AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ

India vs West Indies Super 8: ಕೋಲ್ಕತ್ತಾದ ಈಡನ್​ಗಾರ್ಡನ್ಸ್‌ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ಸೂಪರ್ 8 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅಮೋಘ ಇನ್ನಿಂಗ್ಸ್ ಆಡಿದರು. 195 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಸಂಜು ಏಕಾಂಗಿ ಹೋರಾಟದಿಂದ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಟೀಂ ಇಂಡಿಯಾದ ಈ ಐತಿಹಾಸಿಕ ಜಯ ಸಂಜು ಸ್ಯಾಮ್ಸನ್ ನೆರವಿನಿಂದ ಸಾಧ್ಯವಾಯಿತು.

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on:Mar 01, 2026 | 11:17 PM

Share

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ (Sanju Samson) ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ತಂಡದ ಪರ ಏಕಾಂಗಿ ಹೋರಾಟ ನಡೆಸಿದರು. ಸಂಜು ಅವರ ಈ ಸ್ಮರಣೀಯ ಇನ್ನಿಂಗ್ಸ್​ನಿಂದಾಗಿ ವಿಂಡೀಸ್ ನೀಡಿದ 195 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಐತಿಹಾಸಿಕ ಜಯ ಸಾಧಿಸಿತು.

ವಿಂಡೀಸ್​ಗೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್​ಗೆ ಉತ್ತಮ ಆರಂಭ ಸಿಕ್ಕಿತು. ಶಾಯ್ ಹೋಪ್ ಹಾಗೂ ಚೇಸ್ ಮೊದಲ ವಿಕೆಟ್​ಗೆ 68 ರನ್​ಗಳ ಜೊತೆಯಾಟ ನೀಡಿದರು. ವಿಂಡೀಸ್​ನ ಈ ಆರಂಭಕ್ಕೆ ಭಾರತದ ಫಿಲ್ಡರ್​ಗಳ ಕೊಡುಗೆಯೂ ಅಪಾರವಾಗಿತ್ತು. ವರುಣ್ ಚಕ್ರವರ್ತಿ ರನೌಟ್ ತಪ್ಪಿಸಿದರೆ, ಅಭಿಷೇಕ್ ಶರ್ಮಾ ಸುಲಭ ಕ್ಯಾಚ್ ಕೈಚೆಲ್ಲಿದರು. ಇದರ ಲಾಭ ಪಡೆದ ವಿಂಡೀಸ್ ವಿಕೆಟ್​ಗಳ ಪತನದ ನಡುವೆಯೂ ಭಾರತದ ಬೌಲರ್​ಗಳ ಮೇಲೆ ಸವಾರಿ ನಡೆಸಿತು.

ಕೊನೆಯ 10 ಓವರ್​ಗಳಲ್ಲಿ 113 ರನ್

ಆದಾಗ್ಯೂ ಮೊದಲ 10 ಓವರ್​ಗಳಲ್ಲಿ ಭಾರತ ಉತ್ತಮವಾಗಿ ಬೌಲ್ ಮಾಡಿ ಕೇವಲ 82 ರನ್ ಬಿಟ್ಟುಕೊಟ್ಟಿತು. ಆದರೆ ಕೊನೆಯ 10 ಓವರ್​ಗಳಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ ವಿಂಡೀಸ್ 113 ರನ್ ಕಲೆಹಾಕಿತು. ವಿಂಡೀಸ್ ಪರ ರೊಸ್ಟನ್ ಚೇಸ್ ಅತ್ಯಧಿಕ 40 ರನ್​ಗಳ ಇನ್ನಿಂಗ್ಸ್ ಆಡಿದರೆ, ಪೊವೆಲ್ ಹಾಗೂ ಜೇಸನ್ ಹೋಲ್ಡರ್ ಕ್ರಮವಾಗಿ 34 ಮತ್ತು 37 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು. ಇವರಿಬ್ಬರ ನಡುವೆ ಐದನೇ ವಿಕೆಟ್​ಗೆ 74 ರನ್​ಗಳ ಜೊತೆಯಾಟವೂ ಮೂಡಿಬಂತು. ಇದರ ಪರಿಣಾಮವಾಗಿ ವಿಂಡೀಸ್ ಪಡೆ 20 ಓವರ್​ಗಳಲ್ಲಿ 195 ರನ್ ಕಲೆಹಾಕಿತು.

ಭಾರತಕ್ಕೆ ಆರಂಭಿಕ ಆಘಾತ

ಭಾರತ ಈ ಪಂದ್ಯವನ್ನು ಗೆಲ್ಲಬೇಕಿದ್ದರೆ ತನ್ನ ಹಿಂದಿನ ಇತಿಹಾಸವನ್ನು ಬದಲಿಸಬೇಕಿತ್ತು. ಏಕೆಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟಿರಲಿಲ್ಲ. ಹೀಗಾಗಿ ಅತಿದೊಡ್ಡ ಗುರಿಯನ್ನು ಮುಂದಿಟ್ಟುಕೊಟ್ಟು ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮತ್ತೊಮ್ಮೆ ಕೈಕೊಟ್ಟ ಆರಂಭಿಕ ಅಭಿಷೇಕ್ ಶರ್ಮಾ 10 ರನ್​ಗಳಿಗೆ ಸುಸ್ತಾದರು. ಅಭಿಷೇಕ್ ನಂತರ ಬಂದ ಇಶಾನ್ ಕಿಶನ್ ಕೂಡ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಅವರು ಕೂಡ ಕೇವಲ 10 ರನ್‌ಗಳಿಗೆ ಔಟಾದರು. ಆದಾಗ್ಯೂ, ಒಂದು ತುದಿಯಲ್ಲಿ ವಿಕೆಟ್‌ಗಳು ಬಿದ್ದಾಗ, ಇನ್ನೊಂದು ತುದಿಯಲ್ಲಿ ನಿಂತಿದ್ದ ಸಂಜು ಸ್ಯಾಮ್ಸನ್ ಮಾತ್ರ ನಿರ್ಣಾಯಕ ಪಂದ್ಯದಲ್ಲಿ ತಮ್ಮ ಅನುಭವವನ್ನು ಧಾರೆ ಎರೆದರು.

IND vs WI: 2 ಕ್ಯಾಚ್ ಡ್ರಾಪ್, 10 ರನ್​ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ

ವೃತ್ತಿಜೀವನದ ಬೆಸ್ಟ್ ಇನ್ನಿಂಗ್ಸ್ ಆಡಿದ ಸಂಜು

ಆರಂಭಿಕನಾಗಿ ಬಂದು ಕೊನೆಯವರೆಗೂ ಅಜೇಯರಾಗಿ ಉಳಿದ ಸಂಜು ಸ್ಯಾಮ್ಸನ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಬಳಿಕ ಡಗೌಟ್​ಗೆ ಮರಳಿದರು. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ ಅಜೇಯ 97 ರನ್ ಗಳಿಸಿದರು. 104 ಸ್ಟ್ರೈಕ್ ರೇಟ್‌ನಲ್ಲಿ ಆಡಿದ ಈ ಇನ್ನಿಂಗ್ಸ್‌ನಲ್ಲಿ 12 ಬೌಂಡರಿಗಳು ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಟಿ20 ವಿಶ್ವಕಪ್ ರನ್ ಚೇಸ್‌ನಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ಅತ್ಯಧಿಕ ಇನ್ನಿಂಗ್ಸ್ ಇದಾಗಿದೆ. ಇದಕ್ಕೂ ಮೊದಲು, 82 ರನ್‌ ಬಾರಿಸಿದ್ದ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು. ಇನ್ನು ಈ ಪಂದ್ಯದಲ್ಲಿ ಸಂಜು ಹೊರತಾಗಿ ತಿಲಕ್ ವರ್ಮಾ ಕೂಡ 27 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಶಿವಂ ದುಬೆ ಕೂಡ ಅಜೇಯ 8 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Sun, 1 March 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?