AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಇಂಡೊ-ವಿಂಡೀಸ್ 2ನೇ ಟೆಸ್ಟ್​: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs West Indies 2nd Test: ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬೌಲರ್ 40 ಓವರ್​ಗಳನ್ನು ಎಸೆದಿರಲಿಲ್ಲ.

IND vs WI: ಇಂಡೊ-ವಿಂಡೀಸ್ 2ನೇ ಟೆಸ್ಟ್​: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
TV9 Web
| Edited By: |

Updated on:Jul 19, 2023 | 10:58 PM

Share

India vs West Indies 2nd Test: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯವು ಗುರುವಾರ (ಜುಲೈ 20) ದಿಂದ ಶರುವಾಗಲಿದೆ. ಪೋರ್ಟ್​ ಆಫ್ ಸ್ಪೇನ್​ನ ಕ್ವೀನ್ಸ್ ಪಾರ್ಕ್​ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ವೆಸ್ಟ್ ಇಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಒಂದು ವೇಳೆ 2ನೇ ಪಂದ್ಯದಲ್ಲಿ ಭಾರತ ತಂಡವು ಡ್ರಾ ಸಾಧಿಸಿದರೆ ಅಥವಾ ಜಯಗಳಿಸಿದರೆ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸಲು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಜಯಗಳಿಸಲೇಬೇಕು. ಹೀಗಾಗಿಯೇ 2ನೇ ಟೆಸ್ಟ್ ಪಂದ್ಯವು ಕೆರಿಬಿಯನ್ನರ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಇತ್ತ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಇನಿಂಗ್ಸ್ ಹಾಗೂ 141 ರನ್​ಗಳಿಂದ ಬಗ್ಗು ಬಡಿದಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲೂ ಜಯಗಳಿಸುವ ವಿಶ್ವಾಸದಲ್ಲಿದೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.

ಮೊದಲ ಪಂದ್ಯದಲ್ಲಿ 12 ವಿಕೆಟ್ ಕಬಳಿಸಿ ಮಿಂಚಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು, ಅವರ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಕಣಕ್ಕಿಳಿಸಬಹುದು. ಇದರ ಹೊರತಾಗಿ ಬೇರೆ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.

ಏಕೆಂದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬೌಲರ್ 40 ಓವರ್​ಗಳನ್ನು ಎಸೆದಿರಲಿಲ್ಲ. ಮೊದಲ ಇನಿಂಗ್ಸ್​ನಲ್ಲಿ ಅಶ್ವಿನ್ 24.3 ಓವರ್ ಬೌಲಿಂಗ್ ಮಾಡಿದ್ದರೆ, 2ನೇ ಇನಿಂಗ್ಸ್​ನಲ್ಲಿ 21.3 ಓವರ್ ಎಸೆದಿದ್ದರು.

ಇತ್ತ ಟೀಮ್ ಇಂಡಿಯಾದ ವೇಗಿಗಳಿಗೂ ಹೆಚ್ಚಿನ ಓವರ್ ಲಭಿಸಿರಲಿಲ್ಲ. ಹೀಗಾಗಿ ದ್ವಿತೀಯ ಟೆಸ್ಟ್​ನಲ್ಲಿ ಬೌಲಿಂಗ್ ಲೈನಪ್​ನಲ್ಲಿ ಪ್ರಯೋಗ ಮಾಡುವ ಸಲುವಾಗಿ ಅಶ್ವಿನ್ ಅವರಿಗೆ ವಿಶ್ರಾಂತಿ ನೀಡಬಹುದು. ಅದರಂತೆ ಅಶ್ವಿನ್ ಬದಲಿಗೆ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ:

ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ , ಜಯದೇವ್ ಉನದ್ಕತ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

Published On - 10:57 pm, Wed, 19 July 23

Follow Us
TV9 Web
TV9 Web

TV9 Kannada

Read More
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ