ಇತ್ತೀಚೆಗಷ್ಟೆ ಮುಕ್ತಾಯಗೊಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಹಾಲಿ ಟಿ20 ಚಾಂಪಿಯನ್ ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದ ಭಾರತ ವನಿತಾ ಪಡೆ, ಇದೀಗ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿರುವ ಭಾರತ ವನಿತಾ ಪಡೆ, ಶೀಘ್ರದಲ್ಲೇ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳಿಗೆ ಆತಿಥ್ಯವಹಿಸಲು ಸಜ್ಜಾಗಿದೆ. ಮೊದಲು ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಆಡಲಿದ್ದು, ಬಳಿಕ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಎರಡೂ ಸರಣಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಮೊದಲನೆಯದಾಗಿ ವೆಸ್ಟ್ ಇಂಡೀಸ್ ತಂಡ ಡಿಸೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಟಿ20 ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7:30 ರಿಂದ ಆರಂಭವಾಗಲಿವೆ. ಇದಾದ ಬಳಿಕ ಬರೋಡಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಮಧ್ಯಾಹ್ನ 1:30ಕ್ಕೆ ಮತ್ತು ಮೂರನೇ ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
🚨 NEWS 🚨
Team India (Senior Women) Fixtures for @IDFCFIRSTBank Home Series against West Indies and Ireland announced. #TeamIndia | #INDvWI | #INDvIRE
Details 🔽 https://t.co/gXJCVGvofm pic.twitter.com/CKnftSKVnp
— BCCI Women (@BCCIWomen) November 13, 2024
ವೆಸ್ಟ್ ಇಂಡೀಸ್ ನಂತರ, ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಜನವರಿ 2025 ರಲ್ಲಿ ಭಾರತ ಪ್ರವಾಸ ಮಾಡಲಿದೆ. ರಾಜ್‌ಕೋಟ್‌ನಲ್ಲಿ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಏಕದಿನ ಸರಣಿಯು ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ನ ಭಾಗವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ