IND vs WI: ಟೀಮ್ ಇಂಡಿಯಾಗೆ ಸ್ಪೋಟಕ ದಾಂಡಿಗ ಎಂಟ್ರಿ: ಹೀಗಿದೆ ಪ್ಲೇಯಿಂಗ್ 11
India vs West indies 3rd T20: ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿದೆ.
India vs West indies 3rd T20: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯ ಶುರುವಾಗಿದೆ. ಗಯಾನಾದ ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್‌ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯದ ಮೂಲಕ ಎಡಗೈ ಸ್ಪೋಟಕ ದಾಂಡಿಗ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಕುಲ್ದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಈ ಇಬ್ಬರ ಆಗಮನದೊಂದಿಗೆ ಇಶಾನ್ ಕಿಶನ್ ಹಾಗೂ ರವಿ ಬಿಷ್ಣೋಯ್ ತಂಡದಿಂದ ಹೊರಗುಳಿದಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್.
ಮಾಡು ಇಲ್ಲವೇ ಮಡಿ ಪಂದ್ಯ:
ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ವಿಂಡೀಸ್ ಪಡೆ ಗೆಲುವು ದಕ್ಕಿಸಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು.
ಇತ್ತ ಟೀಮ್ ಇಂಡಿಯಾ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅಲ್ಲದೆ 3-2 ಅಂತರದಿಂದ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ಸರಣಿ ಗೆಲ್ಲಬಹುದು. ಹೀಗಾಗಿ 3ನೇ ಟಿ20 ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ.
ಇತಿಹಾಸ ಬರೆಯಲಿದ್ದಾರಾ ಕೆರಿಬಿಯನ್ನರು:
ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಗೆದ್ದರೆ ವೆಸ್ಟ್ ಇಂಡೀಸ್ ಸರಣಿ ವಶಪಡಿಸಿಕೊಳ್ಳಬಹುದು. ಈ ಮೂಲಕ 6 ವರ್ಷಗಳ ಬಳಿಕ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಬಹುದು. ಅಂದರೆ ವಿಂಡೀಸ್ ಬಳಗ ಕೊನೆಯ ಬಾರಿಗೆ ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದಿರುವುದು 2017 ರಲ್ಲಿ. ಅಂದು ಏಕೈಕ ಟಿ20 ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ವೆಸ್ಟ್ ಇಂಡೀಸ್ ಪ್ರಶಸ್ತಿ ಜಯಿಸಿತ್ತು.
ಇದಾದ ಬಳಿಕ ವೆಸ್ಟ್ ಇಂಡೀಸ್ ಪಡೆಯ ವಿರುದ್ಧ ಮೇಲುಗೈ ಸಾಧಿಸುತ್ತಾ ಬಂದಿರುವ ಟೀಮ್ ಇಂಡಿಯಾ ಈ ಬಾರಿ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ಸೋತು ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಹಿನ್ನಡೆ ಅನುಭವಿಸಿದೆ.
ಭಾರತ ಟಿ20 ತಂಡ:
ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ವೆಸ್ಟ್ ಇಂಡೀಸ್ ಟಿ20 ತಂಡ:
ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.