AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ವೆಸ್ಟ್ ಇಂಡೀಸ್ ಸರಣಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ತಾಯ್ನಾಡಿನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಆಗಮಿಸಿದೆ. 2022ರ ಫೆಬ್ರವರಿಯಲ್ಲಿ ಕೊನೆಯ ಬಾರಿಗೆ ಇಲ್ಲಿ ಸೀಮಿತ ಓವರ್‌ಗಳ ಸರಣಿ ಆಡಿದ್ದ ಕೆರಿಬಿಯನ್ ಪಡೆ, ಇದೀಗ ಎರಡು ಪ್ರತ್ಯೇಕ ಸರಣಿಗಳನ್ನಾಡಲು ಮತ್ತೆ ಭಾರತ ಪ್ರವಾಸ ಕೈಗೊಂಡಿದೆ. ಈ ಸುದೀರ್ಘ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಕಾದಾಟ ನಡೆಯಲಿದೆ.

ಭಾರತ vs ವೆಸ್ಟ್ ಇಂಡೀಸ್ ಸರಣಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
IND vs WIImage Credit source: Starsports
ಝಾಹಿರ್ ಯೂಸುಫ್
|

Updated on: Sep 26, 2026 | 12:41 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ತಿರುವನಂತಪುರದ ಗ್ರೀನ್ ಫೀಲ್ಡ್​ ಮೈದಾನದಲ್ಲಿ ನಡೆಯಲಿದ್ದು, ದ್ವಿತೀಯ ಪಂದ್ಯಕ್ಕೆ ಗುವಾಹಟಿ ಆತಿಥ್ಯವಹಿಸಲಿದೆ. ಇನ್ನು ಮೂರನೇ ಮ್ಯಾಚ್ ಚಂಡೀಗಢ್​ನಲ್ಲಿ ಜರುಗಲಿದೆ. ಈ ಸರಣಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರು ಮ್ಯಾಚ್​ಗಳೂ ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಮಧ್ಯಾಹ್ನ 1.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಪಂದ್ಯಗಳು ನಡೆಯುವ ಸ್ಟೇಡಿಯಂ ಯಾವುದು?

  1. ಮೊದಲ ಏಕದಿನ ಪಂದ್ಯ: ಗ್ರೀನ್ ಫೀಲ್ಡ್​ ಇಂಟರ್​ನ್ಯಾಷನಲ್ ಸ್ಟೇಡಿಯಂ (ತಿರುವನಂತಪುರ)
  2. ಎರಡನೇ ಏಕದಿನ ಪಂದ್ಯ: ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂ (ಗುವಾಹಟಿ)
  3. ಮೂರನೇ ಏಕದಿನ ಪಂದ್ಯ: ಪಿಸಿಎ ಕ್ರಿಕೆಟ್ ಸ್ಟೇಡಿಯಂ (ಚಂಡೀಗಢ್)

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತದಲ್ಲಿ ಈ ಸರಣಿಯ ಅಧಿಕೃತ ಟಿವಿ ಪ್ರಸಾರ ಹಕ್ಕುಗಳನ್ನು ಸ್ಟಾರ್ ಸ್ಪೋರ್ಟ್ಸ್ ಪಡೆದುಕೊಂಡಿದೆ. Star Sports 1, Star Sports 1 HD ಸೇರಿದಂತೆ ಕನ್ನಡ, ಹಿಂದಿ ಮತ್ತು ತಮಿಳು ಪ್ರಾದೇಶಿಕ ಚಾನೆಲ್‌ಗಳಲ್ಲೂ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ vs ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ದಿನಾಂಕ ಪಂದ್ಯ ಸಮಯ (IST) ನಡೆಯುವ ಸ್ಥಳ
ಸೆಪ್ಟೆಂಬರ್ 27, 2026 1ನೇ ಏಕದಿನ ಪಂದ್ಯ ಮಧ್ಯಾಹ್ನ 2:00 ತಿರುವನಂತಪುರಂ
ಸೆಪ್ಟೆಂಬರ್ 30, 2026 2ನೇ ಏಕದಿನ ಪಂದ್ಯ ಮಧ್ಯಾಹ್ನ 2:00 ಗುವಾಹಟಿ
ಅಕ್ಟೋಬರ್ 3, 2026 3ನೇ ಏಕದಿನ ಪಂದ್ಯ ಮಧ್ಯಾಹ್ನ 2:00 ಚಂಡೀಗಢ್

ಉಭಯ ತಂಡಗಳು:

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.

ಇದನ್ನೂ ಓದಿ: ಏಷ್ಯನ್ ಗೇಮ್ಸ್ 2026: ಟೀಮ್ ಇಂಡಿಯಾದ ಮೊದಲ ಎದುರಾಳಿ ಫಿಕ್ಸ್!

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಂಗೂ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾವ್ಸ್, ಗುಡಕೇಶ್ ಮೋಟಿ, ಕೀಮೋ ಪೌಲ್, ಶೆರ್ಫೇನ್ ರದರ್‌ಫೋರ್ಡ್, ಜೇಡನ್ ಸೀಲ್ಸ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More