IND vs WI: ಇಂದು ಭಾರತ- ವೆಸ್ಟ್ ಇಂಡೀಸ್ ಅಂತಿಮ ಏಕದಿನ: ಸರಣಿ ಕ್ಲೀನ್ಸ್ವೀಪ್ ಮಾಡುತ್ತಾ ರೋಹಿತ್ ಪಡೆ?
India vs West Indies, 3rd ODI: ಎರಡೂ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದು ಬೀಗಿದ್ದು ಬಲಿಷ್ಠವಾಗಿದೆ. ಕಳೆದ ಪಂದ್ಯದಲ್ಲಿ ಬೌಲರ್ಗಳ ಅದ್ಭುತ ಪ್ರದರ್ಶನದಿಂದ ಜಯ ಸಾಧಿಸಿತ್ತು. ಬ್ಯಾಟಿಂಗ್ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಹೀಗಾಗಿ ಈ ಕದನದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಈ ರೋಚಕ ಕದನಕ್ಕೆ ಸಾಕ್ಷಿಯಾಗಲಿದ್ದು, ಟೀಮ್ ಇಂಡಿಯಾ ಸರಣಿ ಕ್ಲೀನ್ಸ್ವೀಪ್ ಮಾಡುವತ್ತ ಚಿತ್ತ ನೆಟ್ಟಿದೆ. ಇತ್ತ ಪ್ರವಾಸಿ ಕೆರಿಬಿಯನ್ನರು ಕನಿಷ್ಠ ಒಂದು ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್ನಲ್ಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್ಗಳಿಂದ ಗೆದ್ದರೆ, ಬುಧವಾರ ಮುಕ್ತಾಯಗೊಂಡ ಎರಡನೇ ಕದನಲ್ಲಿ 44 ರನ್ಗಳಿಂದ ಜಯಿಸಿತು. ಹೀಗೆ ಎರಡೂ ಪಂದ್ಯದಲ್ಲಿ ರೋಹಿತ್ (Rohit Sharma) ಪಡೆ ಗೆದ್ದು ಬೀಗಿದ್ದು ಬಲಿಷ್ಠವಾಗಿದೆ. ಕಳೆದ ಪಂದ್ಯದಲ್ಲಿ ಬೌಲರ್ಗಳ ಅದ್ಭುತ ಪ್ರದರ್ಶನದಿಂದ ಜಯ ಸಾಧಿಸಿತ್ತು. ಬ್ಯಾಟಿಂಗ್ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಹೀಗಾಗಿ ಈ ಕದನದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದರೆ ಎರಡನೇ ಕದನದಲ್ಲಿ ಬೇಗನೆ ನಿರ್ಗಮಿಸಿದ್ದರು. ಹೀಗಾಗಿ ಇವರಿಂದ ತಾಳ್ಮೆಯ ಆಟವನ್ನು ನಿರೀಕ್ಷಿಸಲಾಗಿದೆ. ರಿಷಭ್ ಪಂತ್ ಓಪನರ್ ಆಗಿ ವಿಫಲರಾಗಿದ್ದಾರೆ. ಅವರನ್ನು ಫಿನಿಶರ್ ಆಗಿ ಕಣಕ್ಕಿಳಿಸುತ್ತಾರ ಎಂಬುದು ನೋಡಬೇಕಿದೆ. ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ ಬರುತ್ತಿಲ್ಲ ಎಂಬುದು ಬೇಸರದ ಸಂಗತಿ. ಕೆಎಲ್ ರಾಹುಲ್ ತಂಡಕ್ಕೆ ಕಮ್ಬ್ಯಾಕ್ ಮಾಡಿರುವುದು ಬಲ ಹೆಚ್ಚಿದೆ. ಸೂರ್ಯಕುಮಾರ್ ಯಾದವ್ ಕೂಡ ಬೊಂಬಾಟ್ ಫಾರ್ಮ್ನಲ್ಲಿದ್ದಾರೆ.
ಆಲ್ರೌಂಡರ್ ದೀಪಕ್ ಹೂಡ ಕಡೆಯಿಂದ ಸಾಧಾರಣ ಪ್ರದರ್ಶನ ಬರುತ್ತಿದೆ. ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಇಂದು ಒಂದು ದೊಡ್ಡ ಇನ್ನಿಂಗ್ಸ್ ಆಡಬೇಕಿದೆ. ವಾಷಿಂಗ್ಟನ್ ಸುಂದರ್ ಬೌಲಿಂಗ್ನಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಶಾರ್ದುಲ್ ಠಾಕೂರ್ ಆಟ ಬ್ಯಾಟಿಂಗ್ – ಬೌಲಿಂಗ್ನಲ್ಲಿ ನಡೆಯುತ್ತಿಲ್ಲ. ಪ್ರಸಿದ್ಧ್ ಕೃಷ್ಣ ಬಿಟ್ಟರೆ ವೇಗಿಗಳು ವಿಕೆಟ್ ಕೀಳುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದಿನ ಪಂದ್ಯಕ್ಕೆ ಮುಖ್ಯ ಬದಲಾವಣೆ ಖಚಿತ.
ಇತ್ತ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರೊನ್ ಪೊಲಾರ್ಡ್ ಗಾಯದಿಂದ ಸಂಪೂರ್ಣ ಗುಣಮುಖರಾಗಿದ್ದಾರ ಎಂಬ ಬಗ್ಗೆ ಖಚಿತ ಮಾಹಿತಿಯಿಲ್ಲ. ಹೀಗಾಗಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಲಿದ್ದಾರೆ. ಓಡೆನ್ ಸ್ಮಿತ್ಗೆ ಮತ್ತೊಂದು ಅವಕಾಶ ಸಿಗಲಿದೆ. ಸ್ಟಾರ್ ಬ್ಯಾಟರ್ಗಳಾದ ಬ್ರೆಂಡನ್ ಕಿಂಗ್, ಶಾಯ್ ಹೋಪ್, ಡ್ಯಾರೆನ್ ಬ್ರಾವೋ ಪದೇ ಪದೇ ವೈಫಲ್ಯ ಅನುಭವಿಸುತ್ತಿರುವುದು ತಂಡಕ್ಕೆ ಹಿನ್ನಡೆಯಾಗುತ್ತಿದೆ. ಬೌಲಿಂಗ್ನಲ್ಲೂ ಸಂಘಟಿತ ಪ್ರದರ್ಶನ ಬರುತ್ತಿಲ್ಲ.
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ. ಆನ್ಲೈನ್ನಲ್ಲಾದರೆ ಡಿಸ್ನಿ+ ಹಾಟ್ಸ್ಟಾರ್ನಲ್ಲಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್(ವಿ.ಕೀ), ದೀಪಕ್ ಚಹರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಆವೇಶ್ ಖಾನ್, ಇಶಾನ್ ಕಿಶನ್, ಶಾರುಖ್ ಖಾನ್, ಮಯಾಂಕ್ ಅಗರ್ವಾಲ್.
ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.
IPL Auction 2022: ಈ ಐವರು ಆಲ್ರೌಂಡರ್ಗಳನ್ನು ಖರೀದಿಸಲು ಜಿದ್ದಿಗೆ ಬೀಳಲಿವೆ ಎಲ್ಲಾ ಫ್ರಾಂಚೈಸಿಗಳು