IND vs WI 2nd Test: ಟೀಮ್ ಇಂಡಿಯಾಕ್ಕೆ ಆರಂಭಿಕ ಆಘಾತ: ಭೋಜನ ವಿರಾಮ ವೇಳೆ ಭಾರತ 94-1
India vs West Indies 2nd Test: ಎರಡನೇ ಟೆಸ್ಟ್ ಪಂದ್ಯದಲ್ಲಿ, ಭಾರತದ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಮೊದಲ ದಿನದ ಊಟದ ಹೊತ್ತಿಗೆ ಭಾರತ ಒಂದು ವಿಕೆಟ್‌ಗೆ 94 ರನ್ ಗಳಿಸಿದೆ. ಭಾರತ ಪರ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರು. ಮೊದಲ ವಿಕೆಟ್ಗೆ ಈ ಜೋಡಿ 58 ರನ್ಗಳ ಜೊತೆಯಾಟ ಆಡಿತು.

ಬೆಂಗಳೂರು (ಅ. 10): ಭಾರತ (Indian Cricket Team) ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಭಾರತದ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯವನ್ನೂ ಗೆಲ್ಲುವ ಮೂಲಕ, ಭಾರತ ತಂಡ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದುಕೊಂಡಿತು.
ಸದ್ಯ ಎರಡನೇ ಟೆಸ್ಟ್ ಪಂದ್ಯದಲ್ಲಿ, ಭಾರತದ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಮೊದಲ ದಿನದ ಊಟದ ಹೊತ್ತಿಗೆ ಭಾರತ ಒಂದು ವಿಕೆಟ್‌ಗೆ 94 ರನ್ ಗಳಿಸಿದೆ. ಭಾರತ ಪರ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರು. ಮೊದಲ ವಿಕೆಟ್ಗೆ ಈ ಜೋಡಿ 58 ರನ್ಗಳ ಜೊತೆಯಾಟ ಆಡಿತು.
ಚೆನ್ನಾಗಿಯೇ ಆಡುತ್ತಿದ್ದ ಕೆಎಲ್ ರಾಹುಲ್ 54 ಎಸೆತಗಳಲ್ಲಿ 5 ಫೋರ್, 1 ಸಿಕ್ಸರ್ನೊಂದಿಗೆ 38 ರನ್ ಗಳಿಸಿ ಔಟಾದರು. ಜೋಮೆಲ್ ವಾರಿಕನ್ ಬೌಲಿಂಗ್ನಲ್ಲಿ ರಾಹುಲ್ ಸ್ಟಂಪ್ ಔಟ್ಗೆ ಬಲಿಯಾದರು. ನಂತರ ಯಶಸ್ವಿ ಜೊತೆಯಾದ ಸಾಯಿ ಸುದರ್ಶನ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದಾರೆ. ಭೋಜನ ವಿರಾಮದ ವೇಳೆಗೆ ಜೈಸ್ವಾಲ್ 40 ಹಾಗೂ ಸುದರ್ಶನ್ 16 ರನ್ ಗಳಿಸಿದ್ದಾರೆ. ಭಾರತ 28 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೆಲಸದ ಒತ್ತಡದ ನಡುವೆ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂಬ ಮಾತು ಕೇಳಿಬಂದಿತ್ತು. ಆದರೆ, ಬದಲಾವಣೆ ಮಾಡದೆ ಮೊದಲ ಟೆಸ್ಟ್ನಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.
World Cup 2025: 38 ಎಸೆತಗಳಲ್ಲಿ 94 ರನ್ ಚಚ್ಚಿದ ರಿಚಾ ಘೋಷ್; ವಿಡಿಯೋ ನೋಡಿ
ಎರಡನೇ ಟೆಸ್ಟ್‌ಗೆ ಭಾರತದ ಆಡುವ ಪ್ಲೇಯಿಂಗ್ XI:
ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಕೊನೆಗೂ ಟಾಸ್ ಗೆದ್ದ ಗಿಲ್
ಜೂನ್ 20, 2025 ರಂದು ಗಿಲ್ ಟೀಮ್ ಇಂಡಿಯಾದ ಟೆಸ್ಟ್ ನಾಯಕತ್ವವನ್ನು ವಹಿಸಿಕೊಂಡರು. ಇವರ ನಾಯಕತ್ವದಲ್ಲಿ, ಭಾರತ ತಂಡ ಇಂಗ್ಲೆಂಡ್ ಪ್ರವಾಸ ಮಾಡಿತು. ಅಲ್ಲಿ ಒಟ್ಟು ಐದು ಟೆಸ್ಟ್ ಪಂದ್ಯಗಳನ್ನು ಆಡಲಾಯಿತು, ಅಲ್ಲಿ ಭಾರತ ತಂಡವು ಒಂದೇ ಒಂದು ಟಾಸ್ ಗೆಲ್ಲಲಿಲ್ಲ. ಸತತ ಐದು ಟಾಸ್ ಸೋತಿತು. ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೂ ಗಿಲ್ ಟಾಸ್ ಸೋತರು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ತಕ್ಷಣ, ಇಡೀ ಭಾರತ ತಂಡ ನಗುತ್ತಿರುವುದು ಕಂಡುಬಂತು. 112 ದಿನಗಳ ನಂತರ ಗಿಲ್ ಅವರಿಗೆ ಟಾಸ್ ಗೆದ್ದ ಅದೃಷ್ಟ ಸಿಕ್ಕಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




