India vs West Indies 2nd Test: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯವು ಗುರುವಾರ (ಜುಲೈ 20) ದಿಂದ ಶರುವಾಗಲಿದೆ. ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ವೆಸ್ಟ್ ಇಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಈ ಸರಣಿಯ ಮೊದಲ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ.
ಒಂದು ವೇಳೆ 2ನೇ ಪಂದ್ಯದಲ್ಲಿ ಭಾರತ ತಂಡವು ಡ್ರಾ ಸಾಧಿಸಿದರೆ ಅಥವಾ ಜಯಗಳಿಸಿದರೆ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸಲು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಜಯಗಳಿಸಲೇಬೇಕು. ಹೀಗಾಗಿಯೇ 2ನೇ ಟೆಸ್ಟ್ ಪಂದ್ಯವು ಕೆರಿಬಿಯನ್ನರ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.
ಇತ್ತ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಇನಿಂಗ್ಸ್ ಹಾಗೂ 141 ರನ್ಗಳಿಂದ ಬಗ್ಗು ಬಡಿದಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲೂ ಜಯಗಳಿಸುವ ವಿಶ್ವಾಸದಲ್ಲಿದೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.
ಮೊದಲ ಪಂದ್ಯದಲ್ಲಿ 12 ವಿಕೆಟ್ ಕಬಳಿಸಿ ಮಿಂಚಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು, ಅವರ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಕಣಕ್ಕಿಳಿಸಬಹುದು. ಇದರ ಹೊರತಾಗಿ ಬೇರೆ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.
ಏಕೆಂದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬೌಲರ್ 40 ಓವರ್ಗಳನ್ನು ಎಸೆದಿರಲಿಲ್ಲ. ಮೊದಲ ಇನಿಂಗ್ಸ್ನಲ್ಲಿ ಅಶ್ವಿನ್ 24.3 ಓವರ್ ಬೌಲಿಂಗ್ ಮಾಡಿದ್ದರೆ, 2ನೇ ಇನಿಂಗ್ಸ್ನಲ್ಲಿ 21.3 ಓವರ್ ಎಸೆದಿದ್ದರು.
ಇತ್ತ ಟೀಮ್ ಇಂಡಿಯಾದ ವೇಗಿಗಳಿಗೂ ಹೆಚ್ಚಿನ ಓವರ್ ಲಭಿಸಿರಲಿಲ್ಲ. ಹೀಗಾಗಿ ದ್ವಿತೀಯ ಟೆಸ್ಟ್ನಲ್ಲಿ ಬೌಲಿಂಗ್ ಲೈನಪ್ನಲ್ಲಿ ಪ್ರಯೋಗ ಮಾಡುವ ಸಲುವಾಗಿ ಅಶ್ವಿನ್ ಅವರಿಗೆ ವಿಶ್ರಾಂತಿ ನೀಡಬಹುದು. ಅದರಂತೆ ಅಶ್ವಿನ್ ಬದಲಿಗೆ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ:
ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ , ಜಯದೇವ್ ಉನದ್ಕತ್ , ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.
Published On - 10:57 pm, Wed, 19 July 23