IND vs WI: ಭಾರತ- ವಿಂಡೀಸ್ ನಡುವೆ ಮೊದಲ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?
India vs West Indies Test Series 2025: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ಈ ಪಂದ್ಯ ಭಾರತಕ್ಕೆ ಮಹತ್ವದ್ದಾಗಿದೆ. ಅಕ್ಟೋಬರ್ 2 ರಿಂದ ತವರಿನಲ್ಲಿ ಸರಣಿ ಆರಂಭವಾಗಲಿದ್ದು, 7 ವರ್ಷಗಳ ನಂತರ ವಿಂಡೀಸ್ ಭಾರತಕ್ಕೆ ಆಗಮಿಸಿದೆ. ಪಂದ್ಯದ ವೇಳಾಪಟ್ಟಿ, ತಂಡಗಳು ಮತ್ತು ನೇರ ಪ್ರಸಾರದ ಸಂಪೂರ್ಣ ಮಾಹಿತಿ ಇಲ್ಲಿದೆ.

2025 ರ ಏಷ್ಯಾಕಪ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ (India vs West Indies) ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸರಣಿಯು ಅಕ್ಟೋಬರ್ 2 ರಿಂದ ತವರಿನಲ್ಲಿ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (World Test Championship) ದೃಷ್ಟಿಯಿಂದ ಈ ಸರಣಿಯು ಟೀಂ ಇಂಡಿಯಾಕ್ಕೆ ನಿರ್ಣಾಯಕವಾಗಿದೆ. ಏತನ್ಮಧ್ಯೆ, ಶುಭ್ಮನ್ ಗಿಲ್ ಟೆಸ್ಟ್ ನಾಯಕನಾಗಿ ತಮ್ಮ ಮೊದಲ ಟೆಸ್ಟ್ ಸರಣಿ ಗೆಲುವನ್ನು ಗೆಲ್ಲುವ ಗುರಿಯೊಂದಿಗೆ ತಂಡದೊಂದಿಗೆ ಕಣಕ್ಕಿಳಿಯುತ್ತಿದ್ದಾರೆ.
ಹೆಡ್ ಟು ಹೆಡ್ ದಾಖಲೆ ಹೇಗಿದೆ?
ಈ ಸರಣಿಯ ವಿಶೇಷತೆ ಏನೆಂದರೆ, ವೆಸ್ಟ್ ಇಂಡೀಸ್ ತಂಡವು 7 ವರ್ಷಗಳ ನಂತರ ಟೆಸ್ಟ್ ಸರಣಿಯನ್ನು ಆಡಲು ಭಾರತಕ್ಕೆ ಬಂದಿದೆ. ಇದಕ್ಕೂ ಮೊದಲು 2018 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವಿಂಡೀಸ್ ಪಡೆ ಭಾರತದ ಎದುರು 2-0 ಅಂತರದಿಂದ ಸರಣಿಯನ್ನು ಸೋತಿತ್ತು. ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ 100 ಟೆಸ್ಟ್ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಭಾರತ 23 ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 30 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 47 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇದುವರೆಗೆ ಉಭಯ ತಂಡಗಳ ನಡುವೆ ಭಾರತದಲ್ಲಿ 47 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 14 ಪಂದ್ಯಗಳನ್ನು ಗೆದ್ದಿದೆ. 20 ಪಂದ್ಯಗಳು ಡ್ರಾ ಆಗಿವೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಅಕ್ಟೋಬರ್ 2 ರಂದು ಆರಂಭವಾಗಲಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ಉಭಯ ತಂಡಗಳು
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಎನ್. ಜಗದೀಸನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್. ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್ (ಉಪನಾಯಕ), ಕೆವಲನ್ ಆಂಡರ್ಸನ್, ಅಲಿಕ್ ಅಥನಾಜೆ, ಜಾನ್ ಕ್ಯಾಂಪ್ಬೆಲ್, ತೇಜ್ನರೇನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಜಡ್ಡಿಯಾ ಬ್ಲೇಡ್ಸ್, ಜೋಹಾನ್ ಲೈನ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
