AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಚೊಚ್ಚಲ ಟಿ20 ಶತಕ; ಭಾರತಕ್ಕೆ 8 ವಿಕೆಟ್ ಜಯ

ನಾಯಕ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ T20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ 171 ರನ್ ಗಳ ಗುರಿ ಬೆನ್ನಟ್ಟಿದ ಭಾರತ, ಅಯ್ಯರ್ (102) ಮತ್ತು ಇಶಾನ್ ಕಿಶನ್ (37*) ಅವರ ಶತಕದ ಜೊತೆಯಾಟದಿಂದ 14.4 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದು ಅಯ್ಯರ್ ಅವರ ಚೊಚ್ಚಲ T20I ಶತಕ.

ಶ್ರೇಯಸ್ ಅಯ್ಯರ್ ಚೊಚ್ಚಲ ಟಿ20 ಶತಕ; ಭಾರತಕ್ಕೆ 8 ವಿಕೆಟ್ ಜಯ
ಟೀಂ ಇಂಡಿಯಾImage Credit source: BCCI X
ಪೃಥ್ವಿಶಂಕರ
|

Updated on: Oct 06, 2026 | 10:48 PM

Share

ನಾಯಕ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕದ ನೆರವಿನಿಂದ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 171 ರನ್ ಗಳಿಸಿ ಟೀಂ ಇಂಡಿಯಾಕ್ಕೆ ಸಾಧಾರಣ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ನಾಯಕ ಅಯ್ಯರ್ ಮತ್ತು ಇಶಾನ್ ಕಿಶನ್ ಶತಕದ ಪಾಲುದಾರಿಕೆ ನಡೆಸಿ ತಂಡವನ್ನು 14.4 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿದರು. ಇದರೊಂದಿಗೆ, ಟೀಂ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

171 ರನ್​ಗಳಿಗೆ ವಿಂಡೀಸ್ ಆಲೌಟ್

ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 19.1 ಓವರ್‌ಗಳಲ್ಲಿ 171 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು. ತಂಡದ ಪರ ಶಾಯ್ ಹೋಪ್ 56 ಮತ್ತು ಶೆರ್ಫೇನ್ ರುದರ್ಫೋರ್ಡ್ 52 ರನ್​ಗಳ ಇನ್ನಿಂಗ್ಸ್ ಆಡಿದರು. ಭಾರತದ ಪರ ನಮನ್ ಧೀರ್ ನಾಲ್ಕು ಓವರ್‌ಗಳಲ್ಲಿ 31 ರನ್‌ಗಳಿಗೆ ಮೂರು ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು, ಅರ್ಷದೀಪ್ ಸಿಂಗ್ ಮತ್ತು ಮಯಾಂಕ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಭಾರತಕ್ಕೆ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅಭಿಷೇಕ್ ಮತ್ತು ಸಂಜು ಸ್ಯಾಮ್ಸನ್ ಬೇಗನೇ ವಿಕೆಟ್ ಒಪ್ಪಿಸಿದರು. ಆದರೆ ಆ ಬಳಿಕ ಜೊತೆಯಾದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಅಯ್ಯರ್ ಮತ್ತು ಇಶಾನ್ ಕಿಶನ್ ಕೇವಲ 67 ಎಸೆತಗಳಲ್ಲಿ 137 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು, ಅದರಲ್ಲಿ ಅಯ್ಯರ್ 102 ರನ್‌ಗಳ ಕೊಡುಗೆ ನೀಡಿದರು.

ಜಿಂಬಾಬ್ವೆ ವಿರುದ್ಧದ ಟಿ20, ಏಕದಿನ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ

ಅಯ್ಯರ್ ಅಬ್ಬರದ ಶತಕ

ವಿಶೇಷವಾಗಿ ಆಕ್ರಮಣಕಾರಿಯಾದ ಅಯ್ಯರ್ 28 ಎಸೆತಗಳಲ್ಲಿ ಎಂಟು ಬೌಂಡರಿಗಳ ಸಹಾಯದಿಂದ ಅರ್ಧಶತಕ ತಲುಪಿದರು. ನಂತರ ಮುಂದಿನ 14 ಎಸೆತಗಳಲ್ಲಿ ತಮ್ಮ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಚೊಚ್ಚಲ ಶತಕವನ್ನು ಪೂರೈಸಿದರು. ಅರ್ಧಶತಕದ ನಂತರ, ಅಯ್ಯರ್ ಎರಡು ಬೌಂಡರಿ ಮತ್ತು ಆರು ಸಿಕ್ಸರ್‌ಗಳನ್ನು ಬಾರಿಸಿದರು. ಶತಕವನ್ನು ತಲುಪುವ ಮೊದಲು ಆರು ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ಅಯ್ಯರ್‌ಗೆ ಉತ್ತಮ ಬೆಂಬಲ ನೀಡಿದ ಇಶಾನ್ ಕಿಶನ್, ಅಜೇಯ 37 ರನ್‌ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್