India vs West Indies: ವೆಸ್ಟ್​ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ: ಇಲ್ಲಿದೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ

India’s Squad For West Indies Series: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗೆ ಸಜ್ಜಾಗಬೇಕಿದೆ. ಭಾರತ ತಂಡ ತವರಿನಲ್ಲಿ ಕೆರಿಬಿಯನ್ನರ್ ವಿರುದ್ಧ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ.

India vs West Indies: ವೆಸ್ಟ್​ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ: ಇಲ್ಲಿದೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ
india vs west indies
Follow us
TV9 Web
| Updated By: Vinay Bhat

Updated on: Jan 25, 2022 | 10:30 AM

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಹೀನಾಯ ಪ್ರದರ್ಶನ ನೀಡಿರುವ ಭಾರತ ಕ್ರಿಕೆಟ್ ತಂಡ (Indian Cricket Team) ಇದೀಗ ತವರಿಗೆ ಮರಳುತ್ತಿದೆ. ಈ ಸರಣಿ ಸೋಲಿನ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗೆ ಸಜ್ಜಾಗಬೇಕಿದೆ. ಭಾರತ ತಂಡ ತವರಿನಲ್ಲಿ ಕೆರಿಬಿಯನ್ನರ್ ವಿರುದ್ಧ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ. ಇದೇ ಫೆಬ್ರವರಿ 6 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಿಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಇನ್ನೂ ಪ್ರಕಟ ಮಾಡಿಲ್ಲ. ಈ ತಿಂಗಳ ಅಂತ್ಯದಲ್ಲಿ 15 ಆಟಗಾರರ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಕೊರೊನಾ ವೈರಸ್‌ನ ಆತಂಕದ ಕಾರಣದಿಂದಾಗ ಆರು ತಾಣಗಳಲ್ಲಿ ಸರಣಿಯನ್ನು ನಡೆಸುವುದು ಸೂಕ್ತವಲ್ಲ ಎಂದು ಬಿಸಿಸಿಐ ನಿರ್ಧರಿಸಿ ಬದಲಾವನೆಯನ್ನು ಮಾಡಿಕೊಂಡಿದೆ. ಹೀಗಾಗಿ ಕೊಲ್ಕತ್ತಾ ಹಾಗೂ ಅಹ್ಮದಾಬಾದ್‌ನಲ್ಲಿ ಏಕದಿನ ಹಾಗೂ ಟಿ20 ಸರಣಿಯ ಎಲ್ಲಾ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ಆಯೋಜನೆಯಾಗಲಿದೆ.

ಈ ಸರಣಿಯ ಮೂರು ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್‌ ಪಟೇಲ್‌ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್‌ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.

ಇಂಜುರಿಯಿಂದ ಸಂಪೂರ್ಣ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಕಮ್​ಬ್ಯಾಕ್ ಮಾಡಲಿದ್ದಾರೆ. ಈ ಬಗ್ಗೆ ಬಿಸಿಸಿಐ ಮೂಲಗಳು ಮಾಹಿತಿ ನೀಡಿದ್ದು ರೋಹಿತ್ ಶರ್ಮಾ ಬೆಂಗಳೂರಿನ ಎನ್‌ಸಿಎನಲ್ಲಿ ಅದ್ಭುತವಾಗಿ ಚೇತರಿಕೆ ಕಾಣುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರು ಲಭ್ಯವಾಗುವ ಸಾಧ್ಯತೆಯಿದೆ. ಈ ಸರಣಿಗೆ ಕನಿಷ್ಠ ಎರಡು ವಾರಗಳ ಅಂತರವಿರುವುದರಿಂದ ಆ ವೇಳೆಗೆ ರೋಹಿತ್ ಸಂಪೂರ್ಣವಾಗಿ ಫಿಟ್ ಆಗಿರಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.

ಜೊತೆಗೆ ಕೆಲ ಹೊಸ ಮುಖಗಳ ಪರಿಚಯ ಆಗುವ ಸಾಧ್ಯತೆ ಕೂಡ ಇದೆ. ಮುಂದಿನ ದಿನಗಳಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಇರುವ ಕಾರಣ ಈಗಿನಿಂದಲೇ ಇದಕ್ಕೆ ತಯಾರಿ ಮಾಡುವತ್ತ ಮ್ಯಾನೇಜ್ಮೆಂಟ್ ಚಿತ್ತನೆಟ್ಟಿದೆ. ಪ್ರಮುಖವಾಗಿ ಪೃಥ್ವಿ ಶಾ ಏಕದಿನ ಅಥವಾ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಹಾಗೆಯೆ ರುತುರಾಜ್ ಗಾಯಕ್ವಾಡ್ ಕೂಡ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಬಹುದು. ರವೀಂದ್ರ ಜಡೇಜಾ ತಂಡ ಸೇರಿಕೊಳ್ಳಲಿದ್ದು ಪ್ರಮುಖ ಹಿರಿಯ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್​ಗೆ ವಿಶ್ರಾಂತಿ ನೀಡಿದರೆ ಅಚ್ಚರಿ ಪಡಬೇಕಿಲ್ಲ. ಹಾಗಾದ್ರೆ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ 15 ಆಟಗಾರರು ಯಾರು ಎಂಬುದನ್ನು ನೋಡೋಣ.

ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯುಜ್ವಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ ಮೊಹಮ್ಮದ್ ಶಮಿ.

Virat Kohli: ವಾಮಿಕ ಫೋಟೋ ವೈರಲ್ ಆದ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ: ಏನಂದ್ರು?

Happy Birthday Cheteshwar Pujara: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹುಟ್ಟುಹಬ್ಬ: ಇಲ್ಲಿದೆ ಇವರ ಮರೆಯಲಾಗದ ಇನ್ನಿಂಗ್ಸ್

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್