IND vs WI T20 Schedule 2022: ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಏಕದಿನ ಸರಣಿ ಮುಗಿದಿದೆ. ಶಿಖರ್ ಧವನ್ ನೇತೃತ್ವದಲ್ಲಿ ಟೀಮ್ ಇಂಡಿಯಾ ವಿಂಡೀಸ್ ತಂಡವನ್ನು ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಇದೀಗ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗೆ ಸಜ್ಜಾಗಿದೆ. ಶುಕ್ರವಾರ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಟಿ20 ಪಂದ್ಯಗಳನ್ನು ಆಡಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಏಕದಿನ ಸರಣಿಯಿಂದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೆಲ ಆಟಗಾರರು ಹೊರಗುಳಿದಿದ್ದರು. ಇದೀಗ ರೋಹಿತ್ ಶರ್ಮಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ತಂಡಕ್ಕೆ ಮರಳಿದ್ದಾರೆ. ಇದಾಗ್ಯೂ ಟಿ20 ಸರಣಿಯಿಂದ ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ.
ಇನ್ನು ಈ ಸರಣಿಯು ಜುಲೈ 29 ರಿಂದ ಶುರುವಾಗಲಿದ್ದು, ಆಗಸ್ಟ್ 7 ಕ್ಕೆ ಮುಗಿಯಲಿದೆ. ವಿಶೇಷ ಎಂದರೆ ಈ ಸರಣಿಯ ಮೂರು ಪಂದ್ಯಗಳು ವೆಸ್ಟ್ ಇಂಡೀಸ್ನಲ್ಲಿ ನಡೆದರೆ ಕೊನೆಯ ಎರಡು ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಮತ್ತು ಟೀಮ್ ಇಂಡಿಯಾ ಟಿ20 ತಂಡ ಕೆಳಗಿನಂತಿದೆ.
ಟಿ20 ಸರಣಿ ವೇಳಾಪಟ್ಟಿ:
ಟೀಮ್ ಇಂಡಿಯಾ ಟಿ20 ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಕೆಎಲ್ ರಾಹುಲ್.
ಪ್ರಸ್ತುತ ತಂಡದಲ್ಲಿ ಕೆಎಲ್ ರಾಹುಲ್ ಇದ್ದರೂ, ಅವರು ಇನ್ನೂ ಕೂಡ ವೆಸ್ಟ್ ಇಂಡೀಸ್ಗೆ ಪ್ರಯಾಣ ಬೆಳೆಸಿಲ್ಲ. ಕೊರೋನಾ ಸೋಂಕಿಗೆ ಒಳಗಾಗಿರುವ ಕಾರಣ ಅವರು ಭಾರತದಲ್ಲೇ ಉಳಿದಿದ್ದಾರೆ. ಹೀಗಾಗಿ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಲ್ಲಿ ಆಡಲಿದ್ದಾರಾ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ.