IND vs WI: 100ನೇ ಟಿ20 ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ; ಏಕದಿನದೊಂದಿಗೆ ಟಿ20 ಸರಣಿಯೂ ಭಾರತದ ಪಾಲು

IND vs WI: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ (52) ಮತ್ತು ರಿಷಬ್ ಪಂತ್ (52) ಅವರ ಅಮೋಘ ಇನ್ನಿಂಗ್ಸ್‌ನ ನಂತರ ಭಾರತ ಕ್ರಿಕೆಟ್ ತಂಡವು ಬೌಲರ್‌ಗಳ ಬಲದಿಂದ ವೆಸ್ಟ್ ಇಂಡೀಸ್ ತಂಡಕ್ಕೆ ಸೋಲುಣಿಸಿದೆ.

IND vs WI: 100ನೇ ಟಿ20 ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ; ಏಕದಿನದೊಂದಿಗೆ ಟಿ20 ಸರಣಿಯೂ ಭಾರತದ ಪಾಲು
ಟೀಂ ಇಂಡಿಯಾ
Follow us
| Updated By: ಪೃಥ್ವಿಶಂಕರ

Updated on: Feb 18, 2022 | 11:05 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli)(52) ಮತ್ತು ರಿಷಬ್ ಪಂತ್ (Rishabh Pant)(52) ಅವರ ಅಮೋಘ ಇನ್ನಿಂಗ್ಸ್‌ನ ನಂತರ ಭಾರತ ಕ್ರಿಕೆಟ್ ತಂಡವು ಬೌಲರ್‌ಗಳ ಬಲದಿಂದ ವೆಸ್ಟ್ ಇಂಡೀಸ್ (West Indies Cricket Team) ತಂಡಕ್ಕೆ ಸೋಲುಣಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಸಾಕಷ್ಟು ಪ್ರಯತ್ನದ ಬಳಿಕ ವಿಂಡೀಸ್ ತಂಡ ಮೂರು ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಶಕ್ತವಾಯಿತು. ನಿಕೋಲಸ್ ಪೂರನ್ (62) ಮತ್ತು ರೋವ್‌ಮನ್ ಪೊವೆಲ್ (ಅಜೇಯ 68) ಪಂದ್ಯವನ್ನು ಗೆಲ್ಲಿಸಲು ಪ್ರಯತ್ನಿಸಿದರು ಆದರೆ ಅದು ಸಾಧ್ಯವಾಗಲಿಲ್ಲ.

ಕೊನೆಯ ಎರಡು ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ ಗೆಲುವಿಗೆ 29 ರನ್‌ಗಳ ಅಗತ್ಯವಿತ್ತು. ನಿಕೋಲಸ್ ಪೂರನ್ ಮತ್ತು ಪೊವೆಲ್ ವಿಕೆಟ್‌ನಲ್ಲಿದ್ದಾಗ ಇದು ಸಾಧ್ಯ ಎಂದು ತೋರುತ್ತಿತ್ತು. ಭುವನೇಶ್ವರ್ ಕುಮಾರ್ ಅವರು 19ನೇ ಓವರ್‌ನ ಮೂರನೇ ಎಸೆತದಲ್ಲಿ ನಿಕೋಲಸ್ ಪೂರನ್ ಅವರ ಇನ್ನಿಂಗ್ಸ್ ಅನ್ನು ಅಂತ್ಯಗೊಳಿಸಿದರು. ಅವರ ಕ್ಯಾಚ್ ಅನ್ನು ರವಿ ಬಿಷ್ಣೋಯ್ ಹಿಡಿದರು. ನಿಕೋಲ್ಸ್ 41 ಎಸೆತಗಳನ್ನು ಎದುರಿಸಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಇಲ್ಲಿಂದ ಪಂದ್ಯ ತಿರುವು ಪಡೆಯಿತು. ಕೊನೆಯ ಓವರ್‌ನಲ್ಲಿ ವೆಸ್ಟ್‌ ಇಂಡೀಸ್‌ಗೆ ಗೆಲ್ಲಲು 25 ರನ್‌ಗಳ ಅವಶ್ಯಕತೆಯಿದ್ದು ಅದನ್ನು ಮಾಡಲು ಸಾಧ್ಯವಾಗಲಿಲ್ಲ.

ಟಾಸ್ ಸೋತ ಭಾರತ

ಟಾಸ್ ಸೋತು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಪವರ್‌ಪ್ಲೇಯಲ್ಲಿ ಒಂದು ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿ ಉತ್ತಮ ಆರಂಭ ಪಡೆದಿತ್ತು. ಈ ವೇಳೆ ಶೆಲ್ಡನ್ ಕಾಟ್ರೆಲ್ ಅವರ ಮೊದಲ ಓವರ್​ನಲ್ಲೇ ಆರಂಭಿಕ ಇಶಾನ್ ಕಿಶನ್ (2) ಬಲಿಯಾದರು. ಇದರ ನಂತರ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪವರ್‌ಪ್ಲೇ ಉದ್ದಕ್ಕೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಇಬ್ಬರೂ ವೇಗದಲ್ಲಿ ರನ್ ಸೇರಿಸಿದರು.

ಆದರೆ ಮತ್ತೊಮ್ಮೆ ರೋಸ್ಟನ್ ಚೇಸ್ ಭಾರತಕ್ಕೆ ಮಾರಕವಾಗಿ ಪರಿಣಮಿಸಿದರು. ಅವರು ಇನ್ನಿಂಗ್ಸ್‌ನ 8 ನೇ ಓವರ್‌ನಲ್ಲಿ ನಾಯಕ ರೋಹಿತ್ (18) ಅವರನ್ನು ಔಟ್ ಮಾಡಿದರು. ಇಬ್ಬರ ನಡುವಿನ 36 ಎಸೆತಗಳಲ್ಲಿ 49 ರನ್‌ಗಳ ಪಾಲುದಾರಿಕೆಯನ್ನು ಕೊನೆಗೊಳಿಸಿದರು. ಭಾರತದ ಸ್ಕೋರ್ ಎರಡು ವಿಕೆಟ್ ನಷ್ಟಕ್ಕೆ 59 ರನ್ ಆಯಿತು. ನಾಲ್ಕನೇ ಕ್ರಮಾಂಕದಲ್ಲಿ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್, ಕೊಹ್ಲಿ ಜೊತೆಗೂಡಿ ಇನ್ನಿಂಗ್ಸ್ ಅನ್ನು ಮುನ್ನಡೆಸಿದರು. ಅವರು ಮೊದಲ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಉತ್ತಮವಾಗಿ ಪ್ರಾರಂಭಿಸಿದರು, ಆದರೆ ಬೇಗನೆ ಔಟ್ ಆದರು. 10 ಓವರ್‌ಗಳಲ್ಲಿ ಭಾರತ ಮೂರು ವಿಕೆಟ್‌ಗೆ 77 ರನ್ ಗಳಿಸಿತ್ತು.

ಪಂತ್ ಮತ್ತು ಕೊಹ್ಲಿ ಜೊತೆಯಾಟ

ಐದನೇ ಸ್ಥಾನಕ್ಕೆ ಬಂದ ಪಂತ್ ಕೊಹ್ಲಿಗೆ ಬೆಂಬಲ ನೀಡಿದರು. ಇದೇ ವೇಳೆ ಕೊಹ್ಲಿ 39 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಆದರೆ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 41 ಎಸೆತಗಳಲ್ಲಿ 52 ರನ್ ಗಳಿಸಿ, ನಂತರದ ಎಸೆತದಲ್ಲಿ ಬೌಲ್ಡ್ ಆದರು. ಇದು ಇಬ್ಬರ ನಡುವಿನ 23 ಎಸೆತಗಳಲ್ಲಿ 34 ರನ್‌ಗಳ ಪಾಲುದಾರಿಕೆಯನ್ನು ಕೊನೆಗೊಳಿಸಿತು. 14 ಓವರ್‌ಗಳ ನಂತರ ಭಾರತದ ಸ್ಕೋರ್ ನಾಲ್ಕು ವಿಕೆಟ್ ನಷ್ಟಕ್ಕೆ 110 ರನ್ ಆಗಿತ್ತು.

ಕೊಹ್ಲಿ ನಂತರ ವೆಂಕಟೇಶ್ ಅಯ್ಯರ್ ಜೊತೆಯಾಟ

ಮೈದಾನದಲ್ಲಿ ಪಂತ್ ಮತ್ತು ವೆಂಕಟೇಶ್ ಅಯ್ಯರ್ ಜೋಡಿ ಉಪಸ್ಥಿತರಿದ್ದರು. ಮಧ್ಯಮ ಓವರ್‌ಗಳಲ್ಲಿ ಇಬ್ಬರೂ ಕೂಡಿ ಹಲವು ಬೌಂಡರಿಗಳನ್ನು ಗಳಿಸಿದರು. ಇಬ್ಬರೂ ವೆಸ್ಟ್ ಇಂಡೀಸ್ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದರು ಮತ್ತು ಅತ್ಯಂತ ವೇಗವಾಗಿ ಬ್ಯಾಟಿಂಗ್ ಮಾಡಿದರು. ಭಾರತ 18 ಓವರ್‌ಗಳ ನಂತರ ನಾಲ್ಕು ವಿಕೆಟ್‌ಗಳ ನಷ್ಟಕ್ಕೆ 164 ರನ್ ಗಳಿಸಿತು. ಇವರಿಬ್ಬರು ಜೊತೆಯಾಗಿ ಕೊನೆಯ ಎರಡು ಓವರ್‌ಗಳಲ್ಲಿ ಭಾರತವನ್ನು ದೊಡ್ಡ ಸ್ಕೋರ್‌ನತ್ತ ಮುನ್ನಡೆಸಿದರು.

19ನೇ ಓವರ್‌ನ ಮೊದಲ ಎಸೆತದಲ್ಲಿ ಪಂತ್ ಸಿಕ್ಸರ್ ಮತ್ತು ಬೌಂಡರಿ ಬಾರಿಸಿದರು. ಆ ಓವರ್‌ನಲ್ಲಿ 14 ರನ್‌ಗಳು ಬಂದವು. ರೊಮಾರಿಯೊ ಶೆಫರ್ಡ್ 20ನೇ ಓವರ್‌ನಲ್ಲಿ ಅಯ್ಯರ್ ಅವರನ್ನು ಬೌಲ್ಡ್ ಮಾಡಿದರು. ಅವರು 18 ಎಸೆತಗಳಲ್ಲಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 33 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಅಯ್ಯರ್ ಪಂತ್ ಜೊತೆ 35 ಎಸೆತಗಳಲ್ಲಿ 76 ರನ್ ಜೊತೆಯಾಟ ನಡೆಸಿದರು. ಪಂತ್ ಕೊನೆಯ ಓವರ್‌ನಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದರು, ಇದಕ್ಕಾಗಿ ಅವರು 27 ಎಸೆತಗಳನ್ನು ತೆಗೆದುಕೊಂಡರು. ಪಂತ್ 28 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 52 ರನ್ ಗಳಿಸಿ ಅಜೇಯರಾಗಿ ಉಳಿದರು.

ಇದನ್ನೂ ಓದಿ:IND vs WI: ರೋಹಿತ್ ಪಾಠ ಕೆಲಸ ಮಾಡಲಿಲ್ಲ! ಆರಂಭಿಕರಾಗಿ ಮತ್ತೊಮ್ಮೆ ವಿಫಲರಾದ ಇಶಾನ್ ಕಿಶನ್

ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ