India vs West Indies: ಅಂಕಿ ಅಂಶಗಳ ಪ್ರಕಾರ ವೆಸ್ಟ್ ಇಂಡೀಸ್ ತಂಡದ್ದೇ ಮೇಲುಗೈ…ಆದರೆ

| Updated By: ಝಾಹಿರ್ ಯೂಸುಫ್

Updated on: Jul 11, 2023 | 9:26 PM

India vs West Indies Head to Head: ಭಾರತ ತಂಡವು ವೆಸ್ಟ್ ಇಂಡೀಸ್​ನ ನೆಲದಲ್ಲಿ ಇದುವರೆಗೆ 51 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡ 9 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ವಿಂಡೀಸ್ ಪಡೆಯು 16 ಪಂದ್ಯಗಳಲ್ಲಿ ಜಯ ಸಾಧಿಸಿದೆ.

India vs West Indies: ಅಂಕಿ ಅಂಶಗಳ ಪ್ರಕಾರ ವೆಸ್ಟ್ ಇಂಡೀಸ್ ತಂಡದ್ದೇ ಮೇಲುಗೈ...ಆದರೆ
India vs West Indies
Follow us on

India vs West Indies 1st Test: ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಬುಧವಾರದಿಂದ (ಜು.12) ಶುರುವಾಗಲಿದೆ. 2 ಪಂದ್ಯಗಳ ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಒಟ್ಟು 98 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಮೇಲುಗೈ ಸಾಧಿಸಿರುವುದು ಕೆರಿಬಿಯನ್ನರು ಎಂಬುದು ವಿಶೇಷ. ಅಂದರೆ 98 ಟೆಸ್ಟ್ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡವು ಬರೋಬ್ಬರಿ 30 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೇ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 22 ಪಂದ್ಯಗಳಲ್ಲಿ ಮಾತ್ರ. ಇನ್ನು 46 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿತ್ತು. ಅಂದರೆ ಇಲ್ಲಿ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾಗಿಂತ ವೆಸ್ಟ್ ಇಂಡೀಸ್​ ಮೇಲುಗೈ ಸಾಧಿಸಿರುವುದು ಸ್ಪಷ್ಟ.

ಕೆರಿಬಿಯನ್​ನ ಅಂಕಿ ಅಂಶಗಳು:

ಭಾರತ ತಂಡವು ವೆಸ್ಟ್ ಇಂಡೀಸ್​ನ ನೆಲದಲ್ಲಿ ಇದುವರೆಗೆ 51 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡ 9 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ವಿಂಡೀಸ್ ಪಡೆಯು 16 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 26 ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿತ್ತು. ಅಂದರೆ ತವರಿನಲ್ಲೂ ವೆಸ್ಟ್ ಇಂಡೀಸ್​ ಟೀಮ್ ಇಂಡಿಯಾ ವಿರುದ್ಧ ಮೇಲುಗೈ ಸಾಧಿಸಿದ್ದಾರೆ.

ಕೊನೆಯ 5 ಮುಖಾಮುಖಿ:

ಕೊನೆಯ ಬಾರಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಆಡಿದ್ದು 2019 ರಲ್ಲಿ. ಈ ವೇಳೆ ಟೀಮ್ ಇಂಡಿಯಾ ಪಾರುಪತ್ಯ ಮೆರೆದಿತ್ತು ಎಂಬುದು ವಿಶೇಷ. ಅಂದರೆ ಕೊನೆಯ 5 ಮುಖಾಮುಖಿಯಲ್ಲಿ ಭಾರತ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ವೆಸ್ಟ್ ಇಂಡೀಸ್ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಅಂದರೆ ಇಲ್ಲಿ ಕೊನೆಯ ಐದು ಪಂದ್ಯಗಳ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡರೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್​ನಲ್ಲಿ ಸೋತಿಲ್ಲ. ಅದರಲ್ಲೂ 2016 ರ ಬಳಿಕ ಟೀಮ್ ಇಂಡಿಯಾ ವಿರುದ್ಧ ವೆಸ್ಟ್ ಇಂಡೀಸ್ ಗೆದ್ದಿಲ್ಲ ಎನ್ನಬಹುದು. ಹೀಗಾಗಿಯೇ ಈ ಬಾರಿ ಕೂಡ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಮರೆಯುವುದನ್ನು ಎದುರು ನೋಡಬಹುದು.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲಿಕ್ ಅಥಾನಾಜೆ, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಝಾರಿ ಜೋಸೆಫ್, ರೇಮನ್ ರೈಫರ್, ಕೆಮರ್ ರೋಚ್, ತೇಜ್​ನರೈನ್ ಚಂದ್ರಪಾಲ್, ಕಿರ್ಕ್ ಮೆಕ್​ಕೆಂಝಿ, ಜೊಮೆಲ್ ವಾರ್ರಿಕನ್.