ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಸೋತಿರುವ ಹರ್ಮನ್‌ಪ್ರೀತ್ ಪಡೆ ಇದೀಗ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲು ಸಿದ್ಧವಾಗಿದೆ. ಎರಡು ತಂಡಗಳ ನಡುವೆ ಮೊದಲ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಇದರ ನಂತರ ಉಭಯ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಈ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದ ಸ್ಟಾರ್ ಓಪನರ್ ಶೆಫಾಲಿ ವರ್ಮಾ ಅವರನ್ನು ಎರಡೂ ಸರಣಿಗಳಿಂದಲೂ ಕೈಬಿಡಲಾಗಿದೆ. ಹಾಗೆಯೇ ತಂಡದಲ್ಲಿ ಹೊಸ ಮುಖಗಳಿಗೂ ಅವಕಾಶ ನೀಡಲಾಗಿದೆ. ಉಳಿದಂತೆ ಸರಣಿಯ ವೇಳಾಪಟ್ಟಿ ಹಾಗೂ ನೇರ ಪ್ರಸಾರದ ವಿವರ ಇಂತಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ ಡಿಸೆಂಬರ್ 15 ರಿಂದ ಆರಂಭವಾಗಲಿದೆ.
ಭಾರತ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಪ್ರತಿಯೊಂದು ಪಂದ್ಯವೂ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಟೀಂ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಎಲ್ಲಾ ಪಂದ್ಯಗಳು ನವಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿವೆ.
ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ನೇರ ಪ್ರಸಾರವನ್ನು ನೀವು Sports18 ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.
ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ನೀವು Jio ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಆನಂದಿಸಬಹುದು.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ-20 ಸರಣಿಯು ಡಿಸೆಂಬರ್ 15 ರಿಂದ ಪ್ರಾರಂಭವಾಗಲಿದೆ. ಎರಡನೇ ಪಂದ್ಯ 17ರಂದು ಹಾಗೂ ಮೂರನೇ ಪಂದ್ಯ ಡಿಸೆಂಬರ್ 19ರಂದು ನಡೆಯಲಿದೆ. ಆ ಬಳಿಕ ಉಭಯ ತಂಡಗಳ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಈ ಸರಣಿಯ ಮೊದಲ ಪಂದ್ಯ ಡಿಸೆಂಬರ್ 22 ರಂದು ನಡೆಯಲ್ಲಿದ್ದು, ಎರಡನೇ ಪಂದ್ಯ 24 ರಂದು ಮತ್ತು ಕೊನೆಯ ಪಂದ್ಯ ಡಿಸೆಂಬರ್ 27 ರಂದು ನಡೆಯಲಿದೆ.
ಟಿ20 ಸರಣಿಗೆ ಟೀಂ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ನಂದಿನಿ ಕಶ್ಯಪ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್-ಕೀಪರ್), ಉಮಾ ಚೆಟ್ರಿ (ವಿಕೆಟ್-ಕೀಪರ್), ದೀಪ್ತಿ ಶರ್ಮಾ, ಸಜೀವನ್ ಸಜನ, ರಾಘ್ವಿ ಬಿಸ್ತ್, ರೇಣುಕಾ ಠಾಕೂರ್, ಪ್ರಿಯಾ ಮಿಶ್ರಾ, ಟಿಟಾಸ್ ಸಾಧು, ಸೈಮಾ ಠಾಕೋರ್, ಮಿನ್ನು ಮಣಿ, ರಾಧಾ ಯಾದವ್
ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಪ್ರತೀಕಾ ರಾವಲ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ರಿಚಾ ಘೋಷ್, ಉಮಾ ಛೆಟ್ರಿ, ತೇಜಲ್ ಹಸ್ಬ್ನಿಸ್, ದೀಪ್ತಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಟಿಟಾಸ್ ಸಾಧು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ