದಿನದಾಟದಂದು ವಿಂಡೀಸ್ ತಂಡ ಉಳಿದ 8 ವಿಕೆಟ್​​ಗಳಿಂದ 217 ರನ್ ಕಲೆಹಾಕಿತು. ವಿಂಡೀಸ್ ಪರ ಜಾನ್ ಕ್ಯಾಂಪ್ಬೆಲ್ ಮತ್ತು ಶಾಯ್ ಹೋಪ್ ಶತಕ ಬಾರಿಸಿದರು. ಕ್ಯಾಂಪ್ಬೆಲ್ 115 ರನ್ ಬಾರಿಸಿದರೆ, ಹೋಪ್ 103 ರನ್ ಗಳಿಸಿ ಔಟಾದರು. ನಾಯಕ ರೋಸ್ಟನ್ ಚೇಸ್ 40 ರನ್ ಗಳಿಸಿದರೆ, ಜಸ್ಟಿನ್ ಗ್ರೀವ್ಸ್ ಅಜೇಯ 50 ರನ್ ಬಾರಿಸಿದರು. ಇದು ಗ್ರೀವ್ಸ್ ಅವರ ಟೆಸ್ಟ್ ವೃತ್ತಿಜೀವನದ ಮೊದಲ ಅರ್ಧಶತಕವಾಗಿತ್ತು.

ಕುಲ್ದೀಪ್, ಬುಮ್ರಾ 3 ವಿಕೆಟ್

ತಂಡದ ಆರಂಭಿಕರಾದ ತೇಜನಾರಾಯಣ್ ಚಂದ್ರಪಾಲ್ 10 ರನ್ ಗಳಿಸಿ ಔಟಾದರೆ, ಅಲಿಕ್ ಅಥಾನಾಜೆ ಏಳು ರನ್, ಟೆವ್ಲಿನ್ ಇಮ್ಲಾಕ್ 12 ರನ್, ವಾರಿಕನ್ ಮೂರು ರನ್, ಆಂಡರ್ಸನ್ ಫಿಲಿಪ್ ಎರಡು ರನ್ ಗಳಿಸಿ ಔಟಾದರು. ಖಾರಿ ಪಿಯರೆ ಶೂನ್ಯಕ್ಕೆ ಔಟಾದರೆ, ಜೇಡನ್ ಸೀಲ್ಸ್ 32 ರನ್ ಬಾರಿಸಿ ಕೊನೆಯ ವಿಕೆಟ್ ರೂಪದಲ್ಲಿ ವಿಂಡೀಸ್​ ಇನ್ನಿಂಗ್ಸ್​ಗೆ ಅಂತ್ಯಹಾಡಿದರು. ಭಾರತದ ಪರ ಕುಲ್ದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಮೂರು ವಿಕೆಟ್ ಪಡೆದರೆ, ಸಿರಾಜ್ ಎರಡು ವಿಕೆಟ್, ಜಡೇಜ ಮತ್ತು ಸುಂದರ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Mon, 13 October 25

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ