ರೋಹಿತ್ ಔಟ್, ಜೈಸ್ವಾಲ್ ಇನ್; ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ಭಾರತ vs ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ ಭಾನುವಾರ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ ಕ್ಲೀನ್ ಸ್ವೀಪ್ ಗುರಿ ಹೊಂದಿದೆ. ಮೂರನೇ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XIನಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ. ರೋಹಿತ್‌ಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಸಿಗಬಹುದು. ಪ್ರಸಿದ್ಧ್ ಕೃಷ್ಣ ಬದಲಿಗೆ ಮೊಹಮ್ಮದ್ ಸಿರಾಜ್ ಆಡುವ ಸಾಧ್ಯತೆ ಇದೆ. ಯುವ ಆಟಗಾರರಿಗೆ ಅವಕಾಶ ನೀಡಿ ಬೆಂಚ್ ಸಾಮರ್ಥ್ಯ ಪರೀಕ್ಷಿಸುವ ನಿರೀಕ್ಷೆ ಇದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಪಂದ್ಯ ಭಾನುವಾರ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಭಾರತ ತಂಡವು ಈಗಾಗಲೇ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದು, ಇದೀಗ ಕ್ಲೀನ್ ಸ್ವೀಪ್ ಮಾಡುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. ಭಾರತ ಈಗಾಗಲೇ ಸರಣಿಯನ್ನು ಗೆದ್ದುಕೊಂಡಿರುವುದರಿಂದ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11ನಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾಯ್ದಿದ್ದ ಆಟಗಾರರಿಗೆ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು.
ರೋಹಿತ್ ಶರ್ಮಾಗೆ ವಿಶ್ರಾಂತಿ
ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್ ಅವರನ್ನು ಪ್ರಯತ್ನಿಸುವ ಆಯ್ಕೆಯೂ ಟೀಂ ಇಂಡಿಯಾಗಿದೆ. ರೋಹಿತ್ ಫಾರ್ಮ್‌ನಲ್ಲಿರುವುದರಿಂದ ಯಶಸ್ವಿಗೆ ಅವಕಾಶ ಸಿಕ್ಕರೆ, ಅದು ಅವರ ಮೇಲೆ ಪರಿಣಾಮ ಬೀರುವುದಿಲ್ಲ. ಆದಾಗ್ಯೂ, ರೋಹಿತ್ ಜೊತೆ ಹೋಗಬೇಕೆ ಅಥವಾ ಜೈಸ್ವಾಲ್‌ಗೆ ಅವಕಾಶ ನೀಡಬೇಕೆ ಎಂಬುದು ಸಂಪೂರ್ಣವಾಗಿ ತಂಡದ ನಿರ್ವಹಣೆಯ ಮೇಲೆ ಅವಲಂಬಿತವಾಗಿರುತ್ತದೆ. ಜೈಸ್ವಾಲ್ರನ್ನು ರೋಹಿತ್ ಶರ್ಮಾಗೆ ಬದಲಿಯಾಗಿ ನೋಡುತ್ತಿರುವುದರಿಂದ ಅವರಿಗೆ ಅವಕಾಶ ನೀಡುವುದು ತಂಡಕ್ಕೆ ಪ್ರಯೋಜನಕಾರಿಯಾಗಲಿದೆ.
ಜೈಸ್ವಾಲ್‌ಗೆ ಅವಕಾಶ ಸಿಕ್ಕರೆ, ಅವರು ಗಿಲ್ ಅವರೊಂದಿಗೆ ಆರಂಭಿಕರಾಗಿ ಆಡಲಿದ್ದಾರೆ. ನಂತರ ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್, ನಮನ್ ಧೀರ್ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಉಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸುವ ಹಾಗಿಲ್ಲ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ನಾಲ್ವರಿಗೆ ಬಿಟ್ಟರೆ ಉಳಿದವರಿಗೆ ಬ್ಯಾಟಿಂಗ್ ಮಾಡುವ ಅವಕಾಶವೇ ಸಿಕ್ಕಿಲ್ಲ. ಹಾಗಾಗಿ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.
ಪ್ರಸಿದ್ಧ್ ಬದಲಿಗೆ ಸಿರಾಜ್ಗೆ ಅವಕಾಶ
ಆದಾಗ್ಯೂ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯಾಗುವುದು ಖಚಿತವಾಗಿದ್ದು, ಎರಡನೇ ಏಕದಿನ ಪಂದ್ಯದ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಪ್ರಸಿದ್ಧ್ ಕೃಷ್ಣ ಮೂರನೇ ಪಂದ್ಯಕ್ಕೆ ಲಭ್ಯವಿಲ್ಲ. ಹೀಗಾಗಿ ಅನುಭವಿ ಮೊಹಮ್ಮದ್ ಸಿರಾಜ್ಗೆ ಆಡುವ ಅವಕಾಶ ಸಿಗಬಹುದು. ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದು, ಆಕಿಬ್ ನಬಿ ಮತ್ತು ಗುರ್ನೂರ್ ಬ್ರಾರ್ ಅವರಿಗೆ ಬೆಂಬಲ ನೀಡುತ್ತಾರೆ. ಕುಲ್ದೀಪ್ ಯಾದವ್ ತಂಡದಲ್ಲಿರುವ ಏಕೈಕ ಸ್ಪಿನ್ನರ್ ಆಗಿರಲಿದ್ದು, ರವೀಂದ್ರ ಜಡೇಜಾ ಸ್ಪಿನ್ ಆಲ್ರೌಂಡರ್ ಆಗಿ ಆಡಲಿದ್ದಾರೆ.
2027 ರ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್
ಮೂರನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್, ನಮನ್ ಧೀರ್, ರವೀಂದ್ರ ಜಡೇಜಾ, ಆಕಿಬ್ ನಬಿ, ಗುರ್ನೂರ್ ಬ್ರಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.




