WI vs IND 3rd Odi: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

| Updated By: ಝಾಹಿರ್ ಯೂಸುಫ್

Updated on: Jul 27, 2022 | 6:40 PM

India vs West Indies 3rd Odi Playing 11: ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ.

WI vs IND 3rd Odi: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs West Indies
Follow us on

ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ಪೋರ್ಟ್ಸ್ ಆಫ್ ಸ್ಪೇನ್​ನ ಕ್ವೀನ್ಸ್ ಓವಲ್​​ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2-0 ಅಂತರದಿಂದ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ ಈ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಅದರಂತೆ ಅವೇಶ್ ಖಾನ್ ಬದಲಿಗೆ ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಇಶಾನ್ ಕಿಶನ್ ಹಾಗೂ ಅರ್ಷದೀಪ್ ಸಿಂಗ್​ಗೆ ಈ ಬಾರಿ ಕೂಡ ಅವಕಾಶ ಸಿಕ್ಕಿಲ್ಲ.

ಇನ್ನು ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಅದರಂತೆ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಶಾಯ್ ಹೋಪ್(w), ಬ್ರಾಂಡನ್ ಕಿಂಗ್, ಕೀಸಿ ಕಾರ್ಟಿ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್(ಸಿ), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಕೀಮೋ ಪಾಲ್, ಅಕೇಲ್ ಹೋಸೇನ್, ಹೇಡನ್ ವಾಲ್ಷ್, ಜೇಡನ್ ಸೀಲ್ಸ್

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ.