IND vs WI: ಎರಡನೇ ಏಕದಿನ ಪಂದ್ಯಕ್ಕೆ ಇಶಾನ್ ಡೌಟ್.. ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು?

IND vs WI: ಕೆಎಲ್ ರಾಹುಲ್ ಮುಂದಿನ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಹೀಗಿರುವಾಗ ಇಶಾನ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸುವುದು ಅನುಮಾನವಾಗಿದೆ.

IND vs WI: ಎರಡನೇ ಏಕದಿನ ಪಂದ್ಯಕ್ಕೆ ಇಶಾನ್ ಡೌಟ್.. ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು?
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 07, 2022 | 10:27 PM

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಏಕದಿನ ಸರಣಿ ಅಹಮದಾಬಾದ್‌ನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಇಶಾನ್ ಕಿಶನ್ (Ishant Kishan) ಪಂದ್ಯದ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಶಿಖರ್ ಧವನ್ (Shikhar Dhawan) ಕೊರೊನಾಗೆ ತುತ್ತಾದ ನಂತರ ಇಶಾನ್​ಗೆ ಆರಂಭಿಕನ ಸ್ಥಾನ ಸಿಕ್ಕಿತ್ತು. ಆದರೆ ಈಗ ರೋಹಿತ್ ಮತ್ತು ಇಶಾನ್ ಕಿಶನ್ ಮುಂದಿನ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯವುದು ಅನುಮಾನವಾಗಿದೆ.

ಅಹಮದಾಬಾದ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಮತ್ತು ಇಶಾನ್ ಉತ್ತಮ ಜೊತೆಯಾಟವನ್ನು ಹಂಚಿಕೊಂಡರು. ಆದರೆ ಇಶಾನ್ ವೈಯಕ್ತಿಕ ಸ್ಕೋರ್ 28ಕ್ಕೆ ಔಟಾದರು. ಅಷ್ಟರಲ್ಲಿ ರೋಹಿತ್ 60 ರನ್ ಗಳಿಸಿದ್ದರು. ಕೋವಿಡ್-19 ಪಾಸಿಟಿವ್ ಆಗಿದ್ದರಿಂದ ಧವನ್‌ಗೆ ಆಡಲು ಸಾಧ್ಯವಾಗಲಿಲ್ಲ. ಆದರೆ, ಇದೀಗ ಕೆಎಲ್ ರಾಹುಲ್ ಮುಂದಿನ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಹೀಗಿರುವಾಗ ಇಶಾನ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸುವುದು ಅನುಮಾನವಾಗಿದೆ.

ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಅನುಭವಿ ಆಟಗಾರ. ಭಾರತ ಪರ ಹಲವು ಪಂದ್ಯಗಳಲ್ಲಿ ಮಿಂಚಿದ್ದಾರೆ. ಆರಂಭಿಕರಾಗಿ ಅವರ ಪ್ರದರ್ಶನವು ಉತ್ತಮವಾಗಿದೆ. ಹೀಗಾಗಿ ನಾಯಕ ರೋಹಿತ್‌ ಕೆಎಲ್‌ ಅವರನ್ನು ಓಪನಿಂಗ್‌ಗೆ ಕರೆತರುವ ಸಾಧ್ಯತೆ ಇದೆ. ತಂಗಿಯ ಮದುವೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಹುಲ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್​ಗಳಲ್ಲಿ 176 ರನ್ ಗಳಿಗೆ ಆಲೌಟ್ ಆಯಿತು. ಭಾರತ 28 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು. ರೋಹಿತ್ ಮತ್ತು ಇಶಾನ್ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಹೂಡಾ ಕೂಡ ಉತ್ತಮ ಪ್ರದರ್ಶನ ನೀಡಿದರು. ಸೂರ್ಯಕುಮಾರ್ ಔಟಾಗದೆ 34 ಮತ್ತು ದೀಪಕ್ 26 ರನ್ ಗಳಿಸಿದರು.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ