AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies: ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ

India vs West Indies: ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಬಿಸಿಸಿಐ ಕೂಡ ಸಂತಾಸ ಸೂಚಿಸಿದ್ದು, ಹಾಗೆಯೇ ಲತಾ ಜಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

India vs West Indies: ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ
India vs West Indies
TV9 Web
| Updated By: ಝಾಹಿರ್ ಯೂಸುಫ್|

Updated on: Feb 06, 2022 | 2:11 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಆರಂಭವಾಗಿದೆ. ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇದು ಭಾರತದ 1000ನೇ ಏಕದಿನ ಪಂದ್ಯ ಎಂಬ ವಿಶೇಷ ಒಂದೆಡೆಯಾದರೆ, ಈ ಐತಿಹಾಸಿಕ ಪಂದ್ಯಕ್ಕೂ ಮುನ್ನ ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ ಎಂಬ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಹೀಗಾಗಿ ಭಾರತ ತಂಡದ ತಂಡದ ಆಟಗಾರರು ಈ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದೆ. ಅಷ್ಟೇ ಅಲ್ಲದೆ ಪಂದ್ಯ ಆರಂಭಕ್ಕೂ ಮುನ್ನ ಒಂದು ನಿಮಿಷ ಮೌನಾಚರಣೆ ನಡೆಸಿ ಗೌರವ ಸಲ್ಲಿಸಿದರು.

ಲತಾ ಮಂಗೇಶ್ಕರ್ ಅವರು ಇಂದು ಮುಂಬೈನಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು. ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು. ಲತಾ ಮಂಗೇಶ್ಕರ್ ನಿಧನಕ್ಕೆ ಟೀಮ್ ಇಂಡಿಯಾ ಆಟಗಾರರ ಹೊರತಾಗಿ ಭಾರತದ ಮಾಜಿ ಕ್ರಿಕೆಟಿಗರು ಕೂಡ ಸಂತಾಪ ಸೂಚಿಸಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಕಾಮೆಂಟರಿ ಮಾಡುತ್ತಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಲತಾ ಮಂಗೇಶ್ಕರ್ ಅವರ ನಿಧನ ದೊಡ್ಡ ನಷ್ಟ ಎಂದು ಬಣ್ಣಿಸಿದ್ದಾರೆ. ಲತಾ ಜಿ ಅವರು ಕ್ರಿಕೆಟ್‌ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದರು. ಇದೀಗ ಇಡೀ ದೇಶವೇ ಗಾನ ಕೋಗಿಲೆಯನ್ನು ಕಳೆದುಕೊಂಡ ದುಖಃದಲ್ಲಿದೆ ಎಂದು ಲಿಟಲ್ ಮಾಸ್ಟರ್ ಹೇಳಿದರು.

ಇನ್ನು ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಬಿಸಿಸಿಐ ಕೂಡ ಸಂತಾಸ ಸೂಚಿಸಿದ್ದು, ಹಾಗೆಯೇ ಲತಾ ಜಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(India vs West Indies: India will wear black arm bands to mourn the passing of iconic singer Lata Mangeshkar)