AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ, ಟಿ20 ಸರಣಿಗಾಗಿ ಭಾರತಕ್ಕೆ ಬಂದ ವೆಸ್ಟ್ ಇಂಡೀಸ್; ಸರಣಿ ವೇಳಾಪಟ್ಟಿ ಇಲ್ಲಿದೆ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 23 ರಂದು ಭಾರತಕ್ಕೆ ಬಂದ ವಿಂಡೀಸ್ ತಂಡ, ಶುಭಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ವಿರುದ್ಧ ಸೆಪ್ಟೆಂಬರ್ 27 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಸರಣಿಯ ಸಂಪೂರ್ಣ ವೇಳಾಪಟ್ಟಿ, ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ ಮತ್ತು ಶಾಯ್ ಹೋಪ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡಗಳ ಆಟಗಾರರ ಸಂಪೂರ್ಣ ವಿವರ ಇಲ್ಲಿದೆ.

ಏಕದಿನ, ಟಿ20 ಸರಣಿಗಾಗಿ ಭಾರತಕ್ಕೆ ಬಂದ ವೆಸ್ಟ್ ಇಂಡೀಸ್; ಸರಣಿ ವೇಳಾಪಟ್ಟಿ ಇಲ್ಲಿದೆ
ವೆಸ್ಟ್ ಇಂಡೀಸ್ ತಂಡImage Credit source: KCA X
ಪೃಥ್ವಿಶಂಕರ
|

Updated on:Sep 23, 2026 | 4:32 PM

Share

ಮೂರು ಪಂದ್ಯಗಳ ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಗಾಗಿ ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಬಂದಿಳಿದಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಮೊದಲಿಗೆ ನಡೆಯಲಿದ್ದು, ಸೆಪ್ಟೆಂಬರ್ 23 ರಂದು ಭಾರತಕ್ಕೆ ಆಗಮಿಸಿರುವ ವಿಂಡೀಸ್ ತಂಡವು ಗುರುವಾರದಿಂದ ತನ್ನ ಅಭ್ಯಾಸವನ್ನು ಪ್ರಾರಂಭಿಸಲಿದೆ. ಆ ನಂತರ ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರೊಂದಿಗೆ ವೆಸ್ಟ್ ಇಂಡೀಸ್ ತಂಡದ ಭಾರತ ಪ್ರವಾಸವೂ ಶುರುವಾಗಲಿದೆ.

ಕಣದಲ್ಲಿ ರೋಹಿತ್, ಕೊಹ್ಲಿ

ಈ ಏಕದಿನ ಸರಣಿಗಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಅದರಂತೆ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರು ಸಹ ತಂಡದಲ್ಲಿದ್ದಾರೆ. ರವೀಂದ್ರ ಜಡೇಜಾ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಪ್ರಮುಖ ಆಟಗಾರರನ್ನು ತಂಡಕ್ಕೆ ಸೇರಿಸಲಾಗಿದೆ.

ಟೀಂ ಇಂಡಿಯಾ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಔಕಿಬ್ ನಬಿ, ಯಶಸ್ವಿ ಜೈಸ್ವಾಲ್ ಮತ್ತು ನಮನ್ ಧೀರ್.

ವಿಂಡೀಸ್ ತಂಡಕ್ಕೆ ಶಾಯ್ ಹೋಪ್ ನಾಯಕ

ವೆಸ್ಟ್ ಇಂಡೀಸ್ ತಂಡದ ನಾಯಕ ಮತ್ತು ವಿಕೆಟ್ ಕೀಪರ್ ಆಗಿ ಶಾಯ್ ಹೋಪ್ ಆಯ್ಕೆಯಾಗಿದ್ದಾರೆ. ರೋಸ್ಟನ್ ಚೇಸ್, ಜಸ್ಟಿನ್ ಗ್ರೀನೇವ್ಸ್, ಜಾನ್ ಕ್ಯಾಂಪ್ಬೆಲ್, ಗುಡಕೇಶ್ ಮೋತಿ, ಅಲ್ಜಾರಿ ಜೋಸೆಫ್ ಅವರಂತಹ ಆಟಗಾರರ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ. ಕೀಮೊ ಪಾಲ್, ಶೆರ್ಫೇನ್ ರುದರ್ಫೋರ್ಡ್ ಮತ್ತು ಜೇಡನ್ ಸೀಲ್ಸ್ ಅವರಂತಹ ಆಟಗಾರರು ಸಹ ತಂಡದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ, ವಿಕೆಟ್ ಕೀಪರ್), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಂಗೂ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾವ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಶೆರ್ಫೇನ್ ರುದರ್‌ಫೋರ್ಡ್ ಮತ್ತು ಜೇಡನ್ ಸೀಲ್ಸ್.

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ ಯುವ ಪಡೆ

ಏಕದಿನ ಸರಣಿ ವೇಳಾಪಟ್ಟಿ

  • ಸೆಪ್ಟೆಂಬರ್ 27: ಮೊದಲನೇ ಏಕದಿನ ಪಂದ್ಯ, ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
  • ಸೆಪ್ಟೆಂಬರ್ 30: ಎರಡನೇ ಏಕದಿನ ಪಂದ್ಯ, ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣ, ಗುವಾಹಟಿ
  • ಅಕ್ಟೋಬರ್ 3: ಮೂರನೇ ಏಕದಿನ ಪಂದ್ಯ, ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣ, ಹೊಸ ಚಂಡೀಗಢ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Wed, 23 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ