ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಏಕದಿನ ಸರಣಿ ಅಹಮದಾಬಾದ್‌ನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಇಶಾನ್ ಕಿಶನ್ (Ishant Kishan) ಪಂದ್ಯದ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಶಿಖರ್ ಧವನ್ (Shikhar Dhawan) ಕೊರೊನಾಗೆ ತುತ್ತಾದ ನಂತರ ಇಶಾನ್ಗೆ ಆರಂಭಿಕನ ಸ್ಥಾನ ಸಿಕ್ಕಿತ್ತು. ಆದರೆ ಈಗ ರೋಹಿತ್ ಮತ್ತು ಇಶಾನ್ ಕಿಶನ್ ಮುಂದಿನ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯವುದು ಅನುಮಾನವಾಗಿದೆ.
ಅಹಮದಾಬಾದ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಮತ್ತು ಇಶಾನ್ ಉತ್ತಮ ಜೊತೆಯಾಟವನ್ನು ಹಂಚಿಕೊಂಡರು. ಆದರೆ ಇಶಾನ್ ವೈಯಕ್ತಿಕ ಸ್ಕೋರ್ 28ಕ್ಕೆ ಔಟಾದರು. ಅಷ್ಟರಲ್ಲಿ ರೋಹಿತ್ 60 ರನ್ ಗಳಿಸಿದ್ದರು. ಕೋವಿಡ್-19 ಪಾಸಿಟಿವ್ ಆಗಿದ್ದರಿಂದ ಧವನ್‌ಗೆ ಆಡಲು ಸಾಧ್ಯವಾಗಲಿಲ್ಲ. ಆದರೆ, ಇದೀಗ ಕೆಎಲ್ ರಾಹುಲ್ ಮುಂದಿನ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಹೀಗಿರುವಾಗ ಇಶಾನ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸುವುದು ಅನುಮಾನವಾಗಿದೆ.
ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಅನುಭವಿ ಆಟಗಾರ. ಭಾರತ ಪರ ಹಲವು ಪಂದ್ಯಗಳಲ್ಲಿ ಮಿಂಚಿದ್ದಾರೆ. ಆರಂಭಿಕರಾಗಿ ಅವರ ಪ್ರದರ್ಶನವು ಉತ್ತಮವಾಗಿದೆ. ಹೀಗಾಗಿ ನಾಯಕ ರೋಹಿತ್ ಕೆಎಲ್ ಅವರನ್ನು ಓಪನಿಂಗ್‌ಗೆ ಕರೆತರುವ ಸಾಧ್ಯತೆ ಇದೆ. ತಂಗಿಯ ಮದುವೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಹುಲ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು.
ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ 176 ರನ್ ಗಳಿಗೆ ಆಲೌಟ್ ಆಯಿತು. ಭಾರತ 28 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ರೋಹಿತ್ ಮತ್ತು ಇಶಾನ್ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಹೂಡಾ ಕೂಡ ಉತ್ತಮ ಪ್ರದರ್ಶನ ನೀಡಿದರು. ಸೂರ್ಯಕುಮಾರ್ ಔಟಾಗದೆ 34 ಮತ್ತು ದೀಪಕ್ 26 ರನ್ ಗಳಿಸಿದರು.