ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಏಕದಿನ ಸರಣಿ ಭಾನುವಾರದಿಂದ (ಫೆ.6) ಶುರುವಾಗಲಿದೆ. ಆದರೆ ಈ ಸರಣಿಗೂ ಮುನ್ನ ಟೀಮ್ ಇಂಡಿಯಾದ (Team India) ಅತೀ ದೊಡ್ಡ ಚಿಂತೆ ಎಂದರೆ ಆರಂಭಿಕನ ಕೊರತೆ. ಏಕೆಂದರೆ ಸಹೋದರಿಯ ಮದುವೆ ನಿಮಿತ್ತ ಕೆಎಲ್ ರಾಹುಲ್ (KL Rahul) ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ತಂಡದಲ್ಲಿದ್ದ ಆರಂಭಿಕರಾದ ಶಿಖರ್ ಧವನ್ (Shikar Dhawan) ಮತ್ತು ರುತುರಾಜ್ ಗಾಯಕ್ವಾಡ್ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಬ್ಯಾಕಪ್ ಓಪನರ್ಗಳಾಗಿ ಮಯಾಂಕ್ ಅಗರ್ವಾಲ್ ಹಾಗೂ ಇಶಾನ್ ಕಿಶನ್ (Ishan Kishan) ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ನನ್ನ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಅನುಭವಿ ಮಯಾಂಕ್ ಅಗರ್ವಾಲ್ ತಂಡಕ್ಕೆ ಸೇರ್ಪಡೆಯಾಗಿದ್ದರೂ, ಅವರು ಪ್ರಸ್ತುತ ಐಸೋಲೇಶನ್‌ನಲ್ಲಿದ್ದಾರೆ. ಅವರ ಕ್ವಾರಂಟೈನ್ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಟೀಮ್ ಇಂಡಿಯಾ ಸ್ಪಿನ್ನರ್ಗಳಾದ ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್ ಜೋಡಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್, ಕುಲದೀಪ್ ಮತ್ತು ಯುಜ್ವೇಂದ್ರ ಚಹಾಲ್ ಈ ಹಿಂದೆ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ನಾವು ಕೆಲವು ವಿಭಿನ್ನ ತಂಡದ ಸಂಯೋಜನೆಗಳನ್ನು ಪ್ರಯತ್ನಿಸಲು ಬಯಸಿದ್ದರಿಂದ ಅವರನ್ನು ಕೈಬಿಡಬೇಕಾಯಿತು. ಆದರೆ ಅವರನ್ನು ಮತ್ತೆ ಒಟ್ಟಿಗೆ ಸೇರಿಸುವುದು ಖಂಡಿತವಾಗಿಯೂ ನನ್ನ ಮನಸ್ಸಿನಲ್ಲಿದೆ ಎಂದು ತಿಳಿಸಿದರು. ಈ ಮೂಲಕ ಕುಲ್ಚಾ ಜೋಡಿ ಮತ್ತೆ ತಂಡದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಸೂಚನೆ ನೀಡಿದರು.
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:
ಫೆಬ್ರವರಿ 6 – 1 ನೇ ODI, ಅಹಮದಾಬಾದ್
ಫೆಬ್ರವರಿ 9 – 2 ನೇ ODI, ಅಹಮದಾಬಾದ್
ಫೆಬ್ರವರಿ 11 – 3 ನೇ ODI, ಅಹಮದಾಬಾದ್
ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.
ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್
(India vs West Indies: Ishan Kishan will open with me as he is only option available, says Rohit Sharma)