India vs Zimbabwe 1st ODI: ಟೀಮ್ ಇಂಡಿಯಾಗೆ ಸಾಧಾರಣ ಸವಾಲು ನೀಡಿದ ಜಿಂಬಾಬ್ವೆ

India vs Zimbabwe, 1st ODI: ಟೀಮ್ ಇಂಡಿಯಾ ಪರ ದೀಪಕ್ ಚಹರ್, ಪ್ರಸಿದ್ದ್ ಕೃಷ್ಣ, ಅಕ್ಷರ್ ಪಟೇಲ್ ತಲಾ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿ ಮಿಂಚಿದರು.

India vs Zimbabwe 1st ODI: ಟೀಮ್ ಇಂಡಿಯಾಗೆ ಸಾಧಾರಣ ಸವಾಲು ನೀಡಿದ ಜಿಂಬಾಬ್ವೆ
India vs Zimbabwe
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 18, 2022 | 4:21 PM

India vs Zimbabwe: ಹರಾರೆಯ ಸ್ಪೋಟ್ಸ್​ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಕೇವಲ 189 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನಾಯಕ ಕೆಎಲ್ ರಾಹುಲ್ ಅವರ ನಿರ್ಧಾರವನ್ನು ಸಮರ್ಥಿಸುವಂತೆ ಟೀಮ್ ಇಂಡಿಯಾ ವೇಗಿಗಳು ದಾಳಿ ಸಂಘಟಿಸಿದ್ದರು. ಇಬ್ಬರು ಆರಂಭಿಕರನ್ನು ಬೇಗನೆ ಪೆವಿಲಿಯನ್​ಗೆ ಕಳುಹಿಸಿದ ದೀಪಕ್ ಚಹರ್ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಸೀನ್ ವಿಲಿಯಮ್ಸ್ (1) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಮೂರನೇ ವಿಕೆಟ್ ಉರುಳಿಸಿದರು.

11ನೇ ಓವರ್​ನಲ್ಲಿ ಮತ್ತೆ ಬೌಲಿಂಗ್​ಗೆ ಮರಳಿದ ದೀಪಕ್ ಚಹರ್ ವೆಸ್ಲಿ ಮಧುವರೆ (5) ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮತ್ತೊಮ್ಮೆ ಜಿಂಬಾಬ್ವೆಗೆ ಆಘಾತ ನೀಡಿದರು. ಇನ್ನು ಡೇಂಜರಸ್ ಸಿಂಕಂದರ್ ರಾಜಾ (12) ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಕೇವಲ 66 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಜಿಂಬಾಬ್ವೆಗೆ ನಾಯಕ ರೆಗಿಸ್ ಚಕಬ್ವಾ ಆಸರೆಯಾದರು. 35 ರನ್​ಗಳಿಸಿ ತಂಡಕ್ಕೆ ಆಸರೆಯಾಗಿದ್ದ ಚಕಬ್ವಾ ಕೊನೆಗೂ ಅಕ್ಷರ್ ಪಟೇಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಪ್ರಸಿದ್ಧ್ ಕೃಷ್ಣ ರಿಯಾನ್ ಬರ್ಲ್ ವಿಕೆಟ್ ಪಡೆದರೆ, ಲೂಕ್​ರನ್ನು ಅಕ್ಷರ್ ಪಟೇಲ್ ಔಟ್ ಮಾಡಿದರು.

ಪರಿಣಾಮ 110 ರನ್​ಗಳಿಗೆ ಜಿಂಬಾಬ್ವೆ ತಂಡವು 8 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಯಾದ ರಿಚರ್ಡ್ ಹಾಗೂ ಬ್ರಾಡ್ ಇವನ್ಸ್ ಅರ್ಧಶತಕದ ಜೊತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಅಲ್ಲದೆ ಅತ್ಯಮೂಲ್ಯ ಕಾಣಿಕೆ ನೀಡುವ ತಂಡದ ಮೊತ್ತವನ್ನು 180ರ ಗಡಿದಾಟಿಸಿದರು. ಈ ಹಂತದಲ್ಲಿ 34 ರನ್​ ಬಾರಿಸಿದ ರಿಚರ್ಡ್​ರನ್ನು ಔಟ್ ಮಾಡುವಲ್ಲಿ ಕೊನೆಗೂ ಪ್ರಸಿದ್ಧ್ ಕೃಷ್ಣ ಯಶಸ್ವಿಯಾದರು. ಇದರ ಬೆನ್ನಲ್ಲೇ ವಿಕ್ಟರ್ (8) ವಿಕೆಟ್ ಪಡೆದ ಅಕ್ಷರ್ ಪಟೇಲ್ ಜಿಂಬಾಬ್ವೆ ತಂಡವನ್ನು 40.3 ಓವರ್​ಗಳಲ್ಲಿ 189 ರನ್​ಗಳಿಗೆ ಆಲೌಟ್ ಮಾಡಿದರು. ಮತ್ತೊಂದೆಡೆ 29 ಎಸೆತಗಳಲ್ಲಿ 33 ರನ್ ಬಾರಿಸಿದ ಬ್ರಾಡ್ ಇವನ್ಸ್ ಅಜೇಯರಾಗಿ ಉಳಿದರು.

ಟೀಮ್ ಇಂಡಿಯಾ ಪರ ದೀಪಕ್ ಚಹರ್, ಪ್ರಸಿದ್ದ್ ಕೃಷ್ಣ, ಅಕ್ಷರ್ ಪಟೇಲ್ ತಲಾ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿ ಮಿಂಚಿದರು.

ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷ =ರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

ಜಿಂಬಾಬ್ವೆ (ಪ್ಲೇಯಿಂಗ್ XI): ತಡಿವಾನಾಶೆ ಮರುಮಣಿ, ಇನೊಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ (ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ರಿಚರ್ಡ್ ನಾಗರವಾ

Published On - 4:17 pm, Thu, 18 August 22

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?