IND vs WI: ಕಿಂಗ್ ಕೊಹ್ಲಿಯ 500ನೇ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಪೂರ್ಣ ಮಾಹಿತಿ

|

Updated on: Jul 20, 2023 | 8:56 AM

Virat Kohli: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿರುವುದರಿಂದ ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ.

IND vs WI: ಕಿಂಗ್ ಕೊಹ್ಲಿಯ 500ನೇ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಪೂರ್ಣ ಮಾಹಿತಿ
ವಿರಾಟ್ ಕೊಹ್ಲಿ
Follow us on

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಂ ಇಂಡಿಯಾ (Team India) ಟ್ರಿನಿಡಾಡ್ ತಲುಪಿದ್ದು, ವೆಸ್ಟ್ ಇಂಡೀಸ್ ಕೂಡ ತನ್ನ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ. ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಕೇವಲ 3 ದಿನಗಳಲ್ಲಿ ಇನ್ನಿಂಗ್ಸ್ ಮತ್ತು 141 ರನ್‌ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು, ಸರಣಿ ತನ್ನದಾಗಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಅಲ್ಲದೆ ಈ ಟೆಸ್ಟ್ ಪಂದ್ಯ ಉಭಯ ದೇಶಗಳ ನಡುವಿನ 100ನೇ ಟೆಸ್ಟ್ ಪಂದ್ಯವಾಗಿರುವುದರಿಂದ ಈ ಪಂದ್ಯವನ್ನು ಗೆಲ್ಲುವುದು ಉಭಯ ದೇಶಗಳ ಗುರಿಯಾಗಿದೆ. ಹಾಗೆಯೇ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿರುವುದರಿಂದ ವಿಶ್ವ ಕ್ರಿಕೆಟ್​ನ ಸಾಮ್ರಾಟ ಕಿಂಗ್​ ಕೊಹ್ಲಿಗೆ (Virat Kohli) ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ.

ಭಾರತ- ವಿಂಡೀಸ್ ನಡುವಿನ ಪಂದ್ಯದ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲ್ಲಿದೆ?

ಜುಲೈ 20 ರ ಗುರುವಾರದಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯವು ಸ್ಥಳೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗುತ್ತದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಭಾರತದಲ್ಲಿ ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ದೂರದರ್ಶನ ನೆಟ್‌ವರ್ಕ್‌ನಲ್ಲಿ (ಡಿಡಿ ಸ್ಪೋರ್ಟ್ಸ್) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಭಾರತದಲ್ಲಿ ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ ಫ್ಯಾನ್‌ಕೋಡ್ ಚಂದಾದಾರಿಕೆಯನ್ನು ಹೊಂದಿರುವ ಅಭಿಮಾನಿಗಳು ತಮ್ಮ ಮೀಸಲಾದ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಈ ಪಂದ್ಯವನ್ನು ವೀಕ್ಷಿಸಬಹುದು.

ಎರಡನೇ ಟೆಸ್ಟ್​ಗೆ ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬ್ರಾಥ್‌ವೈಟ್ (ನಾಯಕ), ಜೆರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಅಲಿಕ್ ಅಥಾನಾಸೆ, ತೇಜ್ ನಾರಾಯಣ್ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ಕೆಮರ್ ರೋಚ್, ಕೆವಿನ್ ವಾರ್ ಸಿಂಕ್ಲೇರ್ ಮತ್ತು ಜೋಮೆಲ್ ವಾರ್ ಸಿಂಕ್ಲೇರ್.

ಮೀಸಲು ಆಟಗಾರರು- ಟೆವಿನ್ ಇಮ್ಲಾಚ್ ಮತ್ತು ಅಕೀಮ್ ಜೋರ್ಡಾನ್.

2ನೇ ಟೆಸ್ಟ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:55 am, Thu, 20 July 23