ವೆಸ್ಟ್ ಇಂಡೀಸ್, ಐರ್ಲೆಂಡ್‌ ವಿರುದ್ಧ ಏಕದಿನ, ಟಿ20 ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

India women's cricket: ಭಾರತೀಯ ಮಹಿಳಾ ಕ್ರಿಕೆಟ್ ತಂಡವು 2024-25ರಲ್ಲಿ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಡಿಸೆಂಬರ್‌ನಲ್ಲಿ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಜನವರಿ 2025ರಲ್ಲಿ ಐರ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.

ವೆಸ್ಟ್ ಇಂಡೀಸ್, ಐರ್ಲೆಂಡ್‌ ವಿರುದ್ಧ ಏಕದಿನ, ಟಿ20 ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Nov 14, 2024 | 2:56 PM

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಹಾಲಿ ಟಿ20 ಚಾಂಪಿಯನ್ ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದ ಭಾರತ ವನಿತಾ ಪಡೆ, ಇದೀಗ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್‌ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿರುವ ಭಾರತ ವನಿತಾ ಪಡೆ, ಶೀಘ್ರದಲ್ಲೇ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳಿಗೆ ಆತಿಥ್ಯವಹಿಸಲು ಸಜ್ಜಾಗಿದೆ. ಮೊದಲು ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಆಡಲಿದ್ದು, ಬಳಿಕ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಎರಡೂ ಸರಣಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧ ಸರಣಿ

ಮೊದಲನೆಯದಾಗಿ ವೆಸ್ಟ್ ಇಂಡೀಸ್ ತಂಡ ಡಿಸೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಟಿ20 ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7:30 ರಿಂದ ಆರಂಭವಾಗಲಿವೆ. ಇದಾದ ಬಳಿಕ ಬರೋಡಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಮಧ್ಯಾಹ್ನ 1:30ಕ್ಕೆ ಮತ್ತು ಮೂರನೇ ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.

ಟಿ20 ಸರಣಿ ವೇಳಾಪಟ್ಟಿ

  • ಭಾರತ vs ವೆಸ್ಟ್ ಇಂಡೀಸ್, ಮೊದಲನೇ ಟಿ20 – 15 ಡಿಸೆಂಬರ್
  • ಭಾರತ vs ವೆಸ್ಟ್ ಇಂಡೀಸ್, 2ನೇ ಟಿ20 – 17 ಡಿಸೆಂಬರ್
  • ಭಾರತ vs ವೆಸ್ಟ್ ಇಂಡೀಸ್, 3ನೇ ಟಿ20 – 19 ಡಿಸೆಂಬರ್

ಏಕದಿನ ಸರಣಿ ವೇಳಾಪಟ್ಟಿ

  • ಭಾರತ vs ವೆಸ್ಟ್ ಇಂಡೀಸ್, ಮೊದಲನೇ ಏಕದಿನ ಪಂದ್ಯ – 22 ಡಿಸೆಂಬರ್
  • ಭಾರತ vs ವೆಸ್ಟ್ ಇಂಡೀಸ್, 2ನೇ ಏಕದಿನ ಪಂದ್ಯ – 24 ಡಿಸೆಂಬರ್
  • ಭಾರತ vs ವೆಸ್ಟ್ ಇಂಡೀಸ್, ಮೂರನೇ ಏಕದಿನ ಪಂದ್ಯ – 27 ಡಿಸೆಂಬರ್

ಐರ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ

ವೆಸ್ಟ್ ಇಂಡೀಸ್ ನಂತರ, ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಜನವರಿ 2025 ರಲ್ಲಿ ಭಾರತ ಪ್ರವಾಸ ಮಾಡಲಿದೆ. ರಾಜ್‌ಕೋಟ್‌ನಲ್ಲಿ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಏಕದಿನ ಸರಣಿಯು ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ನ ಭಾಗವಾಗಿದೆ.

ಏಕದಿನ ಸರಣಿ ವೇಳಾಪಟ್ಟಿ

  • ಭಾರತ vs ಐರ್ಲೆಂಡ್ ಮೊದಲನೇ ಏಕದಿನ – 10 ಜನವರಿ
  • ಭಾರತ vs ಐರ್ಲೆಂಡ್ 2ನೇ ಏಕದಿನ – 12 ಜನವರಿ
  • ಭಾರತ vs ಐರ್ಲೆಂಡ್ 3ನೇ ಏಕದಿನ – 15 ಜನವರಿ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ