India vs West Indies ODI Series 2023: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಗುರುವಾರದಿಂದ (ಜುಲೈ 27) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಜರುಗಲಿದೆ. ಇನ್ನು 2ನೇ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದ್ದು, ಮೂರನೇ ಪಂದ್ಯಕ್ಕೆ ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನ ಆತಿಥ್ಯವಹಿಸಲಿದೆ. ಈ ಮೂರು ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ರಿಂದ ಶುರುವಾಗಲಿದ್ದು, ಯಾವ ಚಾನೆಲ್ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು ಹಾಗೂ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಈ ಎಲ್ಲಾ ಪಂದ್ಯಗಳನ್ನು DD ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು.
ಫ್ಯಾನ್ ಕೋಡ್ ಆ್ಯಪ್ ಹಾಗೂ ಜಿಯೋ ಸಿನಿಮಾದಲ್ಲಿ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
ಈ ಪಂದ್ಯದ ಟಾಸ್ ಪ್ರಕ್ರಿಯೆಯು ರಾತ್ರಿ 6.30 ಕ್ಕೆ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಪಂದ್ಯ ಶುರುವಾಗಲಿದೆ.
ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ
IND vs WI ODI ವೇಳಾಪಟ್ಟಿ:
ಭಾರತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಏಕದಿನ ತಂಡ:
ಶಾಯ್ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಝ್, ಯಾನಿಕ್ ಕರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೇರ್, ಅಲ್ಝಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ರೊಮೊರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಒಶಾನೆ ಥಾಮಸ್, ಜೇಡನ್ ಸೀಲ್ಸ್.
Published On - 3:38 pm, Wed, 26 July 23