AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

India vs West Indies ODI Series 2023: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.

IND vs WI: ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
IND vs WI
TV9 Web
| Edited By: |

Updated on:Jul 27, 2023 | 6:34 PM

Share

India vs West Indies ODI Series 2023: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಗುರುವಾರದಿಂದ (ಜುಲೈ 27) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಜರುಗಲಿದೆ. ಇನ್ನು 2ನೇ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದ್ದು, ಮೂರನೇ ಪಂದ್ಯಕ್ಕೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ ಮೈದಾನ ಆತಿಥ್ಯವಹಿಸಲಿದೆ. ಈ ಮೂರು ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ರಿಂದ ಶುರುವಾಗಲಿದ್ದು, ಯಾವ ಚಾನೆಲ್​ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು ಹಾಗೂ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

IND vs WI ODI ಸರಣಿಯ ನೇರ ಪ್ರಸಾರವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಈ ಎಲ್ಲಾ ಪಂದ್ಯಗಳನ್ನು DD ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಎಲ್ಲಿ?

ಫ್ಯಾನ್​ ಕೋಡ್ ಆ್ಯಪ್ ಹಾಗೂ ಜಿಯೋ ಸಿನಿಮಾದಲ್ಲಿ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯದ ಟಾಸ್ ಪ್ರಕ್ರಿಯೆಯು ರಾತ್ರಿ 6.30 ಕ್ಕೆ  ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಪಂದ್ಯ ಶುರುವಾಗಲಿದೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

IND vs WI ODI ವೇಳಾಪಟ್ಟಿ:

  1. ಜುಲೈ 27: ಭಾರತ vs ವೆಸ್ಟ್ ಇಂಡೀಸ್- ಮೊದಲ ಏಕದಿನ ಪಂದ್ಯ- ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  2. ಜುಲೈ 29: ಭಾರತ vs ವೆಸ್ಟ್ ಇಂಡೀಸ್- ಎರಡನೇ ಏಕದಿನ ಪಂದ್ಯ – ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  3. ಆಗಸ್ಟ್ 1: ಭಾರತ vs ವೆಸ್ಟ್ ಇಂಡೀಸ್- ಮೂರನೇ ಏಕದಿನ ಪಂದ್ಯ- ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್

ಭಾರತ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಏಕದಿನ ತಂಡ:

ಶಾಯ್ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಝ್, ಯಾನಿಕ್ ಕರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೇರ್, ಅಲ್ಝಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ರೊಮೊರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಒಶಾನೆ ಥಾಮಸ್, ಜೇಡನ್ ಸೀಲ್ಸ್.

Published On - 3:38 pm, Wed, 26 July 23

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!