IND vs WI 3rd ODI Match Live Streaming: ಕ್ಲೀನ್ ಸ್ವೀಪ್ ಮಾಡುತ್ತಾ ಟೀಂ ಇಂಡಿಯಾ? ಪಂದ್ಯ ಎಷ್ಟು ಗಂಟೆಗೆ ಆರಂಭ?

IND vs WI 3rd ODI Match Live Streaming: ಭಾರತ ಕ್ರಿಕೆಟ್ ತಂಡ ಈಗಾಗಲೇ ಮೊದಲ 2 ಪಂದ್ಯಗಳನ್ನು ಗೆದ್ದು ಮೊದಲ ಸರಣಿಯನ್ನು ವಶಪಡಿಸಿಕೊಂಡಿದ್ದು, ಭಾರತದ ಪ್ರಯತ್ನ ಇದೀಗ ಕ್ಲೀನ್ ಸ್ವೀಪ್ ಆಗಿದೆ. ಮೊದಲೆರಡು ಪಂದ್ಯಗಳನ್ನು ಭಾರತ ನಿಕಟ ಅಂತರದಿಂದ ಗೆದ್ದಿತ್ತು.

IND vs WI 3rd ODI Match Live Streaming: ಕ್ಲೀನ್ ಸ್ವೀಪ್ ಮಾಡುತ್ತಾ ಟೀಂ ಇಂಡಿಯಾ? ಪಂದ್ಯ ಎಷ್ಟು ಗಂಟೆಗೆ ಆರಂಭ?
Follow us
TV9 Web
| Updated By: ಪೃಥ್ವಿಶಂಕರ

Updated on: Jul 27, 2022 | 7:30 AM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ (India vs West Indies) ಬುಧವಾರ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಭಾರತ ಕ್ರಿಕೆಟ್ ತಂಡ ಈಗಾಗಲೇ ಮೊದಲ 2 ಪಂದ್ಯಗಳನ್ನು ಗೆದ್ದು ಮೊದಲ ಸರಣಿಯನ್ನು ವಶಪಡಿಸಿಕೊಂಡಿದ್ದು, ಭಾರತದ ಪ್ರಯತ್ನ ಇದೀಗ ಕ್ಲೀನ್ ಸ್ವೀಪ್ ಆಗಿದೆ. ಮೊದಲೆರಡು ಪಂದ್ಯಗಳನ್ನು ಭಾರತ ನಿಕಟ ಅಂತರದಿಂದ ಗೆದ್ದಿತ್ತು. ಮೊದಲ ಪಂದ್ಯವನ್ನು 3 ರನ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 2 ವಿಕೆಟ್‌ಗಳಿಂದ ಭಾರತ ಗೆದ್ದುಕೊಂಡಿತು. ಮೊದಲೆರಡು ಪಂದ್ಯಗಳಲ್ಲಿ ಭಾರತ ಕಠಿಣ ಪಂದ್ಯವನ್ನು ಎದುರಿಸಿತ್ತು. ಮೊದಲ ಪಂದ್ಯದಲ್ಲಿ ಭಾರತ ಕೊನೆಯ ಎಸೆತದವರೆಗೂ ಹೋರಾಟ ನಡೆಸಬೇಕಾಯಿತು. ಮೊಹಮ್ಮದ್ ಸಿರಾಜ್ (Mohammad Siraj) ಅವರ ಅದ್ಭುತ ಯಾರ್ಕರ್ ಭಾರತಕ್ಕೆ ಗೆಲುವು ತಂದುಕೊಟ್ಟಿತು. ಎರಡನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅಜೇಯ 64 ರನ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು. ಎರಡನೇ ಪಂದ್ಯದಲ್ಲಿ ಶಾಯ್ ಹೋಪ್ 115 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ನಿಕೋಲಸ್ ಪೂರನ್ (Nicholas Pooran) 74 ರನ್ ಗಳಿಸಿ ಬೃಹತ್ ಟಾರ್ಗೆಟ್ ನೀಡಿದ್ದರು. ಆದರೆ ಶ್ರೇಯಸ್ ಅಯ್ಯರ್ (Shreyas Iyer) ಅವರ 63 ರನ್, ಸಂಜು ಸ್ಯಾಮ್ಸನ್ ಅವರ 54 ರನ್ ಮತ್ತು ಅಕ್ಷರ್ ಪಟೇಲ್ ಅವರ 64 ರನ್ಗಳು ಭಾರತಕ್ಕೆ ಗೆಲುವು ತಂದಿತ್ತವು.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ODI ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವು ಬುಧವಾರ ಜುಲೈ 27 ರಂದು ನಡೆಯಲಿದೆ.

ಇದನ್ನೂ ಓದಿ
Image
CWG 2022: ಭಾರತ ಮಹಿಳಾ ಕ್ರಿಕೆಟ್ ತಂಡದ ಮತ್ತೊಬ್ಬ ಆಟಗಾರ್ತಿಗೆ ಕೊರೊನಾ ಸೋಂಕು..!
Image
IND vs WI: ಟಿ20 ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಮೊದಲ 3 ಪಂದ್ಯಗಳಿಂದ ರಾಹುಲ್ ಔಟ್!
Image
IND vs WI: ಟಿ20 ಸರಣಿಗೆ ಟ್ರೆನಿಡಾಡ್ ತಲುಪಿದ ರೋಹಿತ್ ಪಡೆ; ಕನ್ನಡಿಗ ರಾಹುಲ್ ಮಾತ್ರ ನಾಪತ್ತೆ!

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ODI ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯವು ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ODI ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಸಂಜೆ 07:00 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 06:30 ಕ್ಕೆ ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಅಂತಿಮ ODI ನ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯವನ್ನು ನೀವು ಡಿಡಿ ಸ್ಪೋರ್ಟ್ಸ್‌ನಲ್ಲಿ ವೀಕ್ಷಿಸಬಹುದು.

ಭಾರತ vs ವೆಸ್ಟ್ ಇಂಡೀಸ್ 3ನೇ ಮತ್ತು ಕೊನೆಯ ODI ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಭಾರತ ತಂಡ: ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ