IND vs WI 3rd ODI: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ

India vs West Indies 3rd ODI: 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ವಿಕೆಟ್​ಗಳಿಂದ ಗೆಲುವು ದಾಖಲಿಸಿದೆ.

IND vs WI 3rd ODI: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 01, 2023 | 10:37 PM

India vs West Indies 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಇತ್ತ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಉಪನಾಯಕ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಲಾಗಿದೆ. ಅದರಂತೆ ಉಮ್ರಾನ್ ಮಲಿಕ್ ಬದಲಿಗೆ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅಕ್ಷರ್ ಪಟೇಲ್ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್ ಕಾಣಿಸಿಕೊಂಡಿದ್ದಾರೆ.

ಸರಣಿ ನಿರ್ಣಾಯಕ ಪಂದ್ಯ:

3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ವಿಕೆಟ್​ಗಳಿಂದ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯ. ಇದಕ್ಕಾಗಿ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲದೀಪ್ ಯಾದವ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಝಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: David Warner: ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.

Published On - 6:40 pm, Tue, 1 August 23

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ