IND vs WI: ಭಾರತ- ವಿಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿ ಯಾವಾಗ ಆರಂಭ? ಇಲ್ಲಿದೆ ಪೂರ್ಣ ವಿವರ

India vs West Indies T20 Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 3 ರಂದು ಆರಂಭವಾಗಲಿದೆ. ಮೊದಲ ಟಿ20 ಪಂದ್ಯ, ಏಕದಿನ ಸರಣಿಯ ಅಂತಿಮ ಪಂದ್ಯ ನಡೆದ ಅದೇ ಮೈದಾನದಲ್ಲಿ ನಡೆಯಲ್ಲಿದೆ.

IND vs WI: ಭಾರತ- ವಿಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿ ಯಾವಾಗ ಆರಂಭ? ಇಲ್ಲಿದೆ ಪೂರ್ಣ ವಿವರ
ಭಾರತ- ವೆಸ್ಟ್ ಇಂಡೀಸ್ ಟಿ20 ಸರಣಿ
Follow us
ಪೃಥ್ವಿಶಂಕರ
|

Updated on:Aug 02, 2023 | 8:57 AM

ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs West Indies), ಈಗಾಗಲೇ ಆಡಿರುವ ಎರಡು ಸರಣಿಗಳನ್ನು ತನ್ನದಾಗಿಸಿಕೊಂಡಿದೆ. ಏಕದಿನ ಸರಣಿಗೂ ಮುನ್ನ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದು ಬೀಗಿದ ಟೀಂ ಇಂಡಿಯಾ (Team India), ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ. ಈಗ ಈ ಪ್ರವಾಸದ ಕೊನೆಯ ಸರಣಿ ಬಾಕಿ ಉಳಿದಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲು ವೆಸ್ಟ್ ಇಂಡೀಸ್ ಹಾಗೂ ಭಾರತ ಸನ್ನದ್ಧವಾಗಿವೆ. ಇದಕ್ಕಾಗಿ ಆತಿಥೇಯ ವೆಸ್ಟ್ ಇಂಡೀಸ್ 15 ಸದಸ್ಯರ ಬಲಿಷ್ಠ ತಂಡವನ್ನು ಸಹ ಪ್ರಕಟಿಸಿದೆ. ಟಿ20 ಕ್ರಿಕೆಟ್​ನಲ್ಲಿ (T20 Cricket) ಸಾಕಷ್ಟು ಹೆಸರು ಮಾಡಿರುವ ದಿಗ್ಗಜ ಆಟಗಾರರು ಈ ಸರಣಿಗೆ ವಿಂಡೀಸ್ ತಂಡದಲ್ಲಿ ಸ್ಥಾನ ಪಡೆದಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಟಿ20 ಸರಣಿಯಲ್ಲಿ ಗೆಲುವಿನ ಹಾದಿ ಸುಲಭವಲ್ಲ.

ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 3 ರಂದು ಆರಂಭವಾಗಲಿದೆ. ಮೊದಲ ಟಿ20 ಪಂದ್ಯ, ಏಕದಿನ ಸರಣಿಯ ಅಂತಿಮ ಪಂದ್ಯ ನಡೆದ ಅದೇ ಮೈದಾನದಲ್ಲಿ ನಡೆಯಲ್ಲಿದೆ. ಮೊದಲ ಟಿ20 ಆಡಿದ ಬಳಿಕ ಉಭಯ ತಂಡಗಳು ಗಯಾನಾಗೆ ತೆರಳಲಿದ್ದು, ಅಲ್ಲಿ ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳು ನಡೆಯಲಿವೆ. ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳು ಆಗಸ್ಟ್ 12 ಮತ್ತು 13 ರಂದು ಅಮೆರಿಕ ನೆಲದಲ್ಲಿ ನಡೆಯಲಿವೆ.

IND vs WI: ವಿಂಡೀಸ್ ವಿರುದ್ಧ 85 ರನ್ ಸಿಡಿಸಿ ಪಾಕ್ ಆಟಗಾರನ ದಾಖಲೆ ಮುರಿದ ಶುಭ್​ಮನ್ ಗಿಲ್..!

ಟಿ20 ಸರಣಿಗೆ ಉಭಯ ತಂಡಗಳು

ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ರೋವ್ಮನ್ ಪೊವೆಲ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಒಶೇನ್ ಥಾಮಸ್, ಶಾಯ್ ಹೋಪ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಅಕಿಲ್ ಹುಸೇನ್, ಓಡಿಯನ್ ಸ್ಮಿತ್, ಒಬೆಡ್ ಮೆಕಾಯ್.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಐದು ಪಂದ್ಯಗಳ ಟಿ20 ಸರಣಿ:

  1. ಮೊದಲ ಟಿ20 ಆಗಸ್ಟ್ 3 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಟ್
  2. ದ್ವಿತೀಯ ಟಿ20 ಆಗಸ್ಟ್ 6 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
  3. ತೃತೀಯ ಟಿ20 ಆಗಸ್ಟ್ 8 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
  4. ನಾಲ್ಕನೇ ಟಿ20 ಆಗಸ್ಟ್ 12 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ
  5. ಐದನೇ ಟಿ20 ಆಗಸ್ಟ್ 13 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 am, Wed, 2 August 23

‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್