ಭಾರತದ 2ನೇ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?
India vs Western Australia 2nd Match: ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಆಡಿರಲಿಲ್ಲ. ಹೀಗಾಗಿ 2ನೇ ಪಂದ್ಯದಲ್ಲಿ ಈ ಇಬ್ಬರು ಸ್ಟಾರ್ ಆಟಗಾರರು ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
India vs Western Australia: ಟಿ20 ವಿಶ್ವಕಪ್ಗೂ ಮುನ್ನ ಭರ್ಜರಿ ತಯಾರಿಯಲ್ಲಿರುವ ಟೀಮ್ ಇಂಡಿಯಾ ನಾಳೆ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ 2ನೇ ಟಿ20 ಪಂದ್ಯವಾಡಲಿದೆ. ಮೊದಲ ಪಂದ್ಯದಲ್ಲಿ 13 ರನ್ಗಳಿಂದ ಜಯ ಸಾಧಿಸಿದ್ದ ಭಾರತ ತಂಡವು ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದೆ. ಹಾಗೆಯೇ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲೂ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಆಡಿರಲಿಲ್ಲ. ಹೀಗಾಗಿ 2ನೇ ಪಂದ್ಯದಲ್ಲಿ ಈ ಇಬ್ಬರು ಸ್ಟಾರ್ ಆಟಗಾರರು ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಭಾರತ (IND) ವೆಸ್ಟರ್ನ್ ಆಸ್ಟ್ರೇಲಿಯಾ XI (WAU-XI) ಪಂದ್ಯ ಯಾವಾಗ ನಡೆಯಲಿದೆ?
ಈ ಪಂದ್ಯವನ್ನು ಅಕ್ಟೋಬರ್ 13, ಗುರುವಾರ ಆಡಲಾಗುತ್ತಿದೆ.
ಎಲ್ಲಿ, ಎಷ್ಟು ಗಂಟೆಗೆ ಶುರುವಾಗಲಿದೆ?
ಈ ಪಂದ್ಯವು ಪರ್ತ್ನ ಡಬ್ಲ್ಯುಎಸಿಎ ಮೈದಾನದಲ್ಲಿ 11 ಗಂಟೆಯಿಂದ ಶುರುವಾಗಲಿದೆ.
ಯಾವ ಟಿವಿ ಚಾನೆಲ್‌ಗಳಲ್ಲಿ ನೇರ ಪ್ರಸಾರ ಇರಲಿವೆ?
ಈ ಪಂದ್ಯವು ಭಾರತದಲ್ಲಿ ಯಾವುದೇ ಚಾನೆಲ್‌ನಲ್ಲಿ ನೇರ ಪ್ರಸಾರ ಇರುವುದಿಲ್ಲ.
ಈ ಅಭ್ಯಾಸ ಪಂದ್ಯವನ್ನು ವೀಕ್ಷಿಸುವುದು ಹೇಗೆ?
ವೆಸ್ಟರ್ನ್ ಆಸ್ಟ್ರೇಲಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದ್ದು, ಈ ಮೂಲಕ ಪಂದ್ಯವನ್ನು ವೀಕ್ಷಿಸಬಹುದು.
ಭಾರತ ಸಂಭವನೀಯ ಪ್ಲೇಯಿಂಗ್: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಾಲ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್
ವೆಸ್ಟರ್ನ್ ಆಸ್ಟ್ರೇಲಿಯಾ ಸಂಭವನೀಯ ಪ್ಲೇಯಿಂಗ್ 11: ಡಿ ಆರ್ಸಿ ಶಾರ್ಟ್, ಆರನ್ ಹಾರ್ಡಿ, ಕ್ಯಾಮೆರಾನ್ ಬ್ಯಾಂಕ್ರಾಫ್ಟ್ , ಜೈ ರಿಚರ್ಡ್ಸನ್, ಆಂಡ್ರ್ಯೂ ಟೈ, ಜೇಸನ್ ಬೆಹ್ರೆಂಡ್ರಾಫ್, ಮ್ಯಾಥ್ಯೂ ಕೆಲ್ಲಿ, ನಿಕ್ ಹಾಬ್ಸನ್, ಆಷ್ಟನ್ ಟರ್ನರ್(ನಾಯಕ), ಸ್ಯಾಮ್ ಫಾನ್ನಿಂಗ್, ಹ್ಯಾಮಿಶ್ ಮೆಕೆಂಜಿ