ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ (Team India) ಇದೀಗ ವೆಸ್ಟ್ ಇಂಡೀಸ್ (India vs West Indies) ವಿರುದ್ದದ ಸರಣಿಗೆ ಸಜ್ಜಾಗಬೇಕಿದೆ. ಈ ಸರಣಿಯು ಜುಲೈ 22 ರಿಂದ ಶುರುವಾಗಲಿದ್ದು, ಆಗಸ್ಟ್ 7 ರಂದು ಕೊನೆಗೊಳ್ಳಲಿದೆ. ಇನ್ನು ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ. ಈಗಾಗಲೇ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಏಕದಿನ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಈ ಹಿಂದೆ ಶ್ರೀಲಂಕಾ ವಿರುದ್ದ ನಾಯಕರಾಗಿ ಪದಾರ್ಪಣೆ ಮಾಡಿದ್ದ ಧವನ್ ಮತ್ತೊಮ್ಮೆ ಏಕದಿನ ತಂಡದ ಕಪ್ತಾನರಾಗಿ ಕಾಣಿಸಿಕೊಳ್ಳಲಿದ್ದಾರೆ.
ಹಾಗೆಯೇ ಟಿ20 ಸರಣಿಯ ವೇಳೆಗೆ ರೋಹಿತ್ ಶರ್ಮಾ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದು, ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಇದಾಗ್ಯೂ ವಿಂಡೀಸ್ ವಿರುದ್ದದ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗು ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. ಅಂದರೆ ವೆಸ್ಟ್ ಇಂಡೀಸ್ ವಿರುದ್ದದ ಸೀಮಿತ ಓವರ್ ಗಳ ಸರಣಿಯಿಂದ ಕೊಹ್ಲಿ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹಾಗೆಯೇ ಈ ಸರಣಿಯ ಮೂಲಕ ಕೆಎಲ್ ರಾಹುಲ್ ಕಂಬ್ಯಾಕ್ ಮಾಡುತ್ತಿರುವುದು ವಿಶೇಷ.
ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ;
ಏಕದಿನ ಸರಣಿ ವೇಳಾಪಟ್ಟಿ:
ಟಿ20 ಸರಣಿ ವೇಳಾಪಟ್ಟಿ:
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.