India vs West Indies 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ. ಟ್ರಿನಿಡಾಡ್ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಇತ್ತ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಉಪನಾಯಕ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಮಾಡಲಾಗಿದೆ. ಅದರಂತೆ ಉಮ್ರಾನ್ ಮಲಿಕ್ ಬದಲಿಗೆ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅಕ್ಷರ್ ಪಟೇಲ್ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್ ಕಾಣಿಸಿಕೊಂಡಿದ್ದಾರೆ.
3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ವಿಕೆಟ್ಗಳಿಂದ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯ. ಇದಕ್ಕಾಗಿ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲದೀಪ್ ಯಾದವ್, ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಝಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.
ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.
ಇದನ್ನೂ ಓದಿ: David Warner: ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.
Published On - 6:40 pm, Tue, 1 August 23