India vs Zimbabwe: ಹರಾರೆಯ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಕೇವಲ 189 ರನ್ಗಳಿಗೆ ಆಲೌಟ್ ಆಗಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನಾಯಕ ಕೆಎಲ್ ರಾಹುಲ್ ಅವರ ನಿರ್ಧಾರವನ್ನು ಸಮರ್ಥಿಸುವಂತೆ ಟೀಮ್ ಇಂಡಿಯಾ ವೇಗಿಗಳು ದಾಳಿ ಸಂಘಟಿಸಿದ್ದರು. ಇಬ್ಬರು ಆರಂಭಿಕರನ್ನು ಬೇಗನೆ ಪೆವಿಲಿಯನ್ಗೆ ಕಳುಹಿಸಿದ ದೀಪಕ್ ಚಹರ್ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಸೀನ್ ವಿಲಿಯಮ್ಸ್ (1) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಮೂರನೇ ವಿಕೆಟ್ ಉರುಳಿಸಿದರು.
11ನೇ ಓವರ್ನಲ್ಲಿ ಮತ್ತೆ ಬೌಲಿಂಗ್ಗೆ ಮರಳಿದ ದೀಪಕ್ ಚಹರ್ ವೆಸ್ಲಿ ಮಧುವರೆ (5) ಅವರನ್ನು ಎಲ್ಬಿ ಬಲೆಗೆ ಬೀಳಿಸಿ ಮತ್ತೊಮ್ಮೆ ಜಿಂಬಾಬ್ವೆಗೆ ಆಘಾತ ನೀಡಿದರು. ಇನ್ನು ಡೇಂಜರಸ್ ಸಿಂಕಂದರ್ ರಾಜಾ (12) ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು.
ಕೇವಲ 66 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಜಿಂಬಾಬ್ವೆಗೆ ನಾಯಕ ರೆಗಿಸ್ ಚಕಬ್ವಾ ಆಸರೆಯಾದರು. 35 ರನ್ಗಳಿಸಿ ತಂಡಕ್ಕೆ ಆಸರೆಯಾಗಿದ್ದ ಚಕಬ್ವಾ ಕೊನೆಗೂ ಅಕ್ಷರ್ ಪಟೇಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಪ್ರಸಿದ್ಧ್ ಕೃಷ್ಣ ರಿಯಾನ್ ಬರ್ಲ್ ವಿಕೆಟ್ ಪಡೆದರೆ, ಲೂಕ್ರನ್ನು ಅಕ್ಷರ್ ಪಟೇಲ್ ಔಟ್ ಮಾಡಿದರು.
ಪರಿಣಾಮ 110 ರನ್ಗಳಿಗೆ ಜಿಂಬಾಬ್ವೆ ತಂಡವು 8 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಯಾದ ರಿಚರ್ಡ್ ಹಾಗೂ ಬ್ರಾಡ್ ಇವನ್ಸ್ ಅರ್ಧಶತಕದ ಜೊತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಅಲ್ಲದೆ ಅತ್ಯಮೂಲ್ಯ ಕಾಣಿಕೆ ನೀಡುವ ತಂಡದ ಮೊತ್ತವನ್ನು 180ರ ಗಡಿದಾಟಿಸಿದರು. ಈ ಹಂತದಲ್ಲಿ 34 ರನ್ ಬಾರಿಸಿದ ರಿಚರ್ಡ್ರನ್ನು ಔಟ್ ಮಾಡುವಲ್ಲಿ ಕೊನೆಗೂ ಪ್ರಸಿದ್ಧ್ ಕೃಷ್ಣ ಯಶಸ್ವಿಯಾದರು. ಇದರ ಬೆನ್ನಲ್ಲೇ ವಿಕ್ಟರ್ (8) ವಿಕೆಟ್ ಪಡೆದ ಅಕ್ಷರ್ ಪಟೇಲ್ ಜಿಂಬಾಬ್ವೆ ತಂಡವನ್ನು 40.3 ಓವರ್ಗಳಲ್ಲಿ 189 ರನ್ಗಳಿಗೆ ಆಲೌಟ್ ಮಾಡಿದರು. ಮತ್ತೊಂದೆಡೆ 29 ಎಸೆತಗಳಲ್ಲಿ 33 ರನ್ ಬಾರಿಸಿದ ಬ್ರಾಡ್ ಇವನ್ಸ್ ಅಜೇಯರಾಗಿ ಉಳಿದರು.
For his bowling figures of 3/24 in 7.3 overs, @akshar2026 is our Top Performer from the first innings.
A look at his bowling summary here ??#ZIMvIND pic.twitter.com/xL6fmXFeny
— BCCI (@BCCI) August 18, 2022
ಟೀಮ್ ಇಂಡಿಯಾ ಪರ ದೀಪಕ್ ಚಹರ್, ಪ್ರಸಿದ್ದ್ ಕೃಷ್ಣ, ಅಕ್ಷರ್ ಪಟೇಲ್ ತಲಾ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿ ಮಿಂಚಿದರು.
ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷ =ರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಜಿಂಬಾಬ್ವೆ (ಪ್ಲೇಯಿಂಗ್ XI): ತಡಿವಾನಾಶೆ ಮರುಮಣಿ, ಇನೊಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ (ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ರಿಚರ್ಡ್ ನಾಗರವಾ
Published On - 4:17 pm, Thu, 18 August 22