AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ; ಈ ದಿನದಿಂದ ಸರಣಿ ಆರಂಭ

West Indies Tour of India 2025: ವೆಸ್ಟ್ ಇಂಡೀಸ್ ತಂಡವು 2025ರಲ್ಲಿ ಭಾರತದ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಮಾಜಿ ನಾಯಕ ಕ್ರೇಗ್ ಬ್ರಾಥ್‌ವೈಟ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ತೇಜ್‌ನರೈನ್ ಚಂದ್ರಪಾಲ್ ಮತ್ತು ಖಾರಿ ಪಿಯರೆ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸರಣಿಯು ಅಕ್ಟೋಬರ್ 2 ರಿಂದ ಆರಂಭವಾಗಲಿದೆ.

IND vs WI: ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ; ಈ ದಿನದಿಂದ ಸರಣಿ ಆರಂಭ
West Indies
ಪೃಥ್ವಿಶಂಕರ
|

Updated on:Sep 17, 2025 | 3:19 PM

Share

2025 ರ ಏಷ್ಯಾಕಪ್ (Asia Cup 2025) ನಂತರ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ (India vs West Indies) ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. 7 ವರ್ಷಗಳ ನಂತರ ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬರುತ್ತಿದ್ದು, ಇದೀಗ ಈ ಪ್ರವಾಸಕ್ಕಾಗಿ ತಂಡವನ್ನು ಪ್ರಕಟಿಸಲಾಗಿದೆ. ಕ್ರಿಕೆಟ್ ವೆಸ್ಟ್ ಇಂಡೀಸ್ 15 ಸದಸ್ಯರ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಪ್ರವಾಸಕ್ಕೆ ಪ್ರಕಟಿಸಿದೆ. ನಿರೀಕ್ಷೆಯಂತೆ, ವಿಂಡೀಸ್ ಆಯ್ಕೆ ಸಮಿತಿಯು ಮಾಜಿ ನಾಯಕ ಕ್ರೇಗ್ ಬ್ರಾಥ್‌ವೈಟ್ ಅವರನ್ನು ಈ ತಂಡದಿಂದ ಕೈಬಿಟ್ಟಿದೆ. ಕಳೆದ 12 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬ್ರಾಥ್‌ವೈಟ್ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

2018ರ ನಂತರ ಭಾರತ ಪ್ರವಾಸ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಆರಂಭವಾಗಲಿದ್ದು, ಇದರಲ್ಲಿ 2 ಪಂದ್ಯಗಳು ನಡೆಯಲಿವೆ. ಇದರೊಂದಿಗೆ, ವಿಂಡೀಸ್ ತಂಡವು 2018 ರ ನಂತರ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಆದಾಗ್ಯೂ, ಆ ಸರಣಿಯ ಭಾಗವಾಗಿದ್ದ ಆರಂಭಿಕ ಆಟಗಾರ ಕ್ರೇಗ್ ಬ್ರಾಥ್‌ವೈಟ್ ಈ ಬಾರಿ ತಂಡದೊಂದಿಗೆ ಇರುವುದಿಲ್ಲ. ದೀರ್ಘಕಾಲದವರೆಗೆ ವೆಸ್ಟ್ ಇಂಡೀಸ್‌ನ ನಾಯಕರಾಗಿದ್ದ ಬ್ರಾಥ್‌ವೈಟ್, ಜನವರಿ 2025 ರಲ್ಲಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯ ನಂತರ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ನಂತರ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ, ಅವರನ್ನು ಮೂರನೇ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿತ್ತು.

ದೀರ್ಘಕಾಲದವರೆಗೆ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಅನುಭವಿ ಆರಂಭಿಕ ಆಟಗಾರ ಬ್ರಾಥ್‌ವೈಟ್ ಅವರನ್ನು ಅಂತಿಮವಾಗಿ ಈ ಬಾರಿ ತಂಡದಿಂದ ಕೈಬಿಡಲಾಗಿದೆ. 2011 ರಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಬಲಗೈ ಬ್ಯಾಟ್ಸ್‌ಮನ್ ಬ್ರಾಥ್‌ವೈಟ್, ಡಿಸೆಂಬರ್ 2013 ರಿಂದ ನಿರಂತರವಾಗಿ ತಂಡದ ಭಾಗವಾಗಿದ್ದರು. ಇದೀಗ ಸುಮಾರು 12 ವರ್ಷಗಳಲ್ಲಿ ಮೊದಲ ಬಾರಿಗೆ ತಂಡದಿಂದ ಹೊರಗುಳಿದಿದ್ದಾರೆ.

ತೇಜ್‌ನರೈನ್ ಚಂದ್ರಪಾಲ್​ಗೆ ಅವಕಾಶ

ಭಾರತದ ಪಿಚ್ ಮತ್ತು ಪರಿಸ್ಥಿತಿಗಳನ್ನು ಪರಿಗಣಿಸಿ, ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಪಿನ್ನರ್‌ಗಳಿಗೆ ಸ್ಥಾನ ನೀಡಿದೆ ಮತ್ತು ಸ್ಪಿನ್ ಆಡುವ ಬ್ಯಾಟ್ಸ್‌ಮನ್‌ಗಳಿಗೆ ಆದ್ಯತೆ ನೀಡಿದೆ. ಈ ಕಾರಣದಿಂದಾಗಿ ತೇಜ್‌ನರೈನ್ ಚಂದ್ರಪಾಲ್ ಒಂದೂವರೆ ವರ್ಷಗಳ ನಂತರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದೇ ಸಮಯದಲ್ಲಿ, 13 ಟೆಸ್ಟ್‌ಗಳನ್ನು ಆಡಿರುವ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಅಲಿಕ್ ಅಥಾನಾಜ್ ಕೂಡ ಜನವರಿ 2025 ರ ನಂತರ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರಲ್ಲದೆ, ಸ್ಪಿನ್ನರ್ ಖಾರಿ ಪಿಯರೆ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್ (ಉಪನಾಯಕ), ಕೆವೆಲಾನ್ ಆಂಡರ್ಸನ್, ಅಲಿಕ್ ಅಥಾನಾಜ್, ಜಾನ್ ಕ್ಯಾಂಪ್ಬೆಲ್, ತೇಜ್‌ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ ಮತ್ತು ಜೇಡನ್ ಸೀಲ್ಸ್.

ಟೆಸ್ಟ್ ಸರಣಿ ವೇಳಾಪಟ್ಟಿ

  • ಅಕ್ಟೋಬರ್ 2-6 – ಮೊದಲ ಟೆಸ್ಟ್, ಅಹಮದಾಬಾದ್
  • ಅಕ್ಟೋಬರ್ 10-14 – 2ನೇ ಟೆಸ್ಟ್, ನವದೆಹಲಿ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Wed, 17 September 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ