ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಏಕದಿನ ಸರಣಿಯಿಂದ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದರು. ಅಂದರೆ ಟೀಮ್ ಇಂಡಿಯಾ (Team India) ಏಕದಿನ ತಂಡಕ್ಕೆ ನಾಯಕರಾದ ಬಳಿಕ ಹಿಟ್ಮ್ಯಾನ್ಗೆ ಇದು ಮೊದಲ ಸರಣಿ ಆಗಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ ಈ ಸರಣಿ ಆಡಿರಲಿಲ್ಲ. ಇದಕ್ಕೂ ಮುನ್ನ ಹಿಟ್ಮ್ಯಾನ್ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಗಾಯದ ಕಾರಣ ಹೊರಗುಳಿಯಬೇಕಾಯಿತು. ಇದೀಗ ಫಿಟ್ನೆಸ್ನತ್ತ ಗಮನ ಹರಿಸಿರುವ ರೋಹಿತ್ ಶರ್ಮಾ ಬ್ಯಾಕ್ ಟು ಬ್ಯಾಕ್ ಎರಡು ಸರಣಿಗಳಿಂದ ಹೊರಗುಳಿದಿದ್ದರು. ಇನ್ನು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಸೋತರೆ, ಏಕದಿನ ಸರಣಿಯಲ್ಲಿ 0-3 ಅಂತರದಲ್ಲಿ ಹೀನಾಯವಾಗಿ ಪರಾಜಯಗೊಂಡಿತು. ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಸಜ್ಜಾಗುತ್ತಿದೆ.
2022 ರ ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಮತ್ತೊಂದೆಡೆ ಇದೇ ವರ್ಷ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಹೀಗಾಗಿ ಮುಂಬರುವ ಸರಣಿಗಳು ಟೀಮ್ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಆದರೆ ಅತ್ತ ನಾಯಕರಾಗಿ ನೇಮಕವಾದ ಬಳಿಕ ರೋಹಿತ್ ಶರ್ಮಾ ಗಾಯಗೊಂಡಿದ್ದು ತಂಡದ ಚಿಂತೆಗೆ ಕಾರಣವಾಗಿತ್ತು. ಆದರೀಗ ಹಿಟ್ಮ್ಯಾನ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಗೆ ಆಯ್ಕೆಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ.
ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 6 ರಂದು ಶುರುವಾಗಲಿದೆ. ಈ ವೇಳೆಗೆ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅಲ್ಲದೆ ಏಕದಿನ ಹಾಗೂ ಟಿ20 ಸರಣಿಯಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಮತ್ತೊಂದೆಡೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಇದೀಗ ಹಿಟ್ಮ್ಯಾನ್ ದೇಹ ತೂಕವನ್ನು ಇಳಿಸಲು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹೊಸ ಲುಕ್ನಲ್ಲಿರುವ ಫೋಟೋವೊಂದನ್ನು ಕೂಡ ಹಿಟ್ಮ್ಯಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಮೂಲಕ ಸಂಪೂರ್ಣ ತಯಾರಿಯೊಂದಿಗೆ ಯಂಗ್ ಅ್ಯಂಡ್ ಎನರ್ಜಿಟಿಕ್ ಆಗಿ ಕಂಬ್ಯಾಕ್ ಮಾಡಲು ರೋಹಿತ್ ಶರ್ಮಾ ಸಿದ್ದತೆಯಲ್ಲಿದ್ದಾರೆ.
ಪ್ರಸ್ತುತ ಬಿಸಿಸಿಐ ನಿಯಮದ ಪ್ರಕಾರ, ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆಯಲು ಪ್ರತಿಯೊಬ್ಬ ಆಟಗಾರನು ಎನ್‌ಸಿಎಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದಾದ ಬಳಿಕ ಆಯ್ಕೆ ಸಮಿತಿಗೆ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೀಗಾಗಿ ಸಂಪೂರ್ಣ ಫಿಟ್‌ನೆಸ್ ಕಡೆಗೆ ರೋಹಿತ್ ಶರ್ಮಾ ಗಮನಹರಿಸಿದ್ದು, ಈ ಮೂಲಕ ಎನ್ಸಿಎ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕವಷ್ಟೇ ಆಯ್ಕೆಗೆ ತಮ್ಮ ಲಭ್ಯತೆಯನ್ನು ತಿಳಿಸಬೇಕು. ಅದರಂತೆ ಇದೀಗ ಹಿಟ್ಮ್ಯಾನ್ ಸಂಪೂರ್ಣ ಫಿಟ್ ಆಗಿದ್ದು, ವೆಸ್ಟ್ ಇಂಡೀಸ್ ಸರಣಿಗಾಗಿ ಆಯ್ಕೆಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯೊಂದಿಗೆ ಹೊಸ ಲುಕ್ನಲ್ಲಿ ಹಿಟ್ಮ್ಯಾನ್ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.
ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಹೀಗಿದೆ:
ಏಕದಿನ ಸರಣಿ ವೇಳಾಪಟ್ಟಿ
6 ಫೆಬ್ರವರಿ: 1ನೇ ODI, ಅಹಮದಾಬಾದ್
ಫೆಬ್ರವರಿ 9: 2ನೇ ODI, ಅಹಮದಾಬಾದ್
ಫೆಬ್ರವರಿ 11: 3ನೇ ODI, ಅಹಮದಾಬಾದ್
ಟಿ20 ಸರಣಿ ವೇಳಾಪಟ್ಟಿ:
16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ
ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ
ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ
ಇದನ್ನೂ ಓದಿ: Ind vs SA: ಭರ್ಜರಿ ಶತಕ ಸಿಡಿಸಿ ಸಚಿನ್, ಸೆಹ್ವಾಗ್ ದಾಖಲೆ ಮುರಿದ ಕ್ವಿಂಟನ್ ಡಿಕಾಕ್
ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ
ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!
(India vs West indies: Rohit Sharma fit to lead)