ಟೀಮ್ ಇಂಡಿಯಾ ಪಾಲಿಗೆ ಪೂರನ್ ವಿಕೆಟ್ ನಿರ್ಣಾಯಕ..!

India vs West Indies 3rd T20: ದ್ವಿತೀಯ ಟಿ20 ಪಂದ್ಯದಲ್ಲಿ ಪೂರನ್​ 67 ರನ್​ ಚಚ್ಚುವ ಮೂಲಕ ವೆಸ್ಟ್ ಇಂಡೀಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ನಿಕೋಲಸ್ ಪೂರನ್ ಅವರನ್ನು ಬೇಗನೆ ಔಟ್ ಮಾಡಲೇಬೇಕು.

ಟೀಮ್ ಇಂಡಿಯಾ ಪಾಲಿಗೆ ಪೂರನ್ ವಿಕೆಟ್ ನಿರ್ಣಾಯಕ..!
Nicholas Pooran
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 08, 2023 | 4:53 PM

India vs West Indies 3rd T20: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಮ್ಯಾಚ್ ಇಂದು (ಆಗಸ್ಟ್ 8) ನಡೆಯಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಟೀಮ್ ಇಂಡಿಯಾ (Team India) ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲೆರಡು ಮ್ಯಾಚ್​ಗಳಲ್ಲಿ ಗೆದ್ದಿರುವ ವಿಂಡೀಸ್ ಈ ಪಂದ್ಯದಲ್ಲಿ ಜಯ ಸಾಧಿಸಿದರೆ 3-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಬಹುದು.

ಇತ್ತ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಲು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು. ಇದಕ್ಕಾಗಿ ಭಾರತೀಯ ಬೌಲರ್​ಗಳು ನಿಕೋಲಸ್ ಪೂರನ್​ಗಾಗಿ ವಿಶೇಷ ತಂತ್ರಗಳನ್ನು ಹೆಣೆಯಬೇಕಿದೆ. ಏಕೆಂದರೆ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಪೂರನ್ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ಸಾಕ್ಷಿಯೇ 2ನೇ ಟಿ20 ಪಂದ್ಯ.

ಗಯಾನಾದಲ್ಲೇ ನಡೆದಿದ್ದ ಈ ಪಂದ್ಯದಲ್ಲಿ ಪೂರನ್ ಕೇವಲ 40 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 67 ರನ್​ ಸಿಡಿಸಿದ್ದರು. ಅಲ್ಲದೆ ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಾಖಲೆಯನ್ನೂ ಕೂಡ ಹೊಂದಿದ್ದಾರೆ.

  • 2021 ರಲ್ಲಿ ಇದೇ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟಿ20 ಪಂದ್ಯದಲ್ಲಿ ಪೂರನ್ ಕೇವಲ 33 ಎಸೆತಗಳಲ್ಲಿ ಅಜೇಯ 62 ರನ್ ಸಿಡಿಸಿದ್ದರು.
  • 2022 ರಲ್ಲಿ ಪ್ರೊವಿಡೆನ್ಸ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 39 ಎಸೆತಗಳಲ್ಲಿ ಅಜೇಯ 74 ರನ್ ಚಚ್ಚಿದ್ದರು.
  • 2023 ರಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ 40 ಎಸೆತಗಳಲ್ಲಿ 67 ರನ್ ಸಿಡಿಸಿದ್ದಾರೆ. ಅಂದರೆ ಪೊವಿಡೆನ್ಸ್ ಮೈದಾನದಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕಗಳನ್ನು ಬಾರಿಸಿದ ವಿಶೇಷ ದಾಖಲೆಯೊಂದು ನಿಕೋಲಸ್ ಪೂರನ್ ಹೆಸರಿನಲ್ಲಿದೆ.

ಇದೀಗ ಇದೇ ಮೈದಾನದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ನಿರ್ಣಾಯಕ ಪಂದ್ಯವಾಡುತ್ತಿದೆ. ಹೀಗಾಗಿ ಪೂರನ್ ವಿಕೆಟ್ ಭಾರತ ತಂಡದ ಪಾಲಿಗೆ ತುಂಬಾ ಮಹತ್ವದ್ದು.

ವಿಂಡೀಸ್ ಬ್ಯಾಟಿಂಗ್ ವೈಫಲ್ಯ: ವೆಸ್ಟ್ ಇಂಡೀಸ್ ತಂಡವು ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶಿಸಿಲ್ಲ. ಇದಕ್ಕೆ ಸಾಕ್ಷಿಯೇ ಎರಡೂ ಪಂದ್ಯಗಳಲ್ಲೂ ವಿಂಡೀಸ್ ಪಡೆ ಕಲೆಹಾಕಿದ ಸ್ಕೋರ್.

ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಕೇವಲ 149 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 2ನೇ ಟಿ20 ಪಂದ್ಯದಲ್ಲೂ 152 ರನ್​ ಚೇಸ್​ ಮಾಡಲು 8 ವಿಕೆಟ್ ಕಳೆದುಕೊಂಡಿತ್ತು. ಅಂದರೆ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧ ಪರಾಕ್ರಮ ಮೆರೆಯಲು ವಿಂಡೀಸ್ ದಾಂಡಿಗರಿಗೆ ಸಾಧ್ಯವಾಗಿಲ್ಲ ಎಂದೇ ಹೇಳಬಹುದು.

ಪೂರನ್ ಪವರ್: ವೆಸ್ಟ್ ಇಂಡೀಸ್​ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗಿದ್ದರೂ ಮತ್ತೊಂದೆಡೆ ನಿಕೋಲಸ್ ಪೂರನ್ ಮಾತ್ರ ಅಬ್ಬರಿಸುತ್ತಿದ್ದಾರೆ. ಇದರಿಂದಾಗಿಯೇ ವಿಂಡೀಸ್​​ಗೆ 2 ಗೆಲುವು ದಕ್ಕಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್​ನ ಬಹುತೇಕ ಬ್ಯಾಟರ್​​ಗಳು ವಿಫಲರಾದರೂ ನಿಕೋಲಸ್ ಪೂರನ್ 41 ರನ್​ ಬಾರಿಸಿದ್ದರು.

ಇದನ್ನೂ ಓದಿ: ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್

ಇನ್ನು ದ್ವಿತೀಯ ಟಿ20 ಪಂದ್ಯದಲ್ಲಿ ಪೂರನ್​ 67 ರನ್​ ಚಚ್ಚುವ ಮೂಲಕ ವೆಸ್ಟ್ ಇಂಡೀಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ನಿಕೋಲಸ್ ಪೂರನ್ ಅವರನ್ನು ಬೇಗನೆ ಔಟ್ ಮಾಡಲೇಬೇಕು. ಒಂದು ವೇಳೆ ಪೂರನ್ ಕ್ರೀಸ್ ಕಚ್ಚಿ ನಿಂತರೆ ಪವರ್​ ತೋರಿಸುವುದರಲ್ಲಿ ಅನುಮಾನವೇ ಇಲ್ಲ. ಇದಕ್ಕೆ ಸಾಕ್ಷಿಯೇ ಮೊದಲೆರಡು ಪಂದ್ಯಗಳಲ್ಲಿ ಕಂಡು ಬಂದ ಬ್ಯಾಟಿಂಗ್ ಪರಾಕ್ರಮ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ